Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:3 - ಕನ್ನಡ ಸಮಕಾಲಿಕ ಅನುವಾದ

3 “ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹಿಜ್ಕೀಯನು, “ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಸರ್ವೇಶ್ವರಾ, ನಿಮಗೆ ಶ್ರದ್ಧೆಯಿಂದಲೂ, ಪ್ರಾಮಾಣಿಕತೆಯಿಂದಲೂ ಸೇವೆಮಾಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಂಡಿದ್ದೇನೆ. ಇದನ್ನು ದಯೆಯಿಂದ ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪುಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಯೆಹೋವನೇ, ನಾನು ನಿನಗೆ ಪೂರ್ಣಹೃದಯದಿಂದ ನಂಬಿಗಸ್ತನಾಗಿ ಸೇವೆಮಾಡಿದ್ದನ್ನು ಜ್ಞಾಪಿಸಿಕೋ. ನಿನಗೆ ಇಷ್ಟವಾದದ್ದನ್ನೆಲ್ಲ ನಾನು ಮಾಡಿದ್ದೇನೆ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:3
40 ತಿಳಿವುಗಳ ಹೋಲಿಕೆ  

ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.


ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


ನನ್ನ ದೇವರೇ, ಇದಕ್ಕಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ. ನಾನು ನನ್ನ ದೇವರ ಆಲಯಕ್ಕೋಸ್ಕರವೂ, ಅದರ ಸೇವೆಗೋಸ್ಕರವೂ ನಂಬಿಗಸ್ತಿಕೆಯಿಂದ ಮಾಡಿದ ಭಕ್ತಿಕಾರ್ಯಗಳನ್ನು ಅಳಿಸಿಬಿಡಬೇಡಿರಿ.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ನತಾನಯೇಲನು ತಮ್ಮ ಬಳಿಗೆ ಬರುವುದನ್ನು ಯೇಸು ಕಂಡು ಅವನ ವಿಷಯವಾಗಿ, “ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ,” ಎಂದು ಹೇಳಿದರು.


ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಂಡು ಬಂದು ಸಬ್ಬತ್ ದಿನವನ್ನು ಪರಿಶುದ್ಧವಾಗಿ ಆಚರಿಸಬೇಕೆಂದೂ, ಬಾಗಿಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕಾಗಿ ಸಹ ನೀವು ನನ್ನನ್ನು ನೆನಸಿ, ನಿಮ್ಮ ಮಹಾ ಪ್ರೀತಿಯ ಪ್ರಕಾರ ನನ್ನನ್ನು ಕರುಣಿಸಿರಿ.


“ನನ್ನ ದೇವರೇ, ನಾನು ಈ ಜನರಿಗೆ ಮಾಡಿದ ಎಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಮಾಡಿರಿ,” ಎಂದು ಪ್ರಾರ್ಥಿಸಿದೆ.


ನಿಮಗೆ ಒಳ್ಳೆಯದಾಗುವಂತೆಯೂ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ಒಳ್ಳೆಯ ದೇಶವನ್ನು ನೀವು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವಂತೆಯೂ ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೂ, ಒಳ್ಳೆಯದನ್ನೂ ಮಾಡಿರಿ.


ಕೆಟ್ಟದ್ದನ್ನು ಮಾಡುವವರೇ, ನೀವೆಲ್ಲರು ನನ್ನಿಂದ ತೊಲಗಿಹೋಗಿರಿ, ಏಕೆಂದರೆ ಯೆಹೋವ ದೇವರು ನನ್ನ ಗೋಳಾಟವನ್ನು ಕೇಳಿದ್ದಾರೆ.


ಇದಲ್ಲದೆ ನಿಮ್ಮ ಆಜ್ಞೆಗಳನ್ನೂ, ನಿಮ್ಮ ಸಾಕ್ಷಿಗಳನ್ನೂ, ನಿಮ್ಮ ಕಟ್ಟಳೆಗಳನ್ನೂ ಕೈಗೊಳ್ಳಲೂ, ಸಮಸ್ತವನ್ನು ಮಾಡಲೂ ನಾನು ಯಾವುದಕ್ಕೋಸ್ಕರ ಸಿದ್ಧ ಮಾಡಿದೆನೋ, ಆ ಮಹಾ ಕಟ್ಟಡವನ್ನು ಕಟ್ಟಿಸಲೂ, ನನ್ನ ಮಗನಾದ ಸೊಲೊಮೋನನಿಗೆ ಪೂರ್ಣ ಹೃದಯವನ್ನು ಕೊಡಿರಿ,” ಎಂದನು.


ಯಾಕೋಬನು ದೇವದೂತನ ಸಂಗಡ ಹೋರಾಡಿ ಜಯಿಸಿದನು. ಅವನು ಅತ್ತು ಆತನ ಅನುಗ್ರಹಕ್ಕಾಗಿ ವಿಜ್ಞಾಪನೆಯನ್ನು ಸಲ್ಲಿಸಿದನು. ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು. ಅಲ್ಲಿ ಅವನು ಆತನೊಂದಿಗೆ ಮಾತನಾಡಿದನು.


ನಿಷ್ಕಳಂಕ ಹೃದಯದಿಂದ ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು, ಅದರಿಂದ ನಾನು ನಾಚಿಕೆಗೆ ಗುರಿಯಾಗದಿರುವೆನು.


ನಿಮ್ಮ ದುಃಖ ಬೇಸರದ ನಿಮಿತ್ತ, ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿದ್ದೇನೆ.


ಯೆಹೋವ ದೇವರು ಯಾರ ಅನ್ಯಾಯವನ್ನು ಎಣಿಸುವುದಿಲ್ಲವೋ, ಯಾರ ಆತ್ಮದಲ್ಲಿ ವಂಚನೆ ಇರುವುದಿಲ್ಲವೋ ಆ ಮನುಷ್ಯನು ಧನ್ಯನು.


ದೋಷರಹಿತ ಮಾರ್ಗದಲ್ಲಿ ನಡೆಯಲು ಜಾಗರೂಕನಾಗಿರುವೆನು; ನೀವು ಯಾವಾಗ ನನ್ನ ಬಳಿಗೆ ಬರುವಿರಿ? ನಾನು ನಿರ್ದೋಷ ಹೃದಯದಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.


ನಿಮ್ಮ ಒಡಂಬಡಿಕೆಯ ಪ್ರೀತಿಯು ಯಾವಾಗಲೂ ನನ್ನ ಮನಸ್ಸು ತುಂಬ ಇದೆ; ನಿಮ್ಮ ನಂಬಿಗಸ್ತಿಕೆಯಲ್ಲಿ ನಾನು ಬಾಳುತ್ತಿದ್ದೇನೆ.


ನಾನು ಯೆಹೋವ ದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ಅವರು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲೆನು.


ನೇಮಿತ ಕಾಲದಲ್ಲಿ ಸಲ್ಲತಕ್ಕ ಅರ್ಪಣೆಯ ಕಟ್ಟಿಗೆಗಳನ್ನೂ, ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ಇದನ್ನು ಸಹ ನನ್ನ ಮೇಲಿನ ನಿಮ್ಮ ದಯೆಯೊಂದಿಗೆ ನನ್ನನ್ನು ನೆನಪುಮಾಡಿಕೊಳ್ಳಿರಿ.


ನಾನು ಈ ಸಮಾಚಾರವನ್ನು ಕೇಳಿದಾಗ, ನೆಲದ ಮೇಲೆ ಕೂತುಕೊಂಡು ಅತ್ತೆನು. ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.


ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅತ್ತು ದೇವರ ಆಲಯದ ಮುಂದೆ ಅಡ್ಡಬಿದ್ದ ತರುವಾಯ ಇಸ್ರಾಯೇಲರಲ್ಲಿ ಸ್ತ್ರೀಯರೂ, ಪುರುಷರೂ, ಮಕ್ಕಳು ಮಹಾಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡು ಬಂದರು. ಜನರು ಬಹಳವಾಗಿ ಅತ್ತರು.


ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ಪೂರ್ಣಹೃದಯದಿಂದಲ್ಲ.


ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.


ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ, ಜನರು ಸಂತೋಷಪಟ್ಟರು. ಏಕೆಂದರೆ ಅವರು ಪೂರ್ಣಮನಸ್ಸಿನಿಂದ ಮನಃಪೂರ್ವಕವಾಗಿ ಯೆಹೋವ ದೇವರಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷಪಟ್ಟನು.


ಯೆಹೋವ ದೇವರು, ‘ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನನ್ನ ಮುಂದೆ ನಂಬಿಗಸ್ತರಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಅವರು ಇಸ್ರಾಯೇಲಿನ ಸಿಂಹಾಸನದ ಮೇಲೆ ತಪ್ಪದೇ ಕುಳಿತುಕೊಳ್ಳುವರು,’ ಎಂದು ನನಗೆ ಹೇಳಿದ ತಮ್ಮ ವಾಕ್ಯವನ್ನು ಸ್ಥಿರಪಡಿಸುವರು.


ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


ಇದು ನೋಹನ ಮತ್ತು ಅವನ ವಂಶದವರ ಚರಿತ್ರೆ: ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ನಿರ್ದೋಷಿಯೂ ಆಗಿದ್ದನು. ಅವನು ದೇವರೊಂದಿಗೆ ವಿಶ್ವಾಸದಿಂದ ನಡೆಯುತ್ತಿದ್ದನು.


ಅವನು ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ನನ್ನ ನರಳಾಟದಿಂದ ದಣಿದು ಹೋಗಿದ್ದೇನೆ. ರಾತ್ರಿಯೆಲ್ಲಾ ನಾನು ಅಳುವುದರಿಂದ ನನ್ನ ಹಾಸಿಗೆಯು ಕಣ್ಣೀರಿನ ಪ್ರವಾಹದಿಂದ ತೇಲಾಡುತ್ತದೆ, ಕಣ್ಣೀರಿನಿಂದ ನನ್ನ ಮಂಚವನ್ನು ತೊಯಿಸಿದ್ದೇನೆ.


ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವ ದೇವರನ್ನು ಪ್ರಾರ್ಥಿಸಿದನು.


ಆಗ ಯೆಹೋವ ದೇವರ ವಾಕ್ಯವು ಯೆಶಾಯನಿಗೆ ಬಂದಿತು,


ಹಿಜ್ಕೀಯನು ತನ್ನ ತಂದೆ ದಾವೀದನು ಮಾಡಿದ ಪ್ರಕಾರ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು