ಯೆಶಾಯ 37:33 - ಕನ್ನಡ ಸಮಕಾಲಿಕ ಅನುವಾದ33 “ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “ಅವನು ಈ ಪಟ್ಟಣದೊಳಗೆ ಬರುವುದಿಲ್ಲ. ಅಲ್ಲಿ ಬಾಣವನ್ನು ಎಸೆಯುವುದಿಲ್ಲ. ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು. ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆತನು ಅಶ್ಶೂರದ ಅರಸನನ್ನು ಕುರಿತು, “ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದಕ್ಕೆ ಬಾಣವನ್ನೆಸೆಯುವುದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ, ಅದನ್ನು ಕೆಡವಿ ಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 “ಅಸ್ಸೀರಿಯದ ಅರಸನನ್ನು ಕುರಿತು ಸರ್ವೇಶ್ವರ ಹೇಳಿರುವ ಮಾತಿದು - ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದರತ್ತ ಬಾಣವನ್ನೆಸೆಯುವುದಿಲ್ಲ, ಕವಚಧಾರಿಗಳನ್ನು ಕಳುಹಿಸುವುದಿಲ್ಲ. ಅದರ ಆಕ್ರಮಣಕ್ಕಾಗಿ ಮಣ್ಣುದಿಬ್ಬಗಳನ್ನು ಎಬ್ಬಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆತನು ಅಶ್ಶೂರದ ಅರಸನನ್ನು ಕುರಿತು - ಅವನು ಪಟ್ಟಣವನ್ನು ಸಮೀಪಿಸುವದಿಲ್ಲ, ಅದಕ್ಕೆ ಬಾಣವನ್ನೆಸೆಯುವದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವದಿಲ್ಲ, ಅದನ್ನು ಕೆಡವಿಬಿಡುವದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದ್ದರಿಂದ ಯೆಹೋವನು ಅಶ್ಶೂರದ ಅರಸನ ಬಗ್ಗೆ ಹೇಳುವನು: “ಅವನು ಈ ಪಟ್ಟಣದೊಳಗೆ ಬರುವದಿಲ್ಲ. ಅವನು ಒಂದು ಬಾಣವನ್ನೂ ಈ ಪಟ್ಟಣದ ಮೇಲೆ ಹಾರಿಸುವದಿಲ್ಲ. ಅವನು ತನ್ನ ಗುರಾಣಿಗಳನ್ನು ಈ ಪಟ್ಟಣಕ್ಕೆ ತರುವದಿಲ್ಲ. ಈ ಪಟ್ಟಣದ ಗೋಡೆಗಳ ಮೇಲೆ ಆಕ್ರಮಣಮಾಡಲು ಅವನು ದಿಬ್ಬ ಹಾಕುವದಿಲ್ಲ. ಅಧ್ಯಾಯವನ್ನು ನೋಡಿ |