Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:1 - ಕನ್ನಡ ಸಮಕಾಲಿಕ ಅನುವಾದ

1 ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡು. ಏಕೆಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ದಿನಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ. ಆದುದರಿಂದ ನಿನ್ನ ಸಂಸಾರವನ್ನು ವ್ಯವಸ್ಥೆಮಾಡಬೇಕು ಎಂದು ಸರ್ವೇಶ್ವರ ಹೇಳಿದ್ದಾರೆ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ - ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆಮಾಡು; ಏಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಸಮಯದಲ್ಲಿ ಹಿಜ್ಕೀಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ಈ ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನೆ: ‘ನೀನು ಬೇಗನೇ ಸಾಯುವೆ. ಆದ್ದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:1
16 ತಿಳಿವುಗಳ ಹೋಲಿಕೆ  

ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಅವನು ಯೆಹೋವ ದೇವರನ್ನು ಪ್ರಾರ್ಥಿಸಲು, ದೇವರು ಅವನ ಸಂಗಡ ಮಾತನಾಡಿ ಅವನಿಗೆ ಒಂದು ಅದ್ಭುತವಾದ ಗುರುತನ್ನು ಕೊಟ್ಟರು.


ಆದರೆ ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ, ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ, ತನ್ನ ಪಟ್ಟಣದಲ್ಲಿರುವ ತನ್ನ ಮನೆಗೆ ಹೋದನು. ಅವನು ಮನೆಯನ್ನು ಕ್ರಮಪಡಿಸಿ, ಉರುಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು.


ಆ ಸಮಯದಲ್ಲಿ ಆಕೆ ಅಸ್ವಸ್ಥಳಾಗಿ ಸತ್ತುಹೋದಳು. ಆಕೆಯ ಶವಕ್ಕೆ ಸ್ನಾನಮಾಡಿಸಿ, ಅದನ್ನು ಮೇಲೆ ಮಾಳಿಗೆಯ ಕೋಣೆಯಲ್ಲಿ ಇಟ್ಟರು.


ಆಗ ಯೋನನು ಒಂದು ದಿವಸದ ಪ್ರಯಾಣಮಾಡಿ, ಪಟ್ಟಣದಲ್ಲಿ ಪ್ರವೇಶಿಸಿ, “ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ನಾಶವಾಗುವುದು,” ಎಂದು ಕೂಗಿ ಹೇಳಿದನು.


ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ, “ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು, ಇಸ್ರಾಯೇಲಿನ ಯೆಹೋವ ದೇವರಿಗೆ ಪ್ರಾರ್ಥನೆ ಮಾಡಿದ್ದನ್ನು ಕೇಳಿ,


ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.


ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಅದಕ್ಕವನು, “ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಯೆಹೋವ ದೇವರು ನನಗೆ ದಯಮಾಡುವರೋ ಎಂದು ಉಪವಾಸ ಮಾಡಿ ಅತ್ತೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು