Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:3 - ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ಸೈನ್ಯದ ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀವು ಏಳುವಾಗ ರಾಜ್ಯಗಳು ಚದರಿ ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಭೋರ್ಗರೆಯುವ ಶಬ್ದಕ್ಕೆ ಜನಾಂಗಗಳು ಓಡುವವು; ನೀನು ಏಳುವಾಗ ರಾಜ್ಯಗಳು ದಿಕ್ಕಾಪಾಲಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಮ್ಮ ಮೇಘಗರ್ಜನೆಗೆ ಜನಾಂಗಗಳು ಓಡುತ್ತವೆ. ನೀವು ಎದ್ದುನಿಂತಾಗ ರಾಷ್ಟ್ರಗಳು ದಿಕ್ಕುಪಾಲಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಭೋರ್ಗರೆಯುವ ಶಬ್ದಕ್ಕೆ ಜನಾಂಗಗಳು ಓಡುವವು; ನೀನು ಏಳುವಾಗ ರಾಜ್ಯಗಳು ದಿಕ್ಕಾಪಾಲಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನ ಬಲಯುತವಾದ ಸ್ವರವು ಜನರಿಗೆ ಹೆದರಿಕೆಯನ್ನು ಉಂಟುಮಾಡುತ್ತದೆ, ಅವರು ನಿನ್ನಿಂದ ಓಡಿಹೋಗುವರು. ನಿನ್ನ ಮಹೋನ್ನತೆಯು ಜನಾಂಗಗಳನ್ನು ದಿಕ್ಕಾಪಾಲಾಗಿ ಮಾಡುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:3
13 ತಿಳಿವುಗಳ ಹೋಲಿಕೆ  

ರಾಷ್ಟ್ರಗಳು ಕೋಲಾಹಲದಲ್ಲಿವೆ ರಾಜ್ಯಗಳು ಬೀಳುತ್ತವೆ. ದೇವರು ತಮ್ಮ ಧ್ವನಿಯನ್ನೆತ್ತಲು ಭೂಮಿಯು ಕರಗುತ್ತದೆ.


ನಮ್ಮ ಗುರಾಣಿಯಾಗಿರುವ ಯೆಹೋವ ದೇವರೇ, ನನ್ನ ಜನರು ಮರೆಯದ ಹಾಗೆ ಅವರು ಉಳಿದಿರಲಿ. ನಿಮ್ಮ ಪರಾಕ್ರಮದಿಂದ ಅವರನ್ನು ದಂಡಿಸಿರಿ.


ಏಕೆಂದರೆ ಹಿರಿದ ಖಡ್ಗ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳಿಂದ ತಪ್ಪಿಸಿಕೊಂಡು ಓಡಿ ಬಂದಿದ್ದಾರಷ್ಟೆ.


ನಿಮ್ಮ ಕೊಳ್ಳೆಯನ್ನು ಇತರರು ಮಿಡತೆಗಳಂತೆ ಕೊಳ್ಳೆಮಾಡುವರು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.


“ಆದ್ದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ, ಅವರಿಗೆ ಹೇಳತಕ್ಕದ್ದೇನೆಂದರೆ, “ ‘ಯೆಹೋವ ದೇವರು ಉನ್ನತದಿಂದ ಗರ್ಜಿಸಿ, ತಮ್ಮ ಪರಿಶುದ್ಧ ನಿವಾಸದೊಳಗಿಂದ ತಮ್ಮ ಶಬ್ದವನ್ನು ಕೊಡುವರು. ತಮ್ಮ ನಿವಾಸದ ಮೇಲೆ ಗಟ್ಟಿಯಾಗಿ ಗರ್ಜಿಸಿ, ದ್ರಾಕ್ಷಿ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವರು.


ಭೂಮಿಯ ಅಂತ್ಯಗಳವರೆಗೆ ಘೋಷವು ಬರುವುದು. ಯೆಹೋವ ದೇವರಿಗೆ ಜನಾಂಗಗಳ ಸಂಗಡ ವ್ಯಾಜ್ಯವಿದೆ. ಅವರು ಎಲ್ಲಾ ಮನುಷ್ಯರ ಸಂಗಡ ನ್ಯಾಯಕ್ಕೆ ನಿಲ್ಲುವರು. ದುಷ್ಟರನ್ನು ಖಡ್ಗಕ್ಕೆ ಒಪ್ಪಿಸುವರು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಗಾಳಿಯಿಂದ ಹೊಗೆ ಹಾರಿಹೋಗುವಂತೆ ಅವರು ಹಾರಿಹೋಗಲಿ. ಮೇಣವು ಬೆಂಕಿಯ ಮುಂದೆ ಕರಗುವಂತೆ, ದುಷ್ಟರು ದೇವರ ಮುಂದೆ ನಾಶವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು