ಯೆಶಾಯ 41:22 - ಕನ್ನಡ ಸಮಕಾಲಿಕ ಅನುವಾದ22 “ವಿಗ್ರಹಗಳೇ, ಮುಂದೆ ಏನಾಗಲಿದೆ ಎಂದು ನಮಗೆ ಹೇಳಿ. ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು, ಅವುಗಳ ಪರಿಣಾಮವನ್ನು ಇಲ್ಲವೆ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ತಮ್ಮ ನ್ಯಾಯಗಳನ್ನು ಮುಂದಕ್ಕೆ ತರಲಿ, ಭವಿಷ್ಯತ್ತನ್ನು ನಮಗೆ ತಿಳಿಸಲಿ; ನಡೆದ ಸಂಗತಿಗಳ ವಿಶೇಷವನ್ನು ಸೂಚಿಸಿರಿ, ನಾವು ಅವುಗಳನ್ನು ಮನಸ್ಸಿಗೆ ತಂದು ಅವುಗಳ ಪರಿಣಾಮವನ್ನು ಇಲ್ಲವೇ ಭವಿಷ್ಯತ್ತನ್ನು ತಿಳಿಸಿದರೆ ಗ್ರಹಿಸುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಬನ್ನಿರಿ ಮುಂದಕ್ಕೆ ತಿಳಿಸಿ ಭವಿಷ್ಯತ್ತನು ನಮಗೆ. ವಿವರಿಸಿ ಗತಿಸಿದ ಘಟನೆಗಳು ಏನೇನೆಂದು; ಗ್ರಹಿಸುವೆವು ಅವುಗಳ ಪರಿಣಾಮವನ್ನು ಮನಸ್ಸಿಗೆ ತಂದು, ಇಲ್ಲವಾದರೆ ತಿಳಿಸಿ ನಮಗೆ ಸಂಭವಿಸಲಿರುವುದೇನೆಂದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ತಮ್ಮ ನ್ಯಾಯಗಳನ್ನು ಮುಂದಕ್ಕೆ ತರಲಿ, ಭವಿಷ್ಯತ್ತನ್ನು ನಮಗೆ ತಿಳಿಸಲಿ; ನಡೆದ ಸಂಗತಿಗಳ ವಿಶೇಷವನ್ನು ಸೂಚಿಸಿರಿ, ನಾವು ಅವುಗಳನ್ನು ಮನಸ್ಸಿಗೆ ತಂದು ಅವುಗಳ ಪರಿಣಾಮವನ್ನು ಗ್ರಹಿಸುವೆವು; ಅಥವಾ ಭವಿಷ್ಯತ್ತುಗಳನ್ನು ಅರುಹಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಿಮ್ಮ ವಿಗ್ರಹಗಳು ನಮ್ಮ ಬಳಿಗೆ ಬಂದು ನಡೆಯುತ್ತಿರುವುದನ್ನು ತಿಳಿಸಲಿ. ಪ್ರಾರಂಭದಲ್ಲಿ ನಡೆದಿದ್ದೇನು? ಮುಂದೆ ನಡೆಯಲಿರುವುದೇನು? ನಮಗೆ ತಿಳಿಸಿರಿ. ನಾವು ಸೂಕ್ಷ್ಮವಾಗಿ ಕೇಳಿ ಭವಿಷ್ಯವನ್ನು ತಿಳಿದುಕೊಳ್ಳುವೆವು. ಅಧ್ಯಾಯವನ್ನು ನೋಡಿ |