ಯೆಶಾಯ 38:18 - ಕನ್ನಡ ಸಮಕಾಲಿಕ ಅನುವಾದ18 ಸಮಾಧಿಯು ನಿನ್ನನ್ನು ಹೊಗಳುವುದಿಲ್ಲ. ಮರಣವು ನಿನ್ನನ್ನು ಕೊಂಡಾಡುವುದಿಲ್ಲ. ಕುಣಿಯೊಳಕ್ಕೆ ಹೋಗುವವರು ನಿಮ್ಮ ಸತ್ಯತೆಯಲ್ಲಿ ಭರವಸವಿಡಲಾರರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಪಾತಾಳದವರು ನಿನ್ನನ್ನು ಸ್ತುತಿಸುವುದಿಲ್ಲ, ಸತ್ತವರು ನಿನ್ನನ್ನು ಕೀರ್ತಿಸುವುದಿಲ್ಲ, ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯ ಸಂಧತೆಯನ್ನು ಆಶ್ರಯಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸತ್ತವರು ನಿನ್ನನ್ನು ಕೀರ್ತಿಸರು ಪಾತಾಳದವರು ನಿನ್ನನ್ನು ಸ್ತುತಿಸರು ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯಸಂಧತೆಯನ್ನು ಆಶ್ರಯಿಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಪಾತಾಳದವರು ನಿನ್ನನ್ನು ಸ್ತುತಿಸರು, ಸತ್ತವರು ನಿನ್ನನ್ನು ಕೀರ್ತಿಸರು, ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯಸಂಧತೆಯನ್ನು ಆಶ್ರಯಿಸಲಾರರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಸತ್ತವರು ನಿನ್ನನ್ನು ಸ್ತುತಿಸುವದಿಲ್ಲ. ಪಾತಾಳದಲ್ಲಿರುವ ಜನರು ನಿನ್ನನ್ನು ಸ್ತುತಿಸುವದಿಲ್ಲ. ಸತ್ತುಹೋದವರು ಸಹಾಯಕ್ಕಾಗಿ ನಿನ್ನ ಮೇಲೆ ಭರವಸವಿಡರು. ಅವರು ಭೂಮಿಯಲ್ಲಿರುವ ಆಳವಾದ ಕುಣಿಗೆ ಸೇರುವರು. ಅವರು ತಿರುಗಿ ಮಾತನಾಡುವದೇ ಇಲ್ಲ. ಅಧ್ಯಾಯವನ್ನು ನೋಡಿ |