Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:1 - ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಈ ವರದಿಯನ್ನು ಕೇಳಿದ ಹಿಜ್ಕೀಯನು ಕೂಡ ಬಟ್ಟೆಯನ್ನು ಹರಿದುಕೊಂಡು, ಗೋಣಿತಟ್ಟನ್ನು ಕಟ್ಟಿಕೊಂಡು, ಸರ್ವೇಶ್ವರ ಸ್ವಾಮಿಯ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಹಿಜ್ಕೀಯನು ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅರಸನಾದ ಹಿಜ್ಕೀಯನು ಎಲ್ಲಾ ವಿಷಯಗಳನ್ನು ಕೇಳಿ ಮನಸ್ಸಿನಲ್ಲಿ ಬಹಳ ದುಃಖಪಟ್ಟು ತನ್ನ ಬಟ್ಟೆಗಳನ್ನು ಹರಿದುಕೊಂಡನು. ತರುವಾಯ ಶೋಕವಸ್ತ್ರವನ್ನು ಧರಿಸಿ ದೇವಾಲಯದೊಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:1
13 ತಿಳಿವುಗಳ ಹೋಲಿಕೆ  

ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.


ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ, ನಾನು ನನ್ನ ಶೋಕ ಸ್ಥಿತಿಯಿಂದ ಎದ್ದು, ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದುಕೊಂಡವನಾಗಿ, ನನ್ನ ಮೊಣಕಾಲುಗಳನ್ನೂರಿ, ನನ್ನ ಕೈಗಳನ್ನು ನನ್ನ ದೇವರಾಗಿರುವ ಯೆಹೋವ ದೇವರ ಮುಂದೆ ಚಾಚಿ,


ಅರಸನು ಮೋಶೆಯ ನಿಯಮದ ಪುಸ್ತಕದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.


“ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.


ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ, ಅವರ ಸೇವಕರಾದ ಒಬ್ಬರಾದರೂ ಹೆದರಲಿಲ್ಲ.


ಯೆಹೂದದ ಅರಸನಾದ ಹಿಜ್ಕೀಯನೂ, ಎಲ್ಲಾ ಯೆಹೂದ್ಯರೂ ಅವನನ್ನು ಕೊಂದು ಹಾಕಿದರೋ? ಇಲ್ಲವೇ ಇಲ್ಲ. ಅವನು ಯೆಹೋವ ದೇವರಿಗೆ ಭಯಪಟ್ಟು, ಯೆಹೋವ ದೇವರ ಸಮ್ಮುಖದಲ್ಲಿ ಮೊರೆಯಿಟ್ಟನಲ್ಲವೋ? ಆಮೇಲೆ ಯೆಹೋವ ದೇವರು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು!” ಎಂದರು.


ಇದರ ನಿಮಿತ್ತ ಅರಸನಾದ ಹಿಜ್ಕೀಯನೂ, ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.


ಆದದ್ದೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯನ್ನು ಹಚ್ಚಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ಬಹು ದುಃಖದಿಂದ ಗೋಳಾಡಿದನು.


ಆ ದಿವಸದಲ್ಲಿ ಅತ್ತು, ದುಃಖಿಸಿ, ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಳ್ಳಬೇಕೆಂದು ಸರ್ವಶಕ್ತ ದೇವರಾದ ಯೆಹೋವ ದೇವರು ನಿಮ್ಮನ್ನು ಕರೆದರು.


ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು