Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:13 - ಕನ್ನಡ ಸಮಕಾಲಿಕ ಅನುವಾದ

13 ಆಗ ರಬ್ಷಾಕೆ ನಿಂತುಕೊಂಡು ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನೆಂದರೆ, “ನೀವು ಅಸ್ಸೀರಿಯದ ಮಹಾರಾಜನ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಮೇಲೆ ರಬ್ಷಾಕೆಯು ಎದ್ದು ಗೋಡೆಯ ಮೇಲೆ ನಿಂತವರಿಗೆ ಯೂದಾಯ ಭಾಷೆಯಲ್ಲಿ, “ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಳಿಕ ಆ ದಳಪತಿಯು ಆ ಗೋಡೆಯ ಮೇಲೆ ನಿಂತಿದ್ದವರನ್ನು ಉದ್ದೇಶಿಸಿ ಹಿಬ್ರು ಭಾಷೆಯಲ್ಲಿ, “ನೀವು ಅಸ್ಸೀರಿಯದ ರಾಜಾಧಿರಾಜನ ಮಾತನ್ನು ಕೇಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಎದ್ದು ಗೋಡೆಯ ಮೇಲೆ ನಿಂತವರಿಗೆ ಯೂದಾಯ ಭಾಷೆಯಲ್ಲಿ - ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಳಿಕ ಸೇನಾದಂಡನಾಯಕನು ಯೆಹೂದ್ಯ ಭಾಷೆಯಲ್ಲಿ ಗಟ್ಟಿಯಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:13
14 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ಪಟ್ಟಣವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವುದಕ್ಕೂ, ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ದೊಡ್ಡ ಶಬ್ದದಿಂದ ಅವರನ್ನು ಕೂಗಿದರು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು: “ ‘ಮಹಾರಾಜನಾದ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ಈ ನಿನ್ನ ಭರವಸೆಗೆ ಆಧಾರ ಏನು?


ಯೆಹೋವ ದೇವರಾದ ನಾನು ಎಲ್ಲಾ ಪ್ರತಾಪದಿಂದ ಕೂಡಿದ ಅಸ್ಸೀರಿಯದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವೆನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,


ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವರು ರಬ್ಷಾಕೆಗೆ, “ನೀನು ಮಾತನಾಡುವುದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ ಆದ್ದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು: ಅದು ನಮಗೆ ತಿಳಿಯುತ್ತದೆ ಆದರೆ ಹಿಬ್ರಿಯ ಭಾಷೆಯಲ್ಲಿ ಮಾತನಾಡಬೇಡ,” ಎಂದು ಹೇಳಿದರು.


ಆದರೆ ರಬ್ಷಾಕೆಯು ಅವರಿಗೆ, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಯಜಮಾನನ ಸಂಗಡವಾಗಲಿ ಮಾತ್ರ ಈ ಮಾತುಗಳನ್ನು ಹೇಳುವುದಕ್ಕೆ ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಿಮ್ಮ ಸಂಗಡ ಇದ್ದರೆ ನಿಮ್ಮ ಹಾಗೆ ಇವರೂ ಸಹ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಹೇಳಿದನು.


ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು, ಎಂಬುದಾಗಿ ಹಿಜ್ಕೀಯನು ಅನ್ನುತ್ತಾನೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು