ಯೆಶಾಯ 38:15 - ಕನ್ನಡ ಸಮಕಾಲಿಕ ಅನುವಾದ15 ಆದರೆ, ನಾನು ಏನು ಹೇಳಲಿ, ಆತನು ನನಗೆ ಮಾತುಕೊಟ್ಟು, ತಾನೇ ಅದನ್ನು ನೆರವೇರಿಸಿದ್ದಾನೆ. ನನ್ನ ಆತ್ಮಕ್ಕೆ ಸಂಭವಿಸಿದ ದುಃಖದಲ್ಲಿ ನನ್ನ ವರುಷಗಳಲ್ಲೆಲ್ಲಾ ವಿನಯದಿಂದ ನಡೆಯುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾನು ಏನು ಹೇಳಲಿ! ಆತನು ನನಗೆ ಮಾತುಕೊಟ್ಟು ಅದರಂತೆ ತಾನೇ ನೆರವೇರಿಸಿದ್ದಾನೆ! ನನ್ನ ಆತ್ಮಕ್ಕೆ ಸಂಭವಿಸಿದ ದುಃಖವನ್ನು ಸ್ಮರಿಸುತ್ತಾ ನನ್ನ ಜೀವಮಾನದಲ್ಲೆಲ್ಲಾ ಮೆಲ್ಲಗೆ ನಡೆಯುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನುಡಿದಂತೆ ಪ್ರಭೂ ನೆರವೇರಿಸಿಹನು; ನಾನೇನು ಹೇಳಲಿ; ಮುಳುಗಿದೆ ನನ್ನಾತ್ಮ ದುಃಖಸಾಗರದಲಿ ನಿದ್ರೆಯಿಲ್ಲದೆ ಸೊರಗುತಿದೆ ನನ್ನ ಜೀವಮಾನವಿಡೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಾನು ಏನು ಹೇಳಲಿ! ಆತನು ನನಗೆ ಮಾತು ಕೊಟ್ಟು ತಾನೇ ನೆರವೇರಿಸಿದ್ದಾನೆ! ನನ್ನ ಆತ್ಮಕ್ಕೆ ಸಂಭವಿಸಿದ ದುಃಖವನ್ನು ಸ್ಮರಿಸುತ್ತಾ ನನ್ನ ಜೀವಮಾನದಲ್ಲೆಲ್ಲಾ ಮೆಲ್ಲಗೆ ನಡೆಯುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾನೇನು ಹೇಳಲಿ? ನನಗೆ ಸಂಭವಿಸಲಿರುವುದನ್ನು ನನ್ನ ಒಡೆಯನು ತಿಳಿಸಿದ್ದಾನೆ. ನನ್ನ ಒಡೆಯನು ಅದನ್ನು ನೆರವೇರಿಸುತ್ತಾನೆ. ನನ್ನ ಆತ್ಮದಲ್ಲಿ ಸಂಕಟಗಳೆಲ್ಲಾ ತುಂಬಿವೆ. ನಾನು ನನ್ನ ಜೀವಮಾನವೆಲ್ಲಾ ದೀನನಾಗುವೆನು. ಅಧ್ಯಾಯವನ್ನು ನೋಡಿ |