Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:23 - ಕನ್ನಡ ಸಮಕಾಲಿಕ ಅನುವಾದ

23 ಅದು ದೇಶಾಧಿಪತಿಗಳನ್ನು ನಿರ್ನಾಮ ಮಾಡುತ್ತದೆ, ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಾಶಗೊಳಿಸುವನಾತ ದೇಶಾಧಿಪತಿಗಳನು ನಿರ್ನಾಮಗೊಳಿಸುವನು ರಾಜಾಧಿರಾಜರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆತನು ಅಧಿಪತಿಗಳನ್ನು ಅಯೋಗ್ಯರನ್ನಾಗಿ ಮಾಡುವನು. ಆತನು ಲೋಕದ ನ್ಯಾಯಾಧೀಶರನ್ನು ನಿಷ್ಪ್ರಯೋಜಕರನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:23
16 ತಿಳಿವುಗಳ ಹೋಲಿಕೆ  

ದೇವರು ಅಧಿಪತಿಗಳಿಗೆ ಶಿಸ್ತನ್ನು ನೀಡಿ, ಅವರನ್ನು ದಾರಿಯಿಲ್ಲದ ಕಾಡಿನಲ್ಲಿ ಅಲೆಯುವಂತೆ ಮಾಡಿದರು.


ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾರೆ; ಬಲಿಷ್ಠರ ಬಲವನ್ನು ಸಡಿಲಿಸುತ್ತಾರೆ.


ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು. ಆದರೆ ಅಲ್ಲಿ ಯಾರೂ ಇರುವುದಿಲ್ಲ. ಅವಳ ಪ್ರಭುಗಳು ಇಲ್ಲದಂತಾಗುವರು.


ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರ ಯೆಹೋವ ದೇವರೇ ಹೀಗೆ ಸಂಕಲ್ಪಿಸಿದ್ದಾರೆ.


ದೇವರು ಅಧಿಕಾರಿಗಳ ಗರ್ವವನ್ನು ಮುರಿಯುತ್ತಾರೆ. ಭೂಲೋಕದ ಅರಸರು ದೇವರಿಗೆ ಭಯಪಡುತ್ತಾರೆ.


ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳು ತಮ್ಮ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳು ಆಗಿರುವವರಿಗೆ ಕಷ್ಟ!


ನಾನು ಅದರ ಮಧ್ಯದಿಂದ ನ್ಯಾಯಾಧಿಪತಿಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ದೇವರು ಯಾಜಕರನ್ನು ಅಧಿಕಾರದಿಂದ ತೆಗೆದುಹಾಕುತ್ತಾರೆ; ಪ್ರಧಾನರನ್ನು ಕೆಡವಿಬಿಡುತ್ತಾರೆ.


ಮನುಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವುದು. ಮನುಷ್ಯರ ಗರ್ವವು ತಗ್ಗುವುದು. ಆಗ ಯೆಹೋವ ದೇವರೊಬ್ಬರೇ ಆ ದಿನದಲ್ಲಿ ಉನ್ನತವಾಗಿರುವರು.


ಸೇನಾಧೀಶ್ವರ ಯೆಹೋವ ದೇವರ ದಿನವು ಗರ್ವ ಹಾಗೂ ಅಹಂಭಾವದಿಂದ ತುಂಬಿರುವವರ ಮೇಲೆಯೂ, ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವುದು, ದೇವರು ಅವರನ್ನು ತಗ್ಗಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು