ಯೆಶಾಯ 36:9 - ಕನ್ನಡ ಸಮಕಾಲಿಕ ಅನುವಾದ9 ಇದಾಗದಿದ್ದರೆ ನನ್ನ ಯಜಮಾನನ ಸೇವಕರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯನ್ನು ಹೇಗೆ ಎದುರಿಸುತ್ತೀ? ನೀನು ರಥಗಳಿಗೋಸ್ಕರವೂ, ರಾಹುತರಿಗೋಸ್ಕರವೂ ಈಜಿಪ್ಟಿನ ಮೇಲೆ ಭರವಸೆ ಇಟ್ಟಿದ್ದೀಯೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಇದೂ ನಿನಗೆ ಅಸಾಧ್ಯವಾಗುವುದಾದರೆ ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ನಿನ್ನಿಂದ ಹೇಗೆ ಸಾಧ್ಯವಾಗುತ್ತದೆ? ರಥಾಶ್ವಬಲಗಳಿಗಾಗಿ ನೀನು ಐಗುಪ್ತ್ಯರನ್ನು ನಂಬಿಕೊಂಡಿರುವಂತೆ ಕಾಣುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದು ಕೂಡ ನಿನಗೆ ಅಸಾಧ್ಯವಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ಹೇಗೆ? ರಥಾಶ್ವಬಲಗಳಿಗಾಗಿ ಈಜಿಪ್ಟಿನವರನ್ನು ನೀನು ನಂಬಿಕೊಂಡಿರುವಂತೆ ಕಾಣುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದೂ ನಿನಗೆ ಅಸಾಧ್ಯವಾಗುವದಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವದು ಹೇಗೆ? ರಥಾಶ್ವಬಲಗಳಿಗಾಗಿ ಐಗುಪ್ತ್ಯರನ್ನು ನಂಬಿರುತ್ತೀಯೆಂದು ಕಾಣುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಹೀಗಿದ್ದರೂ ನನ್ನ ಒಡೆಯನ ಸೈನ್ಯಾಧಿಕಾರಿಗಳಲ್ಲಿ ಕನಿಷ್ಠನಾದವನನ್ನು ಸೋಲಿಸಲು ನಿಮ್ಮಿಂದಾಗದು. ಆದ್ದರಿಂದ ನೀವು ಈಜಿಪ್ಟಿನವರ ಅಶ್ವದಳದ ಮೇಲೆ ಯಾಕೆ ಭರವಸವಿಡುತ್ತೀರಿ? ಅಧ್ಯಾಯವನ್ನು ನೋಡಿ |