Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:20 - ಕನ್ನಡ ಸಮಕಾಲಿಕ ಅನುವಾದ

20 ಈ ದೇಶಗಳ ಸಮಸ್ತ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ, ಯೆಹೋವ ದೇವರು ಯೆರೂಸಲೇಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ? ಎನ್ನುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಅರಸನ ಕೈಯಿಂದ ಬಿಡಿಸಲಾರದೆ ಹೋದಮೇಲೆ ಸರ್ವೇಶ್ವರ ಜೆರುಸಲೇಮನ್ನು ಆತನ ಕೈಯಿಂದ ಬಿಡಿಸಿ ಕಾಪಾಡಲು ಸಾಧ್ಯವೋ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ ಅನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬೇರೆ ಯಾವ ದೇಶದ ದೇವರುಗಳು ನನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಿ ಕಾಪಾಡಿದರು? ಹೀಗಿರಲು ಯೆಹೋವನು ಜೆರುಸಲೇಮನ್ನು ನನ್ನಿಂದ ರಕ್ಷಿಸುವನೋ? ಇಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:20
17 ತಿಳಿವುಗಳ ಹೋಲಿಕೆ  

ಮನುಷ್ಯರ ಕೈಕೆಲಸವಾದ ಭೂಮಿಯ ಜನರ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ, ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.


ಈಗ ನೀವು ಸಿದ್ಧವಾಗಿದ್ದು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಆರಾಧಿಸದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಲಾಗುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು?” ಎಂದು ಹೇಳಿದನು.


ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ. ಭೂಲೋಕದಲ್ಲೆಲ್ಲಾ ಅವರ ಮಾತು ಮುಂದುವರೆದಿದೆ.


ಇವುಗಳನ್ನೆಲ್ಲಾ ನೀವು ಮಾಡಿದ್ದೀರಿ, ಆದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ಸಹ ನಿಮ್ಮ ಹಾಗೆ ಒಬ್ಬನೆಂದು ನೀವು ನೆನಸಿಕೊಂಡಿದ್ದೀರಿ. ಆದರೆ ಈಗ ನಾನು ನಿಮ್ಮನ್ನು ಗದರಿಸಿ ನಿಮ್ಮ ಕಣ್ಣು ಮುಂದೆಯೇ ನಿಮ್ಮ ಅಪರಾಧ ಪ್ರಕಟಿಸುವೆನು.


ಆದ್ದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ನಿಮ್ಮನ್ನು ದಾರಿತಪ್ಪಿಸಲು ಬಿಡಬೇಡಿರಿ. ಅವನ ಮಾತು ನಂಬಬೇಡಿರಿ. ನನ್ನ ಕೈಯೊಳಗಿಂದಲೂ, ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು? ಅನ್ನುತ್ತಾನೆ,” ಎಂದು ಹೇಳಿದರು.


ಆದರೆ ಅರಾಮಿನ ಅರಸನ ಸೇವಕರು ಅವನಿಗೆ, “ಅವರ ದೇವರುಗಳು, ಪರ್ವತಗಳ ದೇವರುಗಳು, ಆದ್ದರಿಂದ ಅವರು ನಮ್ಮನ್ನು ಜಯಿಸಿದರು. ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧಮಾಡಿದರೆ, ನಿಶ್ಚಯವಾಗಿ ನಾವು ಅವರಿಗಿಂತ ಬಲಶಾಲಿಗಳಾಗಿರುವೆವು.


ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.


ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾಯೇಲಿನ ಅರಸನಿಗೆ, “ಯೆಹೋವ ದೇವರು ತಗ್ಗುಗಳ ದೇವರಾಗಿರದೆ ಪರ್ವತಗಳ ದೇವರಾಗಿದ್ದನೆಂಬುದಾಗಿ ಅರಾಮ್ಯರು ಹೇಳಿದ್ದರಿಂದ, ‘ನಾನು ಯೆಹೋವ ದೇವರಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಇದಲ್ಲದೆ, ‘ಯೆಹೋವ ದೇವರು ನಮ್ಮನ್ನು ನಿಶ್ಚಯವಾಗಿ ರಕ್ಷಿಸುವರೆಂದೂ, ಈ ಪಟ್ಟಣವು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲವೆಂದೂ ಹಿಜ್ಕೀಯನು ನಿಮಗೆ ಯೆಹೋವ ದೇವರಲ್ಲಿ ಭರವಸೆ ಇಡುವಂತೆ ಮಾಡುವರು.’


ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.


ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು, ಎಂಬುದಾಗಿ ಹಿಜ್ಕೀಯನು ಅನ್ನುತ್ತಾನೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು