ಯೆಶಾಯ 40:6 - ಕನ್ನಡ ಸಮಕಾಲಿಕ ಅನುವಾದ6 ವಾಣಿಯು, “ಗಟ್ಟಿಯಾಗಿ ಕೂಗು,” ಎಂದಿತು. ಅದಕ್ಕೆ, “ನಾನು ಏನೆಂದು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅವರ ಸೊಬಗೆಲ್ಲಾ ಹೊಲದ ಹೂವಿನಂತಿದೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆ ವಾಣಿ ಮತ್ತೆ ಕೇಳಿಸಿತು : ‘ಗಟ್ಟಿಯಾಗಿ ಕೂಗು’ ಎಂದಿತು ನಾನೇನೆಂದು ಕೂಗಲಿ ಎನ್ನಲು ಈ ಪರಿಯಾಗಿ ಉತ್ತರಿಸಿತು : “ನರಮಾನವರೆಲ್ಲ ಬರೀ ಹುಲ್ಲಿನಂತೆ ಅವರ ಸೊಬಗೆಲ್ಲಾ ಬಯಲಿನ ಕುಸುಮದಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಹಾ, ವಾಣಿಯು ಮತ್ತೆ ಕೇಳಿಸಿ - ಕೂಗು ಎನ್ನುತ್ತದೆ. ಅದಕ್ಕೆ ನಾನು - ಏನು ಕೂಗಲಿ ಎಂದು ಕೇಳಲು ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಒಂದು ಸ್ವರವು “ಮಾತನಾಡು” ಎಂದಿತು. ಅದಕ್ಕೆ ಮನುಷ್ಯನು, “ಏನು ಮಾತಾಡಲಿ” ಅಂದನು. ಆಗ ಸ್ವರವು, “ಜನರು ಶಾಶ್ವತವಾಗಿ ಜೀವಿಸುವದಿಲ್ಲ, ಅವರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ಒಳ್ಳೆಯತನವು ಕಾಡುಹೂವಿನಂತಿದೆ. ಅಧ್ಯಾಯವನ್ನು ನೋಡಿ |
“ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.