Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:3 - ಕನ್ನಡ ಸಮಕಾಲಿಕ ಅನುವಾದ

3 “ಮರುಭೂಮಿಯಲ್ಲಿ ಯೆಹೋವ ದೇವರ ಮಾರ್ಗವನ್ನು ಸಿದ್ಧಮಾಡಿರಿ. ಅರಣ್ಯದಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಗೋ, ಈ ವಾಣಿಯನ್ನು ಕೇಳಿ : “ಸರ್ವೇಶ್ವರ ಸ್ವಾಮಿಗೆ ಮಾರ್ಗವನ್ನು ಸಿದ್ಧಮಾಡಿ ಅರಣ್ಯದಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಾಗಮಾಡಿ ಅಡವಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಗೋ ಒಂದು ವಾಣಿ! - ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜ ಮಾರ್ಗವನ್ನು ನೆಟ್ಟಗೆ ಮಾಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಒಬ್ಬ ಮನುಷ್ಯನು ಕೂಗಿಹೇಳುವುದನ್ನು ಕೇಳಿರಿ: “ಯೆಹೋವನಿಗೆ ಅಡವಿಯಲ್ಲಿ ದಾರಿಯನ್ನು ಸಿದ್ಧಮಾಡಿರಿ! ನಮ್ಮ ದೇವರಿಗೆ ಅಲ್ಲಿ ಮಾರ್ಗವನ್ನು ನೆಟ್ಟಗೆಮಾಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:3
16 ತಿಳಿವುಗಳ ಹೋಲಿಕೆ  

“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಅದಕ್ಕೆ ಯೋಹಾನನು, “ಪ್ರವಾದಿ ಯೆಶಾಯನು ಹೇಳಿದಂತೆ, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವೇ ನಾನು,” ಎಂದು ಹೇಳಿದನು.


ನಂತರ ಹೀಗೆ ಹೇಳಲಾಗುವುದು: ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ, ನನ್ನ ಜನರ ದಾರಿಯೊಳಗಿಂದ ಆತಂಕವನ್ನು ಎತ್ತಿ ಹಾಕಿರಿ,


ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು. ಅದು ಈಗಲೇ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸುವೆನು. ಮರುಭೂಮಿಯಲ್ಲಿ ನದಿಗಳನ್ನೂ ಉಂಟುಮಾಡುವೆನು.


ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.


ನನ್ನ ಬೆಟ್ಟಗಳನ್ನೆಲ್ಲಾ ಸಮ ದಾರಿಯನ್ನಾಗಿ ಮಾಡಿ, ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು.


ದೇವರಿಗೆ ಹಾಡಿರಿ, ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ. ಮೇಘಾರೂಢರಾಗಿರುವ ದೇವರನ್ನು ಕೊಂಡಾಡಿರಿ. ಅವರ ಹೆಸರು ಯೆಹೋವ ದೇವರು, ಅವರ ಮುಂದೆ ಉಲ್ಲಾಸಪಡಿರಿ.


ಪ್ರತಿಯೊಂದು ಹಳ್ಳಕೊಳ್ಳಗಳನ್ನು ಮಟ್ಟಮಾಡಬೇಕು. ಎಲ್ಲಾ ಬೆಟ್ಟಗುಡ್ಡಗಳು ನೆಲಸಮವಾಗಬೇಕು. ಒರಟಾದ ನೆಲವು ಸಮವಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು