ಯೆಶಾಯ 42:13 - ಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರು ಪರಾಕ್ರಮಶಾಲಿಯಾಗಿ ಮುಂದೆ ಹೋಗುವರು; ಯುದ್ಧವೀರನ ಹಾಗೆ ತಮ್ಮ ರೌದ್ರವನ್ನು ಎಬ್ಬಿಸುವರು. ಆರ್ಭಟಿಸಿ ಗರ್ಜಿಸಿ ತಮ್ಮ ಶತ್ರುಗಳಿಗೆ ವಿರೋಧವಾಗಿ ಜಯಶಾಲಿಯಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರ ಹೊರಟಿರುವನು ಶೂರನಂತೆ ರೌದ್ರದಿಂದಿರುವನು ಯುದ್ಧವೀರನಂತೆ ಆರ್ಭಟಿಸಿ ಗರ್ಜಿಸುವನು ರಣಕಹಳೆಯಂತೆ ಶತ್ರುಗಳ ಮೇಲೆ ಬೀಳುವನು ಪರಾಕ್ರಮಿಯಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನು ಶೂರನಂತೆ ಹೊರಟು ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು; ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನು ಯುದ್ಧವೀರನಂತೆ ಹೊರಡುವನು. ಆತನು ಯುದ್ಧಮಾಡಲು ತಯಾರಾಗಿರುವ ಶೂರನಂತಿದ್ದಾನೆ. ಆತನು ಉತ್ಸಾಹದಿಂದ ಗಟ್ಟಿಯಾಗಿ ಕೂಗುತ್ತಾ ತನ್ನ ವೈರಿಗಳನ್ನು ಸೋಲಿಸುವನು. ಅಧ್ಯಾಯವನ್ನು ನೋಡಿ |
ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.
ಯೆಹೋವ ದೇವರು ನನಗೆ ಹೀಗೆ ಹೇಳಿದ್ದಾನೆ: ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ, ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವುದೋ, ಹಾಗೆಯೇ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತಕ್ಕೋಸ್ಕರವೂ, ಅದರ ಗುಡ್ಡಕ್ಕೋಸ್ಕರವೂ ಯುದ್ಧಮಾಡಲು ಇಳಿದು ಬರುವರು.