Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:18 - ಕನ್ನಡ ಸಮಕಾಲಿಕ ಅನುವಾದ

18 ಆಗ ನೀವು ಹಿಂದಿನ ಭಯಂಕರವಾದ ವಿಷಯಗಳನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕ ಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ನೀವು ಹಿಂದಿನ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ನೀವು ಹಿಂದಿನ ಭಯಂಕರವಾದ ವಿಷಯಗಳನ್ನು ಮನಸ್ಸಿಗೆ ತಂದುಕೊಳ್ಳುತ್ತಾ - “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಗಣಿಸಿದವನು ಎಲ್ಲಿ?” ಎಂದು ಹೇಳಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ನೀವು [ಹಿಂದಿನ] ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ - [ಕಪ್ಪವನ್ನು] ಲೆಕ್ಕಿಸಿದವನು ಎಲ್ಲಿ, ತೂಕಮಾಡಿದವನು ಎಲ್ಲಿ, ಬುರುಜುಗಳನ್ನು ಗಣಿಸಿದವನು ಎಲ್ಲಿ ಅಂದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18-19 ಹಿಂದಿನ ಕಾಲದಲ್ಲಿ ನೀವು ಅನುಭವಿಸಿದ ಸಂಕಟಗಳನ್ನು ನೆನಪುಮಾಡಿಕೊಳ್ಳುವಿರಿ. ನೀವು ಹೀಗೆ ಭಾವಿಸಿಕೊಳ್ಳುವಿರಿ: “ಬೇರೆ ದೇಶಗಳಿಂದ ಬಂದ ಜನರೆಲ್ಲಿದ್ದಾರೆ? ನಮಗೆ ಅರ್ಥವಾಗದಂಥ ಭಾಷೆಯಲ್ಲಿ ಅವರು ಮಾತಾಡುತ್ತಿದ್ದರು. ಪರದೇಶದ ಅಧಿಕಾರಿಗಳು, ತೆರಿಗೆ ಎತ್ತುವವರು ಎಲ್ಲಿ? ನಮ್ಮ ಕೋಟೆಗಳನ್ನು, ಬುರುಜುಗಳನ್ನು ಲೆಕ್ಕಿಸಲು ಬಂದ ಗೂಢಚಾರರೆಲ್ಲಿ? ಅವರೆಲ್ಲಾ ಹೋಗಿಬಿಟ್ಟರು. ನೀವೆಂದೂ ಆ ಜನರನ್ನು ಕಾಣದೆ ಇರುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:18
16 ತಿಳಿವುಗಳ ಹೋಲಿಕೆ  

ಜ್ಞಾನಿಯಾದ ಮನುಷ್ಯನೆಲ್ಲಿ? ಪಂಡಿತನು ಎಲ್ಲಿ? ಈ ಕಾಲದ ತತ್ವಜ್ಞಾನಿ ಎಲ್ಲಿ? ಈ ಲೋಕದ ಜ್ಞಾನವನ್ನು ದೇವರು ಬುದ್ದಿಹೀನತೆಯನ್ನಾಗಿ ಮಾಡಿದ್ದಾರಲ್ಲವೇ?


ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಸ್ಸೀರಿಯದ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಬಿಟ್ಟು ಹಿಂದಿರುಗಿ ಹೋಗು. ನೀನು ನನ್ನ ಮೇಲೆ ವಿಧಿಸುವುದನ್ನು ನಾನು ಕೊಡುತ್ತೇನೆ,” ಎಂದು ಹೇಳಿ ಕಳುಹಿಸಿದನು. ಆಗ ಅಸ್ಸೀರಿಯದ ಅರಸನು ಯೆಹೂದದ ಅರಸನಾದ ಹಿಜ್ಕೀಯನು ಹತ್ತು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನೂ, ಒಂದು ಸಾವಿರ ಕಿಲೋಗ್ರಾಂ ಬಂಗಾರವನ್ನೂ ಕೊಡಬೇಕೆಂದು ನೇಮಕಮಾಡಿದನು.


ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು.


ಸಾಯಂಕಾಲದಲ್ಲಿ ಭಯಭ್ರಾಂತಿ, ಉದಯಕ್ಕೆ ಮುಂಚೆ ಅವು ಇಲ್ಲದಂತಾಗುವುದು. ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.


ಅನೇಕ ಕಠಿಣವಾದ ಇಕ್ಕಟ್ಟುಗಳನ್ನು ನೋಡ ಮಾಡಿದ ನನ್ನನ್ನು ನೀವು ತಿರುಗಿ ಬದುಕಿಸಿದ್ದೀರಿ. ಭೂಮಿಯ ಅಧೋಭಾಗದಿಂದ ಪುನಃ ನನ್ನನ್ನು ಮೇಲಕ್ಕೆ ಎತ್ತುವಿರಿ.


“ನಾನು ನಿಮ್ಮ ಕಣ್ಣುಗಳ ಎದುರಿನಿಂದ ತೆಗೆದು ಹಾಕಲಾಗಿದ್ದೇನೆ” ಎಂದು ನನ್ನ ಗಾಬರಿಯಲ್ಲಿ ಹೇಳಿದೆನು; ಆದರೂ ನಾನು ಸಹಾಯಕ್ಕಾಗಿ ನಿಮಗೆ ಮೊರೆಯಿಡಲು ನೀವು ಕರುಣೆಗಾಗಿ ಕೂಗಿದ್ದನ್ನು ಕೇಳಿದ್ದೀರಿ.


“ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ: ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.


ಅಸ್ಸೀರಿಯಾ ದೇಶದ ಅರಸನಾದ ಪೂಲನು ಇಸ್ರಾಯೇಲ್ ದೇಶದ ಮೇಲೆ ಯುದ್ಧಕ್ಕೆ ಬಂದನು. ಆಗ ಮೆನಹೇಮನು ಅವನ ಬೆಂಬಲವನ್ನು ಪಡೆಯಲು ಮತ್ತು ರಾಜ್ಯವನ್ನು ದೃಢಪಡಿಸಲು ಪೂಲನಿಗೆ ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.


ಜನರೆಲ್ಲರೂ ಪ್ರತಿಯೊಬ್ಬನು ತನ್ನ ಪುತ್ರಪುತ್ರಿಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು, ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ, ಅವನು ಬಹಳ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದನು. ಆದರೂ ದಾವೀದನು ಯೆಹೋವ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.


ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿಕೊಂಡು, ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ಬೆಲೆ ಅಂದರೆ, ವರ್ತಕರಲ್ಲಿ ನಡೆಯುವ ನಾನೂರು ಬೆಳ್ಳಿ ನಾಣ್ಯಗಳನ್ನು ತೂಕಮಾಡಿ ಅವನಿಗೆ ಕೊಟ್ಟನು.


ನೀನು ನೀತಿಯಲ್ಲಿ ನೆಲೆಗೊಂಡಿರುವೆ. ಬಾಧೆಯಿಂದ ದೂರವಾಗಿರುವೆ. ನೀನು ಭೀತಿಯಿಂದ ಭಯಪಡುವುದಿಲ್ಲ, ಏಕೆಂದರೆ ಅದು ನಿನ್ನ ಸಮೀಪಕ್ಕೆ ಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು