Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:22 - ಕನ್ನಡ ಸಮಕಾಲಿಕ ಅನುವಾದ

22 ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬಳಿಕ, ಹಿಲ್ಕೀಯನ ಮಗನೂ ರಾಜ ಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ಅರಸ ಹಿಜ್ಕೀಯನ ಬಳಿಗೆ ಬಂದು, ಅವನಿಗೆ ಆ ಸೇನಾಪತಿಯ ಮಾತುಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಹಿಲ್ಕೀಯನ ಮಗನೂ ಅರಮನೆಯ ಆಡಳಿತಾಧಿಕಾರಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ಹ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಅಶ್ಶೂರದ ಸೇನಾದಂಡನಾಯಕ ಹೇಳಿದ್ದನ್ನೆಲ್ಲಾ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:22
12 ತಿಳಿವುಗಳ ಹೋಲಿಕೆ  

ಆಗ ಅರಮನೆಯ ಕಾರ್ಯನಿರ್ವಾಹಕನಾದ ಹಿಲ್ಕೀಯನ ಮಗ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬುವರು ಅವನ ಬಳಿಗೆ ಬಂದರು.


ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ.


ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈತನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಏತಕ್ಕೆ? ನೋಡಿ, ಈಗ ಈತನ ದೇವದೂಷಣೆಯನ್ನು ನೀವೇ ಕೇಳಿದ್ದೀರಲ್ಲಾ


ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವರು ರಬ್ಷಾಕೆಗೆ, “ನೀನು ಮಾತನಾಡುವುದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ ಆದ್ದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು: ಅದು ನಮಗೆ ತಿಳಿಯುತ್ತದೆ ಆದರೆ ಹಿಬ್ರಿಯ ಭಾಷೆಯಲ್ಲಿ ಮಾತನಾಡಬೇಡ,” ಎಂದು ಹೇಳಿದರು.


ನಾನು ಇದನ್ನು ಕೇಳಿದಾಗ ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು, ಸ್ತಬ್ಧನಾಗಿ ಕುಳಿತುಕೊಂಡೆನು.


ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು.


ಅವರು ಅರಸನನ್ನು ಕರೆಕಳುಹಿಸಿದರು. ಅರಮನೆಯ ಕಾರ್ಯನಿರ್ವಾಹಕನಾದ ಹಿಲ್ಕೀಯನ ಮಗ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬುವರು ಅವರ ಬಳಿಗೆ ಬಂದರು.


ಸೇನಾಧೀಶ್ವರ ಯೆಹೋವ ದೇವರು ಪುನಃ ಹೀಗೆ ನುಡಿದಿದ್ದಾರೆ: “ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನ ಎಂಬ ಖಜಾಂಚಿಯ ಬಳಿಗೆ ಹೋಗಿ ಹೀಗೆ ಹೇಳು:


“ಆ ದಿನದಲ್ಲಿ ನನ್ನ ಸೇವಕನೂ, ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆದು,


ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ, ಅವರ ಸೇವಕರಾದ ಒಬ್ಬರಾದರೂ ಹೆದರಲಿಲ್ಲ.


ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ, ದುಃಖವೂ ಇರುವುದು. ಅವಳು ನನಗೆ ಬಲಿಪೀಠದ ಒಲೆಯಂತೆ ಇರುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು