Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:8 - ಕನ್ನಡ ಸಮಕಾಲಿಕ ಅನುವಾದ

8 “ ‘ಹಾಗಾದರೆ, ಈಗ ನೀನು ಅಸ್ಸೀರಿಯದ ಅರಸನಾದ ನನ್ನ ಯಜಮಾನನೊಂದಿಗೆ ಒಪ್ಪಂದ ಮಾಡಿಕೋ, ಆಗ ನಿನಗೆ ಎರಡು ಸಾವಿರ ಕುದುರೆಸವಾರರನ್ನು ಬಳಸಲು ಸಾಮರ್ಥ್ಯವಿದ್ದರೆ ನಾನು ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಆದುದರಿಂದ ಈಗ ನನ್ನ ಒಡೆಯನಾದ ಅಶ್ಶೂರದ ಅರಸನಿಗೆ ಸವಾಲು ಹಾಕುವುದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ. ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದುದರಿಂದ ಬಾ, ಎಂದು ನನ್ನ ಒಡೆಯನಾದ ಅಸ್ಸೀರಿಯದ ಅರಸನೊಂದಿಗೆ ಒಂದು ಒಪ್ಪಂದ ಮಾಡಿಕೊ. ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುವನು; ಅವುಗಳ ಮೇಲೆ ಕೂರಿಸುವಷ್ಟು ಮಂದಿ ಸವಾರರು ನಿನಗಿದ್ದಾರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಪಂಥಹಾಕುವದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ; ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “‘ನೀವು ನನ್ನ ಒಡೆಯನಾದ ಅರಸನೊಂದಿಗೆ ಯುದ್ಧಮಾಡುವ ಆಲೋಚನೆಯನ್ನು ಇನ್ನೂ ಹೊಂದಿದ್ದರೆ, ನಿಮ್ಮೊಂದಿಗೆ ಈ ಒಪ್ಪಂದವನ್ನು ಮಾಡಿಕೊಳ್ಳುವೆನು. ಯುದ್ಧಕ್ಕೆ ಬರಲು ನಿಮ್ಮಲ್ಲಿ ಸಾಕಷ್ಟು ಸೈನಿಕರಿದ್ದಾರೆ. ನಾನು ನಿಮಗೆ ಎರಡುಸಾವಿರ ಕುದುರೆಗಳನ್ನು ಕೊಡುವುದಾಗಿ ವಾಗ್ದಾನ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:8
13 ತಿಳಿವುಗಳ ಹೋಲಿಕೆ  

“ ‘ಹಾಗಾದರೆ ಈಗ ನೀನು ಅಸ್ಸೀರಿಯದ ಅರಸನಾದ ನನ್ನ ಯಜಮಾನನೊಂದಿಗೆ ಒಪ್ಪಂದ ಮಾಡಿಕೋ, ಆಗ ನಿನಗೆ ಎರಡು ಸಾವಿರ ಕುದುರೆಸವಾರರನ್ನು ಬಳಸಲು ಸಾಮರ್ಥ್ಯವಿದ್ದರೆ ನಾನು ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.


ಯೆಹೋವ ದೇವರ ಆಲಯದಲ್ಲಿ, ಅರಮನೆಯ ಬೊಕ್ಕಸಗಳಲ್ಲಿ ಸಿಕ್ಕಿದ ಸಕಲ ಬೆಳ್ಳಿಬಂಗಾರವನ್ನೂ ಎಲ್ಲಾ ಸಲಕರಣೆಗಳನ್ನೂ ಯುದ್ಧದಲ್ಲಿ ಬಂಧಿತರಾದವರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು.


ಆಗ ಅವರು, “ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ. ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ,” ಎಂದನು.


ಆಗ ಬೆನ್ಹದದನು ದೂತರನ್ನು ಕಳುಹಿಸಿ ಅಹಾಬನಿಗೆ, “ನನ್ನ ಸೈನಿಕರು ಸಮಾರ್ಯದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಬಿಟ್ಟರೆ ದೇವರುಗಳು ನನಗೆ ಇದಕ್ಕಿಂತ ಹೆಚ್ಚಾಗಿ ನನಗೆ ಕೆಟ್ಟದ್ದನ್ನು ಮಾಡಲಿ,” ಎಂದು ಅವನಿಗೆ ಇನ್ನೊಂದು ಸುದ್ದಿಯನ್ನು ಹೇಳಿ ಕಳುಹಿಸಿದನು.


ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.


ಆಗ ಅಸ್ಸೀರಿಯದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡನು.


ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?


ಇದಾಗದಿದ್ದರೆ ನನ್ನ ಯಜಮಾನನ ಸೇವಕರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯನ್ನು ಹೇಗೆ ಎದುರಿಸುತ್ತೀ? ನೀನು ರಥಗಳಿಗೋಸ್ಕರವೂ, ರಾಹುತರಿಗೋಸ್ಕರವೂ ಈಜಿಪ್ಟಿನ ಮೇಲೆ ಭರವಸೆ ಇಟ್ಟಿದ್ದೀಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು