Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:12 - ಕನ್ನಡ ಸಮಕಾಲಿಕ ಅನುವಾದ

12 ಸಮುದ್ರದ ನೀರನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ, ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ, ಭೂಮಿಯ ಧೂಳನ್ನು ಅಳತೆಮಾಡಿ ತಿಳಿದುಕೊಂಡವನೂ, ಬೆಟ್ಟಗಳ ಮಟ್ಟವನ್ನೂ, ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನೂ ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾರು ಸಾಗರ ಸಮುದ್ರಗಳನ್ನು ಬರಿದಾದ ಕೈಯಿಂದ ಅಳತೆಮಾಡಿದವನು? ಯಾರು ಆಕಾಶಮಂಡಲದ ವ್ಯಾಪ್ತಿಯನ್ನು ಗೇಣಿನಿಂದ ನಿರ್ಣಯಿಸಿದವನು? ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ, ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಳೆವನಾರು ಸಮುದ್ರಸಾಗರಗಳನ್ನು ಬೊಗಸೆಗೈಯಿಂದ? ಮೊಳ ಹಾಕುವವನಾರು ಆಕಾಶಮಂಡಲವನ್ನು ಕೈಗೇಣಿನಿಂದ? ತುಂಬುವವನಾರು ಧರೆಯ ಮರಳನ್ನೆಲ್ಲಾ ಕೊಳಗದೊಳಗೆ? ತೂಗಿದವನಾರು ಬೆಟ್ಟಗುಡ್ಡಗಳನ್ನು ತ್ರಾಸುತಕ್ಕಡಿಯೊಳಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾವನು ಸಾಗರಸಮುದ್ರಗಳನ್ನು ಸೇರೆಯಿಂದ ಅಳತೆಮಾಡಿದನು? ಯಾವನು ಆಕಾಶಮಂಡಲದ ಪರಿಮಾಣವನ್ನು ಗೇಣಿನಿಂದ ನಿರ್ಣಯಿಸಿದನು? ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತನ್ನ ಅಂಗೈಯಿಂದ ಸಾಗರಗಳನ್ನು ಅಳತೆ ಮಾಡಿದವರ್ಯಾರು? ತನ್ನ ಹಸ್ತದಿಂದ ಆಕಾಶವನ್ನು ಅಳತೆ ಮಾಡಿದವರ್ಯಾರು? ಭೂಮಿಯ ಧೂಳನ್ನೆಲ್ಲಾ ಒಂದು ಬೋಗುಣಿಯಲ್ಲಿ ಅಳೆದವರ್ಯಾರು? ಪರ್ವತಗಳನ್ನು ಮತ್ತು ಬೆಟ್ಟಗಳನ್ನು ಅಳೆಯಲು ಅಳತೆಕೋಲನ್ನು ಯಾರು ಉಪಯೋಗಿಸಿದರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:12
12 ತಿಳಿವುಗಳ ಹೋಲಿಕೆ  

ಯಾರು ಸ್ವರ್ಗಕ್ಕೆ ಹೋಗಿ ಕೆಳಗಿಳಿದು ಬಂದಿದ್ದಾರೆ? ಯಾರ ಕೈಗಳು ಗಾಳಿಯನ್ನು ಒಟ್ಟುಗೂಡಿಸಿವೆ? ಯಾರು ತಮ್ಮ ವಸ್ತ್ರದಲ್ಲಿ ಸಾಗರಗಳನ್ನು ಮೂಟೆಕಟ್ಟಿಕೊಂಡಿದ್ದಾರೆ? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿದವರು ಯಾರು? ಅವರ ಹೆಸರೇನು? ಅವರ ಮಗನ ಹೆಸರೇನು? ಖಂಡಿತವಾಗಿಯೂ ನಿಮಗೆ ಗೊತ್ತಿರಬೇಕು!


ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಅವುಗಳನ್ನು ಕರೆಯಲು, ಅವು ಒಟ್ಟಾಗಿ ನಿಂತುಕೊಂಡವು.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನು ಕಂಡೆನು. ಅದರ ಮೇಲೆ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ಓಡಿಹೋಗಿ ಸ್ಥಳ ಕಾಣಿಸದಂತಾದವು.


ದೇವರು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ, ನೀರುಗಳನ್ನು ತಕ್ಕ ಪ್ರಮಾಣಗಳಿಂದ ಅಳತೆಮಾಡಿ,


ಹಾಗೆಯೇ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ, ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು, ಇಸ್ರಾಯೇಲ್ ವಂಶವನ್ನು ನಾನು ನಿರಾಕರಿಸಿ ಬಿಡಲು ಸಾಧ್ಯ,” ಎಂದು ಯೆಹೋವ ದೇವರು ಹೇಳುತ್ತಾರೆ.


ಬೆಟ್ಟಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ, ಭೂಮಿಯ ಉನ್ನತ ಸ್ಥಳಗಳನ್ನು ತುಳಿದುಬಿಡುವಾತನು, ಸರ್ವಶಕ್ತರಾದ ಯೆಹೋವ ದೇವರು ಇದೇ ಅವರ ಹೆಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು