ಯೆಶಾಯ 31:8 - ಕನ್ನಡ ಸಮಕಾಲಿಕ ಅನುವಾದ8 ಆಗ ಅಸ್ಸೀರಿಯದವರು ಖಡ್ಗದಿಂದ ಬೀಳುವರು. ಅದು ಮನುಷ್ಯರ ಖಡ್ಗವಲ್ಲ, ಖಡ್ಗವು ಅವರನ್ನು ನುಂಗುವುದು. ಅದು ಮಾನವ ಖಡ್ಗವಲ್ಲ. ಅವರು ಖಡ್ಗದಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಜೀತದಾಳುಗಳಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಬಿಟ್ಟಿಯಾಗಿ ಹಿಡಿಯಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆ ಅಸ್ಸೀರಿಯಾದವರು ಕತ್ತಿಯಿಂದ ಹತರಾಗುವರು, ಮನುಷ್ಯರ ಕತ್ತಿಯಿಂದಲ್ಲ; ಖಡ್ಗವು ಅವರನ್ನು ಕಬಳಿಸುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಗೆ ಹೆದರಿ ಓಡುವರು. ಅವರ ಯುವಕರು ಗುಲಾಮರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು, ಅದು ಮನುಷ್ಯರ ಕತ್ತಿಯಲ್ಲ; ಖಡ್ಗವು ಅವರನ್ನು ನುಂಗುವದು, ಅದು ಮಾನವಖಡ್ಗವಲ್ಲ; ಅವರು ಕತ್ತಿಯ ಕಡೆಯಿಂದ ಓಡುವರು, ಅವರ ಯೌವನಸ್ಥರು ಬಿಟ್ಟಿಹಿಡಿಯಲ್ಪಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅಶ್ಶೂರವು ಕತ್ತಿಯಿಂದ ನಾಶವಾಗುವದು ಖಂಡಿತ. ಆದರೆ ಆ ಕತ್ತಿಯು ಮನುಷ್ಯನ ಕತ್ತಿಯಲ್ಲ. ಖಡ್ಗವು ಅವರನ್ನು ನುಂಗುವುದು, ಆದರೆ ಅದು ಮನುಷ್ಯನ ಖಡ್ಗವಲ್ಲ. ಅಶ್ಶೂರವು ದೇವರ ಖಡ್ಗದಿಂದ ಓಡಿಹೋಗುವದು. ಅದರ ಯೌವನಸ್ಥರು ಸೆರೆಹಿಡಿಯಲ್ಪಟ್ಟು ಗುಲಾಮರನ್ನಾಗಿ ಮಾಡಲ್ಪಡುವರು. ಅಧ್ಯಾಯವನ್ನು ನೋಡಿ |