Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:12 - ಕನ್ನಡ ಸಮಕಾಲಿಕ ಅನುವಾದ

12 ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವುವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿ ಹಚ್ಚಿದಂತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿಹಚ್ಚಿದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀವು ಸುಟ್ಟ ಸುಣ್ಣದಂತಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು; ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿ ಹಚ್ಚಿದಂತಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಎಲುಬುಗಳು ಬೂದಿಯಾಗುವ ತನಕ ಜನರು ಸುಡಲ್ಪಡುವರು. ಅವರು ಮುಳ್ಳುಗಳಂತೆಯೂ ಒಣಪೊದೆಗಳಂತೆಯೂ ಬೇಗನೆ ಸುಟ್ಟುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:12
8 ತಿಳಿವುಗಳ ಹೋಲಿಕೆ  

ರೌದ್ರವು ನನ್ನಲ್ಲಿ ಇಲ್ಲ. ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ, ನಾನು ಅವುಗಳನ್ನು ಹಾದು ಹೋಗಿ, ಅವುಗಳನ್ನು ಒಟ್ಟಿಗೆ ಸುಡುವೆನು.


ಯೆಹೋವ ದೇವರು ಹೀಗೆ ಹೇಳುತ್ತಾನೆ: “ಮೋವಾಬಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಎದೋಮಿನ ಅರಸನ ಎಲುಬುಗಳನ್ನು, ಸುಟ್ಟು ಸುಣ್ಣ ಮಾಡಿದ್ದಾನೆ.


ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಇಸ್ರಾಯೇಲಿನ ಬೆಳಕು ಬೆಂಕಿಯಾಗುವುದು, ಅದರ ಪರಿಶುದ್ಧರು ಜ್ವಾಲೆಯಂತಿರುವರು, ಅದು ಒಂದೇ ದಿನದಲ್ಲಿ ಅವನ ಮುಳ್ಳು, ದತ್ತೂರಿಗಳನ್ನು ದಹಿಸಿ ನುಂಗಿಬಿಡುವುದು.


ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ, ಮುಳ್ಳುಗಳನ್ನು ನುಂಗಿಬಿಟ್ಟು, ಅಡವಿಯ ಪೊದೆಗಳನ್ನು ಹತ್ತಿಕೊಳ್ಳಲು, ಅದು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.


ಜೇನುನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ, ಅವರು ಮುಳ್ಳಿನ ಬೆಂಕಿಯ ಹಾಗೆ ಕ್ಷಣಮಾತ್ರದಲ್ಲಿ ಇಲ್ಲವಾಗಿ ಹೋದರು; ಯೆಹೋವ ದೇವರ ಹೆಸರಿನಲ್ಲಿ ನಾನು ಅವರನ್ನು ಸೋಲಿಸುವೆನು.


ಹೀಗಿರಲು ಕರ್ತದೇವರು ಅವರ ಯೌವನಸ್ಥರಲ್ಲಿ ಆನಂದಿಸುವುದಿಲ್ಲ. ಅವರ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಏಕೆಂದರೆ, ಪ್ರತಿಯೊಬ್ಬನು ಕಪಟಿಯೂ, ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದ್ದರಿಂದ ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು