ಯೆಶಾಯ 36:6 - ಕನ್ನಡ ಸಮಕಾಲಿಕ ಅನುವಾದ6 ಇಗೋ! ನೀನು ಜಜ್ಜಿದ ದಂಟಿಗೆ ಸಮಾನವಾಗಿರುವ ಈಜಿಪ್ಟಿನ ಮೇಲೆ ಭರವಸೆ ಇಟ್ಟಿರುವಿಯಷ್ಟೆ, ಅದರ ಮೇಲೆ ಮನುಷ್ಯನು ಊರಿಕೊಂಡರೆ ಅದು ಅವನ ಕೈಯನ್ನೇ ಚುಚ್ಚಿ ಗಾಯ ಮಾಡುವುದು. ಈಜಿಪ್ಟಿನ ಅರಸನಾದ ಫರೋಹನಲ್ಲಿ ಭರವಸೆ ಇಟ್ಟವರೆಲ್ಲರಿಗೂ ಇದೇ ಗತಿಯಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “‘ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಆಧಾರ ಮಾಡಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟ್ ಎಂಬ ಊರುಗೋಲಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಆದರೆ ಅದು ಊರಿಕೊಳ್ಳುವವನ ಕೈಯನ್ನು ಚುಚ್ಚಿ ತಿವಿಯುವ ಕೋಲು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಈಜಿಪ್ಟು ನಿನಗೆ ಸಹಾಯ ಮಾಡುವುದೆಂದು ನಂಬಿರುವಿಯಾ? ಈಜಿಪ್ಟು ಒಂದು ಮುರಿದ ದಂಟು. ಅದರ ಮೇಲೆ ನೀನು ಭಾರಹಾಕಿದರೆ ಅದು ನಿನ್ನ ಅಂಗೈಯಲ್ಲಿ ರಂಧ್ರಮಾಡುವುದು. ಈಜಿಪ್ಟಿನ ರಾಜನಾದ ಫರೋಹನ ಸಹಾಯಕ್ಕಾಗಿ ಆಶ್ರಯಿಸಿಕೊಂಡ ಯಾವ ಜನರೂ ಅವನಲ್ಲಿ ಭರವಸೆ ಇಡಲಾಗದು. ಅಧ್ಯಾಯವನ್ನು ನೋಡಿ |