Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:10 - ಕನ್ನಡ ಸಮಕಾಲಿಕ ಅನುವಾದ

10 “ಹಿಜ್ಕೀಯನೇ, ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಹಿಜ್ಕೀಯನೇ, ನೀನು ನಂಬುವ ದೇವರು, ‘ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವುದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ಹೇಳಿ, ನಿನ್ನನ್ನು ಮೋಸಗೊಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 [ಹಿಜ್ಕೀಯನೇ,] ನೀನು ನಂಬುವ ದೇವರು - ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಯೆಹೂದದ ಅರಸನಾದ ಹಿಜ್ಕೀಯನಿಗೆ ನೀವು ಹೀಗೆ ಹೇಳಬೇಕು: ‘ನೀನು ನಂಬುವ ದೇವರಿಂದ ನೀನು ಮೋಸ ಹೋಗಬೇಡ. “ಜೆರುಸಲೇಮ್ ಅಶ್ಶೂರದ ಅರಸನ ಕೈಯಿಂದ ಸೋಲಿಸಲ್ಪಡಲು ದೇವರು ಅವಕಾಶ ಕೊಡುವುದಿಲ್ಲ” ಎಂದು ಹೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:10
11 ತಿಳಿವುಗಳ ಹೋಲಿಕೆ  

ಇದಲ್ಲದೆ, ‘ಯೆಹೋವ ದೇವರು ನಮ್ಮನ್ನು ನಿಶ್ಚಯವಾಗಿ ರಕ್ಷಿಸುವರೆಂದೂ, ಈ ಪಟ್ಟಣವು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲವೆಂದೂ ಹಿಜ್ಕೀಯನು ನಿಮಗೆ ಯೆಹೋವ ದೇವರಲ್ಲಿ ಭರವಸೆ ಇಡುವಂತೆ ಮಾಡುವರು.’


ಈತನು ದೇವರಲ್ಲಿ ಭರವಸೆ ಇಟ್ಟಿದ್ದಾನೆ. ದೇವರಿಗೆ ಈತನಲ್ಲಿ ಇಷ್ಟವಿದ್ದರೆ, ದೇವರೇ ಈತನನ್ನು ಈಗ ಬಿಡಿಸಲಿ, ಏಕೆಂದರೆ ಈತನು, ‘ನಾನು ದೇವಪುತ್ರನು’ ಎಂದು ಹೇಳಿದ್ದಾನೆ,” ಎಂದರು.


ಈ ದೇಶಗಳ ಸಮಸ್ತ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ, ಯೆಹೋವ ದೇವರು ಯೆರೂಸಲೇಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.


ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು: “ ‘ಮಹಾರಾಜನಾದ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ಈ ನಿನ್ನ ಭರವಸೆಗೆ ಆಧಾರ ಏನು?


“ಆತನು ಯೆಹೋವ ದೇವರ ಮೇಲೆ ಭರವಸೆಯಿಟ್ಟಿದ್ದಾನಲ್ಲಾ, ಯೆಹೋವ ದೇವರೇ ಆತನನ್ನು ಕಾಪಾಡಲಿ. ಯೆಹೋವ ದೇವರು ಆತನಲ್ಲಿ ಹರ್ಷಿಸುವುದಾದರೆ, ಅವರೇ ಆತನನ್ನು ಬಿಡಿಸಲಿ.”


ಹಿಜ್ಕೀಯನು ಇಸ್ರಾಯೇಲಿನ ಯೆಹೋವ ದೇವರಲ್ಲಿ ಭರವಸೆವುಳ್ಳವನಾಗಿದ್ದನು. ಅವನಿಗೆ ಮುಂಚೆ ಇದ್ದವರಲ್ಲಿಯೂ, ಅವನ ತರುವಾಯ ಯೆಹೂದದ ಸಮಸ್ತ ಅರಸುಗಳಲ್ಲಿಯೂ ಅವನ ಹಾಗೆ ಒಬ್ಬರೂ ಇರಲಿಲ್ಲ.


ಅರಸನು ಹೇಳುವುದೇನೆಂದರೆ: ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿರಿ ಏಕೆಂದರೆ ಅವನು ನಿಮ್ಮನ್ನು ಬಿಡಿಸಲು ಶಕ್ತನಲ್ಲ.


ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು