ಯೆಶಾಯ 37:8 - ಕನ್ನಡ ಸಮಕಾಲಿಕ ಅನುವಾದ8 ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನವನ್ನು ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣದ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಸ್ಸೀರಿಯದ ಸೇನಾಪತಿಯು ತನ್ನ ಅರಸನು ಲಾಕೀಷನ್ನು ಬಿಟ್ಟು ಲಿಬ್ನಕ್ಕೆ ಹೋಗಿ ಆ ರಾಜ್ಯದ ವಿರುದ್ಧ ಯುದ್ಧಮಾಡುತ್ತಿರುವುದಾಗಿ ಸಮಾಚಾರ ಪಡೆದನು. ಆದುದರಿಂದ ಅವನು ಅಲ್ಲಿಗೆ ತೆರಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8-9 ಅಶ್ಶೂರದ ಅರಸನಿಗೆ ಒಂದು ಸಂದೇಶವು ಬಂದು ತಲುಪಿತು. ಅದರಲ್ಲಿ, “ಇಥಿಯೋಪ್ಯದ ಅರಸನಾದ ತಿರ್ಹಾಕನು ನಿನ್ನೊಂದಿಗೆ ಯುದ್ಧಮಾಡಲು ಬರುತ್ತಿದ್ದಾನೆ” ಎಂದು ಬರೆದಿತ್ತು. ಅದನ್ನು ಕೇಳಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಲಿಬ್ನಕ್ಕೆ ಹೋದನು. ಸೇನಾದಂಡನಾಯಕನಿಗೆ ಈ ಸಮಾಚಾರ ಮುಟ್ಟಿದ ಕೂಡಲೇ ಅವನು ತನ್ನ ಅರಸನು ಯುದ್ಧಮಾಡುತ್ತಿದ್ದ ಲಿಬ್ನ ಪಟ್ಟಣಕ್ಕೆ ಹೋದನು. ಅಲ್ಲಿಂದ ಅವನು ಹಿಜ್ಕೀಯನ ಬಳಿಗೆ ತನ್ನ ದೂತರನ್ನು ಕಳುಹಿಸಿ, ಅಧ್ಯಾಯವನ್ನು ನೋಡಿ |