ಯೆಶಾಯ 34:13 - ಕನ್ನಡ ಸಮಕಾಲಿಕ ಅನುವಾದ13 ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವುವು, ಅದರ ಕೋಟೆಗಳಲ್ಲಿ ಮುಳ್ಳುಪೊದೆಗಳು ಇರುವುವು. ಅದು ನರಿಗಳ ನಿವಾಸವೂ, ಗೂಬೆಗಳಿಗೆ ಸ್ಥಾನವೂ ಆಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಲ್ಲಿನ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು, ಅದರ ಕೋಟೆಗಳಲ್ಲಿ ಮುಳ್ಳುಗಿಡಗಳೂ, ದತ್ತೂರಿಯೂ ಹಬ್ಬಿಕೊಳ್ಳುವವು. ಅದು ನರಿಗಳಿಗೆ ಗುಹೆಯಾಗಿಯೂ, ಉಷ್ಟ್ರಪಕ್ಷಿಗಳಿಗೆ ನಿವಾಸವಾಗಿಯೂ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಲ್ಲಿನ ಅರಮನೆಗಳಲ್ಲಿ ಕಳ್ಳಬಳ್ಳಿಗಳೂ ಕೋಟೆಗಳಲ್ಲಿ ಮುಳ್ಳುಗಿಳ್ಳುಗಳೂ ಹಬ್ಬಿಕೊಳ್ಳುವುವು. ಅದು ಮರಿಗಳಿಗೆ ಗುಹೆಯಾಗಿಯೂ ಗೂಬೆಗಳಿಗೆ ಗೂಡಾಗಿಯೂ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅಲ್ಲಿನ ಅರಮನೆಗಳಲ್ಲಿ ದಬ್ಬೆಗಳ್ಳಿಗಳೂ ಕೋಟೆಗಳಲ್ಲಿ ಮುಳ್ಳುಗಿಳ್ಳುಗಳೂ ಹಬ್ಬಿಕೊಳ್ಳುವವು; ಅದು ನರಿಗಳಿಗೆ ಹಕ್ಕೆಯಾಗಿಯೂ ಉಷ್ಟ್ರಪಕ್ಷಿಗಳಿಗೆ ಎಡೆಯಾಗಿಯೂ ಇರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಮುಳ್ಳುಗಿಡಗಳು ಅಲ್ಲಿಯ ಸುಂದರವಾದ ಬಂಗಲೆಗಳಲ್ಲಿ ಬೆಳೆಯುವವು. ಕಾಡುನಾಯಿಗಳೂ ಗೂಬೆಗಳೂ ಆ ಮನೆಗಳಲ್ಲಿ ವಾಸಿಸುವವು. ಕಾಡುಪ್ರಾಣಿಗಳು ಅದನ್ನು ತಮ್ಮ ಮನೆಯನ್ನಾಗಿ ಮಾಡಿಕೊಳ್ಳುವವು. ಅಲ್ಲಿ ಬೆಳೆಯುವ ಎತ್ತರವಾದ ಹುಲ್ಲುಗಳಲ್ಲಿ ಉಷ್ಟ್ರಪಕ್ಷಿಗಳು ವಾಸಮಾಡುವವು. ಅಧ್ಯಾಯವನ್ನು ನೋಡಿ |
ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”