Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:12 - ಕನ್ನಡ ಸಮಕಾಲಿಕ ಅನುವಾದ

12 ಆದರೆ ರಬ್ಷಾಕೆಯು ಅವರಿಗೆ, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಯಜಮಾನನ ಸಂಗಡವಾಗಲಿ ಮಾತ್ರ ಈ ಮಾತುಗಳನ್ನು ಹೇಳುವುದಕ್ಕೆ ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಿಮ್ಮ ಸಂಗಡ ಇದ್ದರೆ ನಿಮ್ಮ ಹಾಗೆ ಇವರೂ ಸಹ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಈ ಮಾತುಗಳನ್ನು ಹೇಳುವುದಕ್ಕೆ ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನನ್ನ ವಿರುದ್ಧವಾಗಿ ನಿಂತರೆ ನಿಮ್ಮೊಡನೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ಆ ದಳಪತಿಯು, “ನನ್ನ ಯಜಮಾನನು, ನಿಮ್ಮ ಸಂಗಡವಾಗಲಿ ಮತ್ತು ನಿಮ್ಮ ಒಡೆಯರ ಸಂಗಡವಾಗಲಿ ಮಾತ್ರ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಮಗೆ ವಿರುದ್ಧವಾಗಿ ಹೋರಾಡಿದರೆ ನಿಮ್ಮ ಹಾಗೆ ಇವರು ಕೂಡ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಕ್ಕೆ ರಬ್ಷಾಕೆಯು - ನನ್ನ ಯಜಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಒಡೆಯನ ಸಂಗಡವಾಗಲಿ ಮಾತಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕೂತಿರುವ ಜನರ ಸಂಗಡ ಮಾತಾಡುವದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನನಗೆ ವಿರುದ್ಧವಾಗಿ ನಿಂತರೆ ನಿಮ್ಮೊಡನೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವದು ಎಂದು ಉತ್ತರಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸೇನಾದಂಡನಾಯಕನು ಅದಕ್ಕುತ್ತರವಾಗಿ, “ನನ್ನ ಒಡೆಯನು ನಿಮ್ಮೊಂದಿಗೂ ನಿಮ್ಮ ಅರಸನೊಂದಿಗೂ ಮಾತ್ರ ಮಾತನಾಡಲು ಕಳುಹಿಸಲಿಲ್ಲ. ನನ್ನ ಒಡೆಯನು ಕೋಟೆಗೋಡೆಯ ಮೇಲೆ ಕುಳಿತಿರುವ ಜನರೊಂದಿಗೆ ಮಾತಾಡಲು ಕಳುಹಿಸಿದ್ದಾನೆ. ಆ ಜನರಿಗೆ ಊಟಕ್ಕೆ ಆಹಾರ, ಕುಡಿಯಲು ನೀರು ದೊರಕುವದಿಲ್ಲ. ಅವರು ನಿಮ್ಮ ಹಾಗೆ ತಮ್ಮ ಸ್ವಂತ ಮಲವನ್ನು ತಿಂದು ಮೂತ್ರವನ್ನು ಕುಡಿಯುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:12
11 ತಿಳಿವುಗಳ ಹೋಲಿಕೆ  

ಆದರೆ ರಬ್ಷಾಕೆಯು ಅವರಿಗೆ, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಯಜಮಾನನ ಸಂಗಡವಾಗಲಿ ಮಾತ್ರ ಈ ಮಾತುಗಳನ್ನು ಹೇಳುವುದಕ್ಕೆ ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಿಮ್ಮ ಸಂಗಡ ಇದ್ದರೆ ನಿಮ್ಮ ಹಾಗೆ ಇವರೂ ಸಹ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಹೇಳಿದನು.


ಇದಾದ ಮೇಲೆ ಅವರು ನನಗೆ, “ಮನುಷ್ಯಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ಮುರಿಯುವೆನು. ಅವರು ತೂಕದ ಪ್ರಕಾರ ಚಿಂತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ನಿರಾಶೆಯಿಂದ ಕುಡಿಯುವರು.


ಅವರು ತಮ್ಮ ಪುತ್ರಪುತ್ರಿಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಮುತ್ತಿಗೆಯಲ್ಲಿಯೂ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.’


ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು, ಅವನು ಎಡಗಡೆಯಲ್ಲಿರುವುದನ್ನು ತಿಂದರೂ ಅವು ಅವನನ್ನು ತೃಪ್ತಿಪಡಿಸಲಾರವು. ಒಬ್ಬೊಬ್ಬನೂ ತನ್ನ ನೆರೆಯವನನ್ನು ಹಾನಿ ಮಾಡುತ್ತಿದ್ದಾನೆ.


ನೀವು ನಿಮ್ಮ ಪುತ್ರಪುತ್ರಿಯರ ಮಾಂಸವನ್ನು ತಿನ್ನುವಿರಿ.


ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವರು ರಬ್ಷಾಕೆಗೆ, “ನೀನು ಮಾತನಾಡುವುದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ ಆದ್ದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು: ಅದು ನಮಗೆ ತಿಳಿಯುತ್ತದೆ ಆದರೆ ಹಿಬ್ರಿಯ ಭಾಷೆಯಲ್ಲಿ ಮಾತನಾಡಬೇಡ,” ಎಂದು ಹೇಳಿದರು.


ಆಗ ರಬ್ಷಾಕೆ ನಿಂತುಕೊಂಡು ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನೆಂದರೆ, “ನೀವು ಅಸ್ಸೀರಿಯದ ಮಹಾರಾಜನ ಮಾತನ್ನು ಕೇಳಿರಿ.


ಇದಲ್ಲದೆ ನೀನು ಆಹಾರವನ್ನು ಜವೆಗೋಧಿಯ ರೊಟ್ಟಿಗಳಂತೆ ತಿನ್ನಬೇಕು. ಅದನ್ನು ಸೌದೆಗೆ ಬದಲಾಗಿ ಮನುಷ್ಯರ ಮಲವನ್ನು ಉರಿಸಿ ಅವರ ಕಣ್ಣುಗಳ ಮುಂದೆ ಅಡಿಗೆ ಮಾಡಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು