Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:36 - ಕನ್ನಡ ಸಮಕಾಲಿಕ ಅನುವಾದ

36 ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆ ರಾತ್ರಿ, ಯೆಹೋವನ ದೂತನು ಹೊರಟುಹೋಗಿ ಅಶ್ಶೂರದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಸಂಹರಿಸಿದನು. ಜನರು ಬೆಳಿಗ್ಗೆ ಎದ್ದಾಗ ಸುತ್ತಲೂ ಹೆಣಗಳು ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:36
29 ತಿಳಿವುಗಳ ಹೋಲಿಕೆ  

ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”


ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಆಗ ಅಸ್ಸೀರಿಯದವರು ಖಡ್ಗದಿಂದ ಬೀಳುವರು. ಅದು ಮನುಷ್ಯರ ಖಡ್ಗವಲ್ಲ, ಖಡ್ಗವು ಅವರನ್ನು ನುಂಗುವುದು. ಅದು ಮಾನವ ಖಡ್ಗವಲ್ಲ. ಅವರು ಖಡ್ಗದಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಜೀತದಾಳುಗಳಾಗುವರು.


ದೂತನು ಯೆರೂಸಲೇಮನ್ನು ನಾಶಮಾಡಲು, ಅದರ ಮೇಲೆ ತನ್ನ ಕೈಚಾಚಿದಾಗ, ಯೆಹೋವ ದೇವರು ಆ ದಂಡನೆಗಾಗಿ ನೊಂದುಕೊಂಡು, ಜನರನ್ನು ಸಂಹರಿಸುತ್ತಿದ್ದ ದೇವದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಅರೌನನ ಕಣದ ಬಳಿಯಲ್ಲಿ ಇದ್ದನು.


ಹೆರೋದನು ದೇವರಿಗೆ ಸಲ್ಲಿಸಬೇಕಾದ ಮಹಿಮೆ ಸಲ್ಲಿಸದೇ ಹೋದದ್ದರಿಂದ ಕೂಡಲೇ ಒಬ್ಬ ದೇವದೂತನು ಅವನನ್ನು ಹೊಡೆಯಲು ಅವನು ಹುಳ ಬಿದ್ದು ಸತ್ತುಹೋದನು.


ಅವರು ಸ್ವಲ್ಪಕಾಲ ಉನ್ನತವಾಗಿದ್ದು ನಂತರ ಇಲ್ಲದೆ ಹೋಗುತ್ತಾರೆ; ಅವರು ಎಲ್ಲಾ ಮನುಷ್ಯರಂತೆ ಕೊಯ್ದ ತೆನೆಯ ಹಾಗೆ ಕೆಳಗೆ ಬಿದ್ದು ಕಾಳಿನಂತೆ ಬೇರ್ಪಡುತ್ತಾರೆ.


ಆಗ ದಾವೀದನು ತನ್ನ ಕಣ್ಣೆತ್ತಿ ಭೂಮಿಗೂ, ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಯೆಹೋವ ದೇವರ ದೂತನನ್ನು ಕಂಡನು. ಅವನ ಕೈಯಲ್ಲಿ ಯೆರೂಸಲೇಮಿನ ಮೇಲೆ ಚಾಚಿದ್ದ ಹಿರಿದ ಖಡ್ಗ ಇತ್ತು. ಆಗ ದಾವೀದನೂ, ಇಸ್ರಾಯೇಲಿನ ಹಿರಿಯರೂ ಗೋಣಿತಟ್ಟುಗಳನ್ನು ಹೊದ್ದುಕೊಂಡು ಬೋರಲಾಗಿ ಬಿದ್ದರು.


ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ಮೂರು ತಿಂಗಳವರೆಗೆ ನಿನ್ನ ಶತ್ರುಗಳ ಹಿಂಸೆಗೆ ಬಲಿಯಾಗುವುದು ಬೇಕೋ? ಇಲ್ಲವೆ ಯೆಹೋವ ದೇವರ ದೂತನು ಇಸ್ರಾಯೇಲಿನ ಸಮಸ್ತ ಪ್ರಾಂತಗಳಲ್ಲಿ ಯೆಹೋವ ದೇವರ ಖಡ್ಗದಿಂದ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ನೀನು ಆರಿಸಿಕೋ. ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.


ಆಗ ಫರೋಹನೂ, ಅವನ ಎಲ್ಲಾ ಅಧಿಕಾರಿಗಳೂ, ಎಲ್ಲಾ ಈಜಿಪ್ಟಿನವರೂ ರಾತ್ರಿಯಲ್ಲಿ ಎದ್ದರು. ಆ ಈಜಿಪ್ಟಿನಲ್ಲಿ ದೊಡ್ಡ ಗೋಳಾಟವಾಯಿತು. ಏಕೆಂದರೆ ಅಲ್ಲಿ ಸತ್ತವರು ಇಲ್ಲದ ಒಂದು ಮನೆಯಾದರೂ ಇರಲಿಲ್ಲ.


ಏಕೆಂದರೆ ಯೆಹೋವ ದೇವರು ಈಜಿಪ್ಟಿನವರನ್ನು ಸಂಹರಿಸುವುದಕ್ಕಾಗಿ ಹಾದುಹೋಗುವರು. ಅವರು ಅಡ್ಡ ಪಟ್ಟಿಯ ಮೇಲೂ, ಅದರ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ, ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡದಂತೆ, ಯೆಹೋವ ದೇವರು ನಿಮ್ಮ ಬಾಗಿಲುಗಳನ್ನು ದಾಟಿಹೋಗುವರು.


ಸೇನಾಧೀಶ್ವರ ಯೆಹೋವ ದೇವರು ಓರೇಬ್ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ, ಅವರು ಕೋಲನ್ನು ಸಮುದ್ರದ ಮೇಲೆ ಚಾಚಿ, ಈಜಿಪ್ಟಿನವರ ಮೇಲೆ ಎತ್ತಿದಂತೆ ಎತ್ತುವರು.


ಆಕೆಯನ್ನು ಹೊಡೆದವರನ್ನು ಆತನು ಹೊಡೆದಂತೆ ಯೆಹೋವ ದೇವರು ಆಕೆಯನ್ನು ಹೊಡೆದರೋ? ಆಕೆಯನ್ನು ಕೊಂದವರು ಹತರಾದಂತೆ ಆಕೆಯು ಸಂಹಾರವಾದಳೋ?


ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು.


ಅವರು ಅಸ್ಸೀರಿಯ ದೇಶವನ್ನು ಖಡ್ಗದಿಂದಲೂ ನಿಮ್ರೋದನ ದೇಶವನ್ನು ಹಿಡಿದ ಖಡ್ಗದಿಂದಲೂ ಆಳುವರು. ಅಸ್ಸೀರಿಯವು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರದೇಶವನ್ನು ಮುತ್ತಿಗೆ ಹಾಕಿ ಪ್ರಾಂತಗಳಲ್ಲಿ ನಡೆಯುವಾಗ ಆತನು ನಮ್ಮನ್ನು ತಪ್ಪಿಸುವನು.


ಸವಾರರು ಹತ್ತುತ್ತಾರೆ, ಈಟಿಗಳು ಥಳಥಳಿಸುತ್ತವೆ, ಖಡ್ಗಗಳು ಮಿಂಚುತ್ತವೆ, ಹತರಾದವರು ಬಹಳ; ಹೆಣಗಳ ರಾಶಿ; ಅಸಂಖ್ಯಾತ ಮೃತ ದೇಹಗಳು, ಶವಗಳ ಮೇಲೆ ತತ್ತರಿಸುತ್ತಿರುವ ಜನರು,


ಜನರು ಮಧ್ಯರಾತ್ರಿಯಲ್ಲಿ ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಅವರು ತಲ್ಲಣಗೊಂಡು ಇಲ್ಲದೆ ಹೋಗುತ್ತಾರೆ; ಪರಾಕ್ರಮಿಗಳು ಸಹ ಮಾನವರ ಕೈ ಒಳಪಡದೆ ಗತಿಸಿಹೋಗುತ್ತಾರೆ.”


ನನ್ನ ಕೋಪವು ಅವರ ದಂಡನೆಗಾಗುವುದು; ಆದ್ದರಿಂದ ಇನ್ನು ಸ್ವಲ್ಪಕಾಲದಲ್ಲಿ ಕೋಪವು ತೀರಿಹೋಗುವುದು.


ಅದೂ ಅಲ್ಲದೆ ನಿನ್ನ ವೈರಿಗಳ ಗುಂಪು ಸೂಕ್ಷ್ಮವಾದ ಧೂಳಿನಂತಾಗುವುದು. ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರುವುದು. ಹೌದು, ಅದು ಕ್ಷಣಮಾತ್ರದಲ್ಲಿ ಫಕ್ಕನೆ ಆಗುವುದು.


ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರೊಂದಿಗೆ ಒಪ್ಪಂದ ಮಾಡಿಕೊಂಡವರಿದ್ದರೂ, ಅವರು ಬಹುಮಂದಿಯಾಗಿದ್ದರೂ ನಾಶಕ್ಕೆ ಒಳಗಾಗುವರು. ಯೆಹೂದವೇ, ನಾನು ನಿನ್ನನ್ನು ಕಷ್ಟಪಡಿಸಿದಾಗ್ಯೂ, ಇನ್ನು ಮೇಲೆ ಕಷ್ಟಪಡಿಸೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು