ಯೆಶಾಯ 37:3 - ಕನ್ನಡ ಸಮಕಾಲಿಕ ಅನುವಾದ3 ಆಗ ಅವರು ಯೆಶಾಯನಿಗೆ, “ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೀಗೆ ಹೇಳುತ್ತಾನೆ, ‘ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನಿಗೆ ಹೀಗೆಂದು ಹೇಳಿ : ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ. ಹೆರಿಗೆಯ ಕಾಲ ಬಂದಿದೆ, ಆದರೆ ಹೆರುವುದಕ್ಕೆ ಶಕ್ತಿ ಸಾಲದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರು ಅದರಂತೆ ಯೆಶಾಯನ ಬಳಿಯಲ್ಲಿ - ಈ ದಿವಸದಲ್ಲಿ ನಮಗೆ ಮಹಾಕಷ್ಟವೂ ಶಿಕ್ಷೆಯೂ ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವದಕ್ಕೆ ಬಲ ಸಾಲದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇವರು ಯೆಶಾಯನಿಗೆ, “ಅರಸನಾದ ಹಿಜ್ಕೀಯನು ಈ ದಿವಸವನ್ನು ಶೋಕದ ದಿವಸವನ್ನಾಗಿ ಘೋಷಿಸಿದ್ದಾನೆ. ಇದು ದುಃಖದ ಸಮಯವಾಗಿದೆ. ಇದು ದಿನತುಂಬಿ ತಾಯಿಯ ಹೊಟ್ಟೆಯೊಳಗಿಂದ ಹೊರಬರಲು ಶಕ್ತವಾಗಿಲ್ಲದ ಕೂಸಿನಂತಿದೆ. ಅಧ್ಯಾಯವನ್ನು ನೋಡಿ |