Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:15 - ಕನ್ನಡ ಸಮಕಾಲಿಕ ಅನುವಾದ

15 ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವದು; ಆಗ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15-16 ದೇವರು ನಮಗೆ ತನ್ನ ಆತ್ಮವನ್ನು ಸುರಿಸುವತನಕ ಇದು ಮುಂದುವರಿಯುವದು. ಈಗ ಯಾವ ಒಳ್ಳೆಯ ಸಂಗತಿಗಳು ನಡಿಯದೆ ಇರುವದರಿಂದ ದೇಶವು ಮರುಭೂಮಿಯಂತಿದೆ. ಆದರೆ ಮುಂದಿನ ದಿವಸಗಳಲ್ಲಿ ಮರುಭೂಮಿಯು ಕರ್ಮೆಲ್ ಪ್ರಾಂತ್ಯದಂತೆ ಆಗಿ ನ್ಯಾಯಧರ್ಮಗಳು ಅಲ್ಲಿ ನೆಲೆಸುವವು. ಕರ್ಮೆಲ್ ಹಸಿರು ಕಾಡಾಗಿದ್ದು ಶುಭವು ನೆಲೆಸಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:15
29 ತಿಳಿವುಗಳ ಹೋಲಿಕೆ  

ಆದರೂ ಇನ್ನು ಸ್ವಲ್ಪಕಾಲದಲ್ಲಿ ಲೆಬನೋನ್ ಫಲವುಳ್ಳ ಹೊಲವಾಗಿದ್ದು, ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವುದಿಲ್ಲವೋ?


ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವುದಿಲ್ಲ. ನಾನು ನನ್ನ ಆತ್ಮವನ್ನು ಇಸ್ರಾಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಏಕೆಂದರೆ ನಾನು ಬಾಯಾರಿದ ಭೂಮಿಯ ಮೇಲೆ ನೀರನ್ನು ಸುರಿಸುವೆನು. ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ, ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು.


ಆಗ ಪಶ್ಚಿಮದ ಕಡೆಯವರು ಯೆಹೋವ ದೇವರ ಹೆಸರಿಗೂ, ಸೂರ್ಯೋದಯದ ಕಡೆಯವರು ದೇವರ ಘನಕ್ಕೂ ಭಯಪಡುವರು. ವೈರಿಯು ಪ್ರಳಯದಂತೆ ಬರುವಾಗ, ಯೆಹೋವ ದೇವರ ಆತ್ಮವು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವರು.


ಆದ್ದರಿಂದ ಯೇಸು ದೇವರ ಬಲಗಡೆಗೆ ಏರಿಹೋಗಿ ವಾಗ್ದಾನಮಾಡಿದ ಪವಿತ್ರಾತ್ಮ ದೇವರನ್ನು ತಂದೆಯಿಂದ ಪಡೆದುಕೊಂಡರು. ಈಗ ನೀವು ಕಂಡು ಕೇಳಿರುವ ಆ ಪವಿತ್ರಾತ್ಮ ವರವನ್ನು ಯೇಸುವೇ ಇವರ ಮೇಲೆ ಸುರಿಸಿದ್ದಾರೆ.


ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮಗೆ ಕಳುಹಿಸುವೆನು; ಆದರೆ ನೀವು ಪರಲೋಕದ ಶಕ್ತಿಯನ್ನು ಹೊದಿಸುವ ತನಕ, ಈ ಪಟ್ಟಣದಲ್ಲಿಯೇ ಕಾದುಕೊಂಡಿರಿ,” ಎಂದರು.


ಆದರೆ ಪವಿತ್ರಾತ್ಮ ದೇವರಿಂದ ಜೀವವನ್ನು ಉಂಟುಮಾಡುವ ಸೇವೆಯು ಎಷ್ಟೋ ಹೆಚ್ಚಾಗಿ ಮಹಿಮೆಯುಳ್ಳದ್ದಾಗಿರಬೇಕು?


“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.


ನೀವು ನಿಮ್ಮ ಶ್ವಾಸವನ್ನು ಕಳುಹಿಸಲು, ಜೀವಜಂತುಗಳು ಹುಟ್ಟುತ್ತವೆ; ಹೀಗೆ ನೀವು ಭೂಮಿಯನ್ನು ನೂತನಗೊಳಿಸುತ್ತೀರಿ.


ಆಗ ಆತನು ಪೂರ್ವಕಾಲದ ದಿವಸಗಳನ್ನೂ, ಮೋಶೆಯನ್ನೂ, ಅವನ ಜನರನ್ನೂ ಜ್ಞಾಪಕಮಾಡಿಕೊಂಡು “ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಸುರಕ್ಷಿತವಾಗಿ ಮೇಲಕ್ಕೆ ಬರಮಾಡಿದವನು ಎಲ್ಲಿ? ಅವರ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?


“ಆಕಾಶಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ. ಗಗನವು ನೀತಿಯನ್ನು ಸುರಿಸಲಿ. ಭೂಮಿಯು ತೆರೆದು ರಕ್ಷಣೆಯನ್ನು ತರಲಿ. ನೀತಿಯು ಅದರೊಟ್ಟಿಗೆ ಮೊಳೆಯಲಿ. ಇದನ್ನು ಸೃಷ್ಟಿಸಿದ ಯೆಹೋವ ದೇವರು ನಾನೇ!


ನನ್ನ ಗದರಿಕೆ ಕೇಳಿ ನೀವು ಪಶ್ಚಾತ್ತಾಪಪಡಿರಿ! ಆಗ ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನಿಮಗೆ ನನ್ನ ಬೋಧನೆಗಳನ್ನು ಪ್ರಕಟಿಸುವೆನು.


ಒಣ ನೆಲವು ಸರೋವರವಾಗುವುದು, ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗುವುದು. ನರಿಗಳು ವಾಸಿಸುವ ಪ್ರತಿಯೊಂದು ಮಲಗುವ ಸ್ಥಳದಲ್ಲಿ ಹುಲ್ಲು, ಜೊಂಡು, ಆಪು ಹುಲ್ಲುಗಳಿಂದ ತುಂಬಿರುವುದು.


ದೇವರು ಮರುಭೂಮಿಯನ್ನು ನೀರಿನ ಕೆರೆಯಾಗಿಯೂ, ಒಣ ಭೂಮಿಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸಿದರು.


ದೇವರು ನದಿಗಳನ್ನು ಮರುಭೂಮಿಯಾಗಿ ಮಾರ್ಪಡಿಸಿದರು, ನೀರಿನ ಬುಗ್ಗೆಗಳನ್ನು ದಾಹಗೊಂಡ ಭೂಮಿಯಂತೆ ಮಾಡಿದರು.


ಆದರೆ ಯೇಸು ತಮ್ಮಲ್ಲಿ ನಂಬಿಕೆಯಿಡುವವರು ಹೊಂದಲಿರುವ ಪವಿತ್ರಾತ್ಮರನ್ನು ಕುರಿತು ಹೀಗೆ ಹೇಳಿದರು. ಯೇಸು ಇನ್ನೂ ಮಹಿಮೆ ಹೊಂದಿರಲಿಲ್ಲ. ಈ ಕಾರಣದಿಂದ ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ.


ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ, ಬಾಗಿಲಿನ ಕಡೆಗೆ ಯುದ್ಧವನ್ನು ತಿರುಗಿಸುವವನಿಗೆ ಪರಾಕ್ರಮವೂ ಆಗಿರುವನು.


ಮಾತ್ರವಲ್ಲದೆ, “ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ. ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ಮೇಲಿರುವ ನನ್ನ ಆತ್ಮನೂ, ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ, ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ, ನಿನ್ನ ಸಂತಾನದ ಬಾಯಿಂದಲೂ ತೊಲಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ನನ್ನ ಆತ್ಮವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಗ ಯೆಹೋವ ದೇವರಾದ ನಾನೇ ಇದನ್ನು ನುಡಿದು ನೆರವೇರಿಸಿದ್ದೇನೆ ಎಂದು ನೀವು ತಿಳಿಯುವಿರಿ, ಎಂದು ಯೆಹೋವ ದೇವರು ಹೇಳುತ್ತಾರೆ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು