Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 31:3 - ಕನ್ನಡ ಸಮಕಾಲಿಕ ಅನುವಾದ

3 ಈಜಿಪ್ಟಿನವರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮೂಳೆಮಾಂಸವೇ. ಹೀಗಿರುವುದರಿಂದ ಯೆಹೋವ ದೇವರು ತನ್ನ ಕೈಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯ ಪಡೆದವನೂ ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ. ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವಾದವುಗಳು. ಯೆಹೋವನು ತನ್ನ ಕೈ ಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯಪಡೆದವನು ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈಜಿಪ್ಟಿನವರು ಕೇವಲ ಮನುಷ್ಯರೇ ಹೊರತು ದೇವರಲ್ಲ. ಅವರ ಅಶ್ವಗಳು ಮೂಳೆಮಾಂಸವೇ ಹೊರತು ಆಧ್ಯಾತ್ಮಿಕ ದಿವ್ಯಶಕ್ತಿಯಲ್ಲ. ಸರ್ವೇಶ್ವರ ಕೈಯೆತ್ತುವಾಗ ಅದಕ್ಕೆ ವಿರುದ್ಧ ಸಹಾಯ ಮಾಡಿದ ಅವನು ಮುಗ್ಗರಿಸುವನು. ಆ ಸಹಾಯ ಪಡೆದ ಅವನು ಬಿದ್ದುಹೋಗುವನು. ಎಲ್ಲರೂ ಒಟ್ಟಿಗೆ ಅಳಿದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಮಾಂಸಮಯವೇ, ಆತ್ಮವಲ್ಲ; ಯೆಹೋವನು ಕೈಚಾಚುವಾಗ ಸಹಾಯ ಮಾಡಿದವನು ಮುಗ್ಗರಿಸುವನು, ಸಹಾಯಪಡೆದವನು ಬಿದ್ದು ಹೋಗುವನು, ಅಂತು ಎಲ್ಲರೂ ಒಟ್ಟಿಗೆ ಲಯವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈಜಿಪ್ಟಿನ ಜನರು ಮನುಷ್ಯಮಾತ್ರದವರೇ. ಅವರು ದೇವರಲ್ಲ. ಈಜಿಪ್ಟಿನ ಕುದುರೆಗಳು ಪ್ರಾಣಿಗಳಾಗಿವೆ. ಅವುಗಳು ಆತ್ಮವಲ್ಲ. ಯೆಹೋವನು ತನ್ನ ಕೈಯನ್ನು ಚಾಚುವಾಗ ಸಹಾಯ ಮಾಡುವವನು (ಈಜಿಪ್ಟ್) ಸೋಲುವನು. ಸಹಾಯ ಪಡೆದವನು (ಯೆಹೂದ) ಬೀಳುವನು. ಅವರೆಲ್ಲರೂ ಒಟ್ಟಿಗೆ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 31:3
25 ತಿಳಿವುಗಳ ಹೋಲಿಕೆ  

ಹೀಗಿರಲು ಕರ್ತದೇವರು ಅವರ ಯೌವನಸ್ಥರಲ್ಲಿ ಆನಂದಿಸುವುದಿಲ್ಲ. ಅವರ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಏಕೆಂದರೆ, ಪ್ರತಿಯೊಬ್ಬನು ಕಪಟಿಯೂ, ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದ್ದರಿಂದ ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು, “ನಾನು ದೇವರು,” ಎಂದು ಹೇಳುವೆಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರಪ್ರಾಣಿಯೇ;


ನೀನು ನನ್ನನ್ನು ಬಿಟ್ಟುಬಿಟ್ಟಿದ್ದೀ,” ಎಂದು ಯೆಹೋವ ದೇವರು ಹೇಳುತ್ತಾರೆ. “ನೀನು ಹಿಂಜಾರಿದೆ. ಆದ್ದರಿಂದ ನನ್ನ ಕೈಯನ್ನು ನಿನಗೆ ವಿರೋಧವಾಗಿ ಚಾಚಿ, ನಿನ್ನನ್ನು ನಾಶಮಾಡುವೆನು. ನಿನಗೆ ಅನುಕಂಪ ತೋರಿಸುವುದರಲ್ಲಿ ದಣಿದಿದ್ದೇನೆ.


ಏಕೆಂದರೆ ಈಜಿಪ್ಟಿನವರ ಸಹಾಯವು ವ್ಯರ್ಥವೇ ವ್ಯರ್ಥ. ಆದ್ದರಿಂದ ನಾನು ಅವಳಿಗೆ ಇದನ್ನು ಕುರಿತು ಅವರ ಬಲವು ನಿಂತು ಹೋಗಿದೆ ಎಂದು ನಾನು ಕೂಗಿದ್ದೇನೆ.


ಬಿಡುಗಡೆಗೆ ಕುದುರೆಯ ಬಲ ವ್ಯರ್ಥವಾಗಿದೆ; ಅದಕ್ಕೆ ಮಹಾಶಕ್ತಿ ಇದ್ದರೂ ಅದು ರಕ್ಷಿಸಲಾರದು.


ಯೆಹೋವ ದೇವರೇ, ಅವರನ್ನು ಭಯದಲ್ಲಿರಿಸಿರಿ; ರಾಷ್ಟ್ರಗಳು ತಾವು ಮನುಷ್ಯರೇ ಎಂದು ತಿಳಿದುಕೊಳ್ಳಲಿ.


ಇದಾಗದಿದ್ದರೆ ನನ್ನ ಯಜಮಾನನ ಸೇವಕರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯನ್ನು ಹೇಗೆ ಎದುರಿಸುತ್ತೀ? ನೀನು ರಥಗಳಿಗೋಸ್ಕರವೂ, ರಾಹುತರಿಗೋಸ್ಕರವೂ ಈಜಿಪ್ಟಿನ ಮೇಲೆ ಭರವಸೆ ಇಟ್ಟಿದ್ದೀಯೋ?


ಇಗೋ! ನೀನು ಜಜ್ಜಿದ ದಂಟಿಗೆ ಸಮಾನವಾಗಿರುವ ಈಜಿಪ್ಟಿನ ಮೇಲೆ ಭರವಸೆ ಇಟ್ಟಿರುವಿಯಷ್ಟೆ, ಅದರ ಮೇಲೆ ಮನುಷ್ಯನು ಊರಿಕೊಂಡರೆ ಅದು ಅವನ ಕೈಯನ್ನೇ ಚುಚ್ಚಿ ಗಾಯ ಮಾಡುವುದು. ಈಜಿಪ್ಟಿನ ಅರಸನಾದ ಫರೋಹನಲ್ಲಿ ಭರವಸೆ ಇಟ್ಟವರೆಲ್ಲರಿಗೂ ಇದೇ ಗತಿಯಾಗುವದು.


ತಮಗೆ ಪ್ರಯೋಜನವಾಗದೆ ಸಹಾಯಕ್ಕೂ, ಪ್ರಯೋಜನಕ್ಕೂ ಅಲ್ಲ. ನಿಂದೆಗೂ, ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿತೋರಿಸುವ ಕುರುಡರು. ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಹಳ್ಳಕ್ಕೆ ಬೀಳುವರು,” ಎಂದು ಹೇಳಿದರು.


ಮನುಷ್ಯರಲ್ಲಿ ಭರವಸೆ ಇಡುವುದಕ್ಕಿಂತ ಯೆಹೋವ ದೇವರಲ್ಲಿ ಆಶ್ರಯ ಪಡೆಯುವುದು ಒಳ್ಳೆಯದು.


ವಿಚಾರಣೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಎಲ್ಲಿ ಬಿಡುವಿರಿ?


ಆ ದಿನದಲ್ಲಿ ಕರಾವಳಿಯ ನಿವಾಸಿಗಳು, ‘ಇಗೋ, ಅಸ್ಸೀರಿಯದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ, ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?’ ಎಂದುಕೊಳ್ಳುವರು.”


ಆದರೆ ನೀವು, ‘ಬೇಡವೇ ಬೇಡ. ಏಕೆಂದರೆ ನಾವು ಕುದುರೆಗಳ ಮೇಲೆ ಓಡುವೆವು,’ ಎಂದುಕೊಂಡಿದ್ದರಿಂದ ನೀವು ಓಡಿಹೋಗುವಿರಿ, ನಾವು ವೇಗವಾಗಿ ಸವಾರಿ ಮಾಡುವೆವು, ಎಂದುಕೊಂಡಿದ್ದರಿಂದ ಆ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾನವನ ಸಾಮರ್ಥ್ಯಗಳನ್ನು ತನ್ನ ಆಧಾರವಾಗಿ ಮಾಡಿಕೊಂಡ ವ್ಯಕ್ತಿ ಶಾಪಗ್ರಸ್ತ, ಅವನು ಮನುಷ್ಯನ ಶಕ್ತಿಯ ಮೇಲೆ ಭರವಸೆ ಇಡುವನು. ಯೆಹೋವ ದೇವರ ಕಡೆಯಿಂದ ಯಾವನ ಹೃದಯವು ತೊಲಗುವುದೋ, ಅವನು ಶಾಪಗ್ರಸ್ತನು.


“ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.


ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲನು. ಪಾದತ್ವರಿತನು ತಪ್ಪಿಸಿಕೊಳ್ಳನು. ಅಶ್ವಾರೂಢನು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.


ನಮಗಾದರೋ ಸಹಾಯ ಮಾಡುವುದಕ್ಕೂ, ನಮ್ಮ ಯುದ್ಧಗಳನ್ನು ನಡಿಸುವುದಕ್ಕೂ ನಮ್ಮ ದೇವರಾದ ಯೆಹೋವ ದೇವರು ತಾವೇ ಇದ್ದಾರೆ,” ಎಂದು ಹೇಳಿದನು. ಆದ್ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಭರವಸೆಯುಳ್ಳವರಾದರು.


ಹಾಗೆಯೇ ಅಸ್ಸೀರಿಯದ ಅರಸನು ಈಜಿಪ್ಟಿನವರನ್ನು ಬಂಧಿಸಿ, ಕೂಷಿನ ಕೈದಿಗಳನ್ನು ಅವರು ದೊಡ್ಡವರಾಗಲೀ, ಸಣ್ಣವರಾಗಲೀ ಬಟ್ಟೆ, ಕೆರಗಳಿಲ್ಲದೆ ಈಜಿಪ್ಟಿನ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು