ಯೆಶಾಯ 36:11 - ಕನ್ನಡ ಸಮಕಾಲಿಕ ಅನುವಾದ11 ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವರು ರಬ್ಷಾಕೆಗೆ, “ನೀನು ಮಾತನಾಡುವುದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ ಆದ್ದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು: ಅದು ನಮಗೆ ತಿಳಿಯುತ್ತದೆ ಆದರೆ ಹಿಬ್ರಿಯ ಭಾಷೆಯಲ್ಲಿ ಮಾತನಾಡಬೇಡ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ಆ ದಳಪತಿಗೆ, “ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಆರಾಮಾಯಿಕ ಭಾಷೆಯಲ್ಲಿ ಮಾತನಾಡಿ, ಅದು ನಮಗೆ ಅರ್ಥವಾಗುತ್ತದೆ. ಆದರೆ ಹಿಬ್ರು ಭಾಷೆಯಲ್ಲಿ ಮಾತನಾಡಬೇಡಿ, ಅದು ಪೌಳಿಗೋಡೆಯ ಮೇಲಿರುವ ಎಲ್ಲರಿಗೂ ಅರ್ಥವಾಗುತ್ತದೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ - ನೀನು ಮಾತಾಡುವದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತಾಡಬೇಡ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ಆ ಸೇನಾದಂಡನಾಯಕನಿಗೆ, “ದಯಮಾಡಿ ನಮ್ಮೊಂದಿಗೆ ಅರಮೇಯಿಕ್ ಭಾಷೆಯಲ್ಲಿ ಮಾತನಾಡು. ಆ ಭಾಷೆಯು ನಮಗೆ ಗೊತ್ತು. ಯೆಹೂದದ ಭಾಷೆಯಲ್ಲಿ ನಮ್ಮೊಂದಿಗೆ ಮಾತನಾಡಬೇಡ. ನೀವು ನಮ್ಮ ಭಾಷೆಯಲ್ಲಿ ಮಾತನಾಡಿದರೆ ಗೋಡೆಯ ಮೇಲಿರುವ ನಮ್ಮ ಜನರು ತಿಳಿದುಕೊಳ್ಳುವರು” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಶಾರೀರಿಕ ನ್ಯೂನತೆ ಇಲ್ಲದವರಾಗಿಯೂ, ಸುಂದರವಾಗಿಯೂ, ಅವರು ಎಲ್ಲಾ ರೀತಿಯ ವಿಷಯಗಳನ್ನು ಕಲಿಯುವ ಸಾಮರ್ಥ್ಯವನ್ನು ಹೊಂದಿರಬೇಕು. ಅವರು ವಿವೇಕವುಳ್ಳವರಾಗಿಯೂ ಮತ್ತು ತ್ವರಿತವಾಗಿ ಅರ್ಥಮಾಡಿಕೊಳ್ಳುವವರಾಗಿಯೂ, ಅರಸನ ಅರಮನೆಯಲ್ಲಿ ಸೇವೆ ಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಬಾಬಿಲೋನಿಯರ ವಿದ್ಯೆಯನ್ನೂ, ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.