Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:9 - ಕನ್ನಡ ಸಮಕಾಲಿಕ ಅನುವಾದ

9 ಶುಭಸಮಾಚಾರವನ್ನು ತಿಳಿಸುವ ಚೀಯೋನೇ, ನೀನು ಉನ್ನತ ಪರ್ವತವನ್ನು ಏರು. ಶುಭಸಮಾಚಾರವನ್ನು ತಿಳಿಸುವ ಯೆರೂಸಲೇಮೇ, ಬಲವಾಗಿ ನಿನ್ನ ಧ್ವನಿ ಎತ್ತು, ಭಯಪಡಬೇಡ. ಯೆಹೂದದ ಪಟ್ಟಣಗಳಿಗೆ, “ಇಗೋ, ನಿನ್ನ ದೇವರು!” ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ಉನ್ನತಪರ್ವತವನ್ನು ಹತ್ತಿಕೋ; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ - ಇಗೋ, ನಿಮ್ಮ ದೇವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ. ಉನ್ನತ ಪರ್ವತಕ್ಕೆ ಏರಿಹೋಗಿ ಶುಭವಾರ್ತೆಯನ್ನು ಗಟ್ಟಿಯಾಗಿ ಸಾರು! ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. ಹೆದರಬೇಡ, ಅದನ್ನು ಗಟ್ಟಿಯಾಗಿ ಸಾರು. ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: “ಇಗೋ! ನಿನ್ನ ದೇವರು ಇಲ್ಲಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:9
31 ತಿಳಿವುಗಳ ಹೋಲಿಕೆ  

ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


ಆ ದಿನದಲ್ಲಿ ಜನರು, “ಇಗೋ, ಇವರೇ ನಮ್ಮ ದೇವರು, ನಾವು ಇವರನ್ನೇ ನಂಬಿದ್ದೇವೆ. ಇವರೇ ನಮ್ಮನ್ನು ರಕ್ಷಿಸುವರು. ಇವರೇ ಯೆಹೋವ ದೇವರು, ನಾವು ಇವರನ್ನೇ ನಂಬಿದ್ದೇವೆ, ನಾವು ಇವರ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷಪಡುವೆವು,” ಎಂದು ಹೇಳುವರು.


ನಾನು ಬಾಯಿ ತೆರೆಯುವಾಗ ಸುವಾರ್ತೆಯ ರಹಸ್ಯವನ್ನು ಧೈರ್ಯವಾಗಿ ತಿಳಿಯಪಡಿಸುವುದಕ್ಕೆ ಮಾತನ್ನು ನನಗೆ ದಯಪಾಲಿಸಬೇಕೆಂದು ಪ್ರಾರ್ಥಿಸಿರಿ.


ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು


ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನಿಮಗೆ ಆಶೀರ್ವಾದವಿರುವುದು. ಅವರ ಬೆದರಿಕೆಗೆ ಹೆದರಬೇಡಿರಿ ಮತ್ತು ಕಳವಳಪಡಬೇಡಿರಿ.


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ: “ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ.”


ಕರ್ತದೇವರೇ, ಈಗ ಅವರ ಬೆದರಿಕೆಯನ್ನು ನೋಡಿರಿ; ಬಹುಧೈರ್ಯದಿಂದ ನಿಮ್ಮ ವಾಕ್ಯವನ್ನು ಹೇಳಲು ನಿಮ್ಮ ಸೇವಕರನ್ನು ಬಲಪಡಿಸಿರಿ.


ಪೇತ್ರ, ಯೋಹಾನರ ಧೈರ್ಯವನ್ನು ಅವರು ಕಂಡಾಗ, ಇವರು ವಿದ್ಯೆ ಕಲಿಯದ ಸಾಮಾನ್ಯ ಜನರೆಂದು ತಿಳಿದು ಬಹು ಆಶ್ಚರ್ಯಚಕಿತರಾಗಿ, ಇವರು ಯೇಸುವಿನೊಂದಿಗೆ ಇದ್ದವರು ಎಂಬುದನ್ನು ಗುರುತಿಸಿಕೊಂಡರು.


ಆಗ ಹನ್ನೊಂದು ಜನರೊಂದಿಗೆ ಪೇತ್ರನು ಎದ್ದು ನಿಂತುಕೊಂಡು, ಜನಸಮೂಹವನ್ನು ಉದ್ದೇಶಿಸಿ ಹೇಳಿದ್ದೇನೆಂದರೆ: “ಯೆಹೂದ್ಯರೇ, ಯೆರೂಸಲೇಮಿನ ಸರ್ವನಿವಾಸಿಗಳೇ, ಇದರ ಬಗ್ಗೆ ನಾನು ವಿವರಿಸುತ್ತೇನೆ, ಕೇಳಿರಿ. ನಾನು ಹೇಳುವುದನ್ನು ಜಾಗರೂಕತೆಯಿಂದ ಆಲಿಸಿರಿ.


ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.


“ಲೆಬನೋನಿಗೆ ಹೋಗಿ ಕೂಗು, ಬಾಷಾನಿನಲ್ಲಿ ನಿನ್ನ ಸ್ವರವನ್ನೆತ್ತು, ಅಬಾರೀಮಿನಲ್ಲಿ ಮೊರೆಯಿಡು; ಏಕೆಂದರೆ ನಿನ್ನ ಜೊತೆಗಾರರು ನಾಶವಾಗಿದ್ದಾರೆ.


ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ: ವ್ಯಾಜ್ಯ, ಕಲಹ, ಹೊಡೆದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸ ಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ.


“ನಾನೇ, ನಾನೇ ನಿಮ್ಮನ್ನು ಸಂತೈಸುವವನಾಗಿದ್ದೇನೆ. ಹಾಗಾದರೆ ಸಾಯುವ ಮನುಷ್ಯನಿಗೂ, ಹುಲ್ಲಿನಂತ್ತಿರುವ ಮಾನವನಿಗೂ ಭಯಪಡುವ ನೀನು ಯಾರು?


ನೀತಿಯನ್ನು ಅರಿತು, ನನ್ನ ನಿಯಮವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ, ನನಗೆ ಕಿವಿಗೊಡಿರಿ. ಮನುಷ್ಯರ ನಿಂದೆಗೆ ಭಯಪಡಬೇಡಿರಿ, ಅವರ ದೂಷಣೆಗೆ ಹೆದರಬೇಡಿರಿ.


ನಾನು ಮೊದಲನೆಯವನಾಗಿ ಚೀಯೋನಿಗೆ, ‘ಇಗೋ, ಅವರನ್ನು ನೋಡು’ ಎಂದು ಹೇಳಿ, ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.


ಆಗ ಅಬೀಯನು ಎಫ್ರಾಯೀಮ್ ಬೆಟ್ಟದಲ್ಲಿರುವ ಚೆಮಾರಯಿಮ್ ಎಂಬ ಬೆಟ್ಟದ ಮೇಲೆ ನಿಂತು, “ಯಾರೊಬ್ಬಾಮನೇ, ಸಮಸ್ತ ಇಸ್ರಾಯೇಲರೇ, ನನ್ನ ಮಾತು ಕೇಳಿರಿ.


ಯೋತಾಮನಿಗೆ ಇದನ್ನು ತಿಳಿಸಿದಾಗ, ಅವನು ಹೋಗಿ ಗೆರಿಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು, ತನ್ನ ಸ್ವರವನ್ನೆತ್ತಿ ಕೂಗಿ ಅವರಿಗೆ, “ಶೆಕೆಮಿನ ಹಿರಿಯರೇ, ದೇವರು ನಿಮ್ಮನ್ನು ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.


ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.


ಅದು ಸಮೃದ್ಧಿಯಾಗಿ ಅರಳಿ, ಆನಂದ ಧ್ವನಿ ಎತ್ತಿ ಉಲ್ಲಾಸಿಸುವುದು. ಲೆಬನೋನಿನ ಘನತೆಯು ಮತ್ತು ಕರ್ಮೆಲ್, ಶಾರೋನಿನ ಗೌರವವು ಅದಕ್ಕೆ ಕೊಡಲಾಗುವುದು. ಅವರು ಯೆಹೋವ ದೇವರ ಮಹಿಮೆಯನ್ನು ಮತ್ತು ನಮ್ಮ ದೇವರ ಘನತೆಯನ್ನು ಕಾಣುವರು.


ತನ್ನ ಸೇವಕನ ಮಾತುಗಳನ್ನು ಸ್ಥಾಪಿಸುವವನು, ಮತ್ತು ತನ್ನ ದೂತರ ಆಲೋಚನೆಯನ್ನು ಪೂರೈಸುವವನು. “ಯೆರೂಸಲೇಮಿಗೆ, ‘ನೀನು ನಿವಾಸವಾಗುವೆ,’ ಯೆಹೂದ ಪಟ್ಟಣಗಳಿಗೆ, ‘ಅವು ಪುನಃ ಕಟ್ಟಲಾಗುವುದು,’ ಮತ್ತು ಅದರ ಹಾಳು ಸ್ಥಳಗಳಿಗೆ, ‘ನಾನು ಪುನಃಸ್ಥಾಪಿಸುವೆನು,’ ಎಂದು ಹೇಳುವವನು,


ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.


ಇಗೋ, ಪರ್ವತಗಳ ಮೇಲೆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಹರಕೆಗಳನ್ನು ಸಲ್ಲಿಸು. ಏಕೆಂದರೆ ಇನ್ನು ಮೇಲೆ ದುಷ್ಟರು ನಿನ್ನ ಮೇಲೆ ಮುತ್ತಿಗೆ ಹಾಕರು. ಅವರು ಸಂಪೂರ್ಣವಾಗಿ ನಾಶವಾಗುವರು.


ಆದ್ದರಿಂದ ನನ್ನ ಜನರು ನನ್ನ ಹೆಸರನ್ನು ತಿಳಿದುಕೊಳ್ಳುವರು. ಹೀಗೆ ಆ ದಿನದಲ್ಲಿ ಮಾತನಾಡಿದಾತನು ನಾನೇ, ಅದು ನಾನೇ ಎಂದು ಅವರು ಗ್ರಹಿಸುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು