ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.
ಖಡ್ಗವನ್ನೇ ಗತಿಯಾಗ ಮಾಡುವೆನು. ಆದ್ದರಿಂದ ನಿಮ್ಮನ್ನು ಖಡ್ಗಕ್ಕೆ ನೇಮಿಸುವೆನು. ನೀವೆಲ್ಲರು ಕೊಲೆಗೆ ಬೊಗ್ಗಿಕೊಳ್ಳುವಿರಿ. ಏಕೆಂದರೆ, ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ. ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.”
ನೀವು ಅದನ್ನು ಕಾಣುವಾಗ, ನಿಮ್ಮ ಹೃದಯವು ಸಂತೋಷಿಸುವುದು. ನಿಮ್ಮ ಎಲುಬುಗಳು ಹಸಿರು ಹುಲ್ಲಿನ ಹಾಗೆ ಚಿಗುರುವುವು. ಯೆಹೋವ ದೇವರ ಕೈ ತಮ್ಮ ಸೇವಕರ ಮೇಲೆಯೂ, ಅವರ ರೌದ್ರವು ತಮ್ಮ ಶತ್ರುಗಳ ಮೇಲೆ ಕಾಣಬರುವುದು.
ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯವರೆಗೆ ಯೆಹೋವ ದೇವರಿಂದ ಹತರಾದವರು ಇರುವರು. ಅವರಿಗೋಸ್ಕರ ಗೋಳಾಡುವುದಿಲ್ಲ. ಅವರನ್ನು ಕೂಡಿಸುವುದಿಲ್ಲ. ಅವರನ್ನು ಹೂಳಿಡುವುದಿಲ್ಲ. ಅವರು ಭೂಮಿಯ ಮೇಲೆ ಗೊಬ್ಬರದಂತಿರುವರು.
ಏಕೆಂದರೆ ಅವರು ಇಸ್ರಾಯೇಲರಿಗೆ ಎದುರಾಗಿ ಯುದ್ಧಮಾಡಲು ಬರುವ ಹಾಗೆ ಅವರ ಹೃದಯವನ್ನು ಯೆಹೋವ ದೇವರು ಕಠಿಣಮಾಡಿದ್ದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರಿಗೆ ದಯೆ ತೋರಿಸದೆ, ಅವರನ್ನು ಸಂಹರಿಸಿದರು.
ಭೂಮಿಯ ಅಂತ್ಯಗಳವರೆಗೆ ಘೋಷವು ಬರುವುದು. ಯೆಹೋವ ದೇವರಿಗೆ ಜನಾಂಗಗಳ ಸಂಗಡ ವ್ಯಾಜ್ಯವಿದೆ. ಅವರು ಎಲ್ಲಾ ಮನುಷ್ಯರ ಸಂಗಡ ನ್ಯಾಯಕ್ಕೆ ನಿಲ್ಲುವರು. ದುಷ್ಟರನ್ನು ಖಡ್ಗಕ್ಕೆ ಒಪ್ಪಿಸುವರು,’ ” ಎಂದು ಯೆಹೋವ ದೇವರು ಹೇಳುತ್ತಾರೆ.
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಶ್ಚಯವಾಗಿ ನನ್ನ ರೋಷದ ಬೆಂಕಿಯಿಂದ ಇತರ ಜನಾಂಗಗಳಲ್ಲಿ ಉಳಿದವರಿಗೂ ಎದೋಮಿನವರೆಲ್ಲರಿಗೂ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡಿದ್ದಾರೆ. ಅವರು ಅದರ ಹುಲ್ಲುಗಾವಲನ್ನು ಸಹ ಸೂರೆಮಾಡಬೇಕೆಂದಿದ್ದಾರೆ.’