29 ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ; ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.
29 ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.
29 ನೀನು ನನಗೆ ವಿರೋಧವಾಗಿ ಕುಪಿತನಾಗಿರುವದೂ ಉಬ್ಬಿಕೊಂಡಿರುವದೂ ನನಗೆ ತಿಳಿದುಬಂತು. ಆದದರಿಂದ ನಿನಗೆ ಮೂಗುದಾರವನ್ನೂ ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿದ್ದಾನೆ.
29 ಹೌದು, ನೀನು ನನ್ನ ವಿಷಯದಲ್ಲಿ ಕೋಪಗೊಂಡಿರುವೆ. ಗರ್ವದಿಂದ ತುಂಬಿದ ನಿನ್ನ ಪರಿಹಾಸ್ಯದ ಮಾತುಗಳನ್ನು ನಾನು ಕೇಳಿದ್ದೇನೆ. ನಾನು ನಿನ್ನ ಮೂಗಿಗೆ ಕೊಕ್ಕೆ ಸಿಕ್ಕಿಸಿ, ನಿನ್ನ ಬಾಯಿಗೆ ಕಡಿವಾಣವನ್ನು ಹಾಕಿ, ನೀನು ಎಲ್ಲಿಂದ ಬಂದಿದ್ದೆಯೋ ಅಲ್ಲಿಗೆ ನಿನ್ನನ್ನು ಹಿಂತಿರುಗಿಸುತ್ತೇನೆ.”
ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕುವೆನು. ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಮತ್ತು ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಚಿಕ್ಕ ಮತ್ತು ದೊಡ್ಡ ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗಗಳನ್ನು ಹಿಡಿದಿರುವರು.
ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”
ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಯೊಳಗಿಂದ ಮೇಲೆ ಎಳೆದು ನಿನ್ನ ಮೀನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು.
ಇದನ್ನು ಹೇಳುವವರೆಗೆ ಜನರು ಪೌಲನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಅನಂತರ ಅವರು ತಮ್ಮ ಸ್ವರವೆತ್ತಿ, “ಇಂಥವನನ್ನು ಭೂಲೋಕದಿಂದ ತೊಲಗಿಸಿರಿ! ಇವನು ಜೀವಿಸುವುದಕ್ಕೆ ಯೋಗ್ಯನಲ್ಲ!” ಎಂದು ಕೂಗಿದರು.
ಪಿಲಾತನು ತನ್ನ ಯತ್ನ ನಡೆಯಲಿಲ್ಲವೆಂದೂ ಅದಕ್ಕೆ ಬದಲಾಗಿ ಗದ್ದಲವೇ ಹೆಚ್ಚಾಗುತ್ತದೆಂದೂ ನೋಡಿ, ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು, “ಈ ನೀತಿವಂತನ ರಕ್ತದ ವಿಷಯದಲ್ಲಿ ನಾನು ನಿರಪರಾಧಿ, ಇದಕ್ಕೆ ನೀವೇ ಜವಾಬ್ದಾರಿ,” ಎಂದನು.
“ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು. ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು. ಎಂದು ಸಾರ್ವಭೌಮ ಯೆಹೋವ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.
ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’ ” ಎಂದು ಹೇಳಿದನು.