ಯೆಶಾಯ 40:22 - ಕನ್ನಡ ಸಮಕಾಲಿಕ ಅನುವಾದ22 ಆಕಾಶಮಂಡಲವನ್ನು ತೆರೆಯಂತೆ ವಿಸ್ತರಿಸಿ, ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ, ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಸೀನನಾಗಿಹನು ಆತ ಭೂಮಂಡಲಕ್ಕಿಂತ ಮೇಲೆ ಭೂನಿವಾಸಿಗಳು ಕಾಣುತಿಹರು ಆತನಿಗೆ ಮಿಡತೆಗಳಂತೆ ಹರಡಿಹನು ಆಕಾಶಮಂಡಲವನು ನವಿರು ಬಟ್ಟೆಯಂತೆ ಮೇಲೆತ್ತಿಕಟ್ಟಿಹನು ಅದನ್ನು ನಿವಾಸದ ಗುಡಾರದಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಭೂಮಂಡಲನಿವಾಸಿಗಳು ವಿುಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನವರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿಕಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೋವನು ಸತ್ಯವಾದ ದೇವರು. ಆತನು ಉನ್ನತವಾದ ಆಕಾಶದಲ್ಲಿ ಕುಳಿತುಕೊಳ್ಳುವನು. ಆತನಿಗೆ ಹೋಲಿಸಿದರೆ ಜನರು ಮಿಡತೆಗಳಂತಿರುವರು. ಆತನು ಬಟ್ಟೆಯಂತೆ ಆಕಾಶಮಂಡಲವನ್ನು ಸುರುಳಿಯಾಗಿ ಸುತ್ತುವನು. ಆಕಾಶಮಂಡಲವನ್ನು ಆತನು ಎಳೆದು ಗುಡಾರದಂತೆ ಅಗಲಮಾಡಿ ಅದರಡಿಯಲ್ಲಿ ಕುಳಿತುಕೊಳ್ಳುವನು. ಅಧ್ಯಾಯವನ್ನು ನೋಡಿ |