ಯೆಶಾಯ 40:24 - ಕನ್ನಡ ಸಮಕಾಲಿಕ ಅನುವಾದ24 ಇವರು ನೆಟ್ಟಕೂಡಲೇ, ಬಿತ್ತಿದಾಕ್ಷಣವೇ, ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸವನ್ನು ಇವರ ಮೇಲೆ ಊದಿದಾಗಲೇ ಒಣಗಿ ಹೋಗುವರು. ಬಿರುಗಾಳಿಯು ಇವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನೆಟ್ಟಕೂಡಲೇ, ಬಿತ್ತಿದಾಕ್ಷಣವೇ, ಭೂಮಿಯಲ್ಲಿ ಬೇರೂರುವಾಗಲೆ ಬಾಡುವುದು ಇವರ ಸಂತಾನ ಆತನ ಶ್ವಾಸದಿಂದಲೆ; ಬಡಿದು ಹೊಯ್ಯಲ್ಪಡುವುದು ಒಣಹುಲ್ಲಿನಂತೆ ಬಿರುಗಾಳಿಯಿಂದಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂವಿುಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಇವರು ನೆಲದಲ್ಲಿ ನೆಟ್ಟಿರುವ ಸಸಿಗಳಂತಿರುವರು. ಅವುಗಳ ಬೇರುಗಳು ನೆಲದೊಳಗೆ ಆಳವಾಗಿ ಹೋಗುವ ಮೊದಲೇ ದೇವರ ಉಸಿರಿಗೆ ಅವು ಬಾಡಿ ಸಾಯುವವು; ಗಾಳಿಯು ಒಣಹುಲ್ಲಿನಂತೆ ಅವುಗಳನ್ನು ಬಡಿದುಕೊಂಡು ಹೋಗುವದು. ಅಧ್ಯಾಯವನ್ನು ನೋಡಿ |