Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:16 - ಕನ್ನಡ ಸಮಕಾಲಿಕ ಅನುವಾದ

16 ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡೆಸುವೆನು. ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ, ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮತ್ತು ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಯಿಸುವೆನು; ಅವರೆದುರಿನ ಕತ್ತಲನ್ನು ಬೆಳಕುಮಾಡಿ ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವರು ಹಿಂದೆಂದೂ ತಿಳಿಯದ ರೀತಿಯಲ್ಲಿ ನಾನು ಕುರುಡರನ್ನು ನಡೆಸುವೆನು. ಕುರುಡರು ಹೋಗಿರದ ಸ್ಥಳಕ್ಕೆ ನಾನು ಅವರನ್ನು ನಡಿಸುವೆನು. ನಾನು ಅವರಿಗಾಗಿ ಕತ್ತಲೆಯನ್ನು ಬೆಳಕಾಗಿ ಮಾರ್ಪಡಿಸುವೆನು. ನಾನು ಕೊರಕಲು ನೆಲವನ್ನು ಸಮತಟ್ಟಾಗಿ ಮಾಡುವೆನು. ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ನನ್ನ ಜನರನ್ನು ನಾನು ಎಂದಿಗೂ ತೊರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:16
40 ತಿಳಿವುಗಳ ಹೋಲಿಕೆ  

ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ ಇದರಲ್ಲೇ ನಡೆಯಿರಿ,” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.


ಪ್ರತಿಯೊಂದು ಹಳ್ಳಕೊಳ್ಳಗಳೂ ಭರ್ತಿಯಾಗಬೇಕು, ಎಲ್ಲಾ ಬೆಟ್ಟಗುಡ್ಡಗಳು ನೆಲಸಮವಾಗಬೇಕು; ಡೊಂಕಾದ ರಸ್ತೆಗಳು ನೆಟ್ಟಗಾಗಬೇಕು, ಮತ್ತು ಕೊರಕಲಾದ ದಾರಿಗಳು ಸರಾಗವಾಗಬೇಕು;


ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.


ಪ್ರತಿಯೊಂದು ಹಳ್ಳಕೊಳ್ಳಗಳನ್ನು ಮಟ್ಟಮಾಡಬೇಕು. ಎಲ್ಲಾ ಬೆಟ್ಟಗುಡ್ಡಗಳು ನೆಲಸಮವಾಗಬೇಕು. ಒರಟಾದ ನೆಲವು ಸಮವಾಗಬೇಕು.


ನೀವು ಹಿಂದೊಮ್ಮೆ ಕತ್ತಲೆಯಾಗಿದ್ದಿರಿ. ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿದ್ದೀರಿ. ಬೆಳಕಿನ ಮಕ್ಕಳಾಗಿ ಬಾಳಿರಿ.


ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.


ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”


ಆ ದಿನದಲ್ಲಿ ಕಿವುಡರು ಗ್ರಂಥದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ, ಅಂಧಕಾರದೊಳಗಿಂದಲೂ ಕಾಣುವುವು.


ಯೆಹೋವ ದೇವರು ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ತಮ್ಮ ಬಾಧ್ಯತೆಯಾಗಿರುವವರನ್ನು ಎಂದೂ ಮರೆಯುವುದಿಲ್ಲ.


ನಿನ್ನ ವಿಮೋಚಕನೂ, ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರ ಮಾತಿದು, “ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವವನೂ ಆದ ನಾನೇ ನಿನ್ನ ಯೆಹೋವ ದೇವರು ಆಗಿದ್ದೇನೆ.


ನಾನು ನಿನ್ನ ಮುಂದೆ ಹೋಗಿ ಬೆಟ್ಟಗುಡ್ಡಗಳನ್ನು ಸಮಮಾಡಿ, ಕಂಚಿನ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು.


ಆಗ, ಕುರುಡರ ಕಣ್ಣು ಕಾಣುವುದು. ಕಿವುಡರ ಕಿವಿಗಳು ಕೇಳಿಸುವುವು.


ಆದ್ದರಿಂದ ನಾನು ಅವಳನ್ನು ಮೋಹಿಸಿ, ಅವಳನ್ನು ಮರುಭೂಮಿಯೊಳಗೆ ಕರೆದುಕೊಂಡು ಬಂದು, ಅವಳ ಸಂಗಡ ಹಿತಕರವಾಗಿ ಮಾತನಾಡುವೆನು.


ಆದ್ದರಿಂದ ನಾನು ಅವಳ ಮಾರ್ಗಕ್ಕೆ ಮುಳ್ಳುಗಳ ಬೇಲಿಹಾಕಿ ತಡೆಯುವೆನು. ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಅವಳ ಮುಂದೆ ಗೋಡೆಯನ್ನು ಕಟ್ಟುವೆನು.


ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗೊಣಗುಟ್ಟುವವರು ಬೋಧನೆ ಕಲಿಯುವರು.”


ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರ ಇರಬೇಕು. ಅದರ ಹತ್ತಿರ ಬರಬೇಡಿರಿ. ನೀವು ಹೋಗಬೇಕಾದ ಮಾರ್ಗ ನಿಮಗೆ ತಿಳಿಯುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇದುವರೆಗೆ ಪ್ರಯಾಣ ಮಾಡಿರುವುದಿಲ್ಲ,” ಎಂದರು.


ನೀವು ಅವರ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಅದರೊಳಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ನಿನ್ನ ಮಕ್ಕಳೆಲ್ಲಾ ಯೆಹೋವ ದೇವರಿಂದಲೇ ಬೋಧನೆ ಪಡೆಯುವರು. ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರುವುದು.


ತಾನು ಎಂದೂ ಹೆಜ್ಜೆ ಇಡದ ಮಾರ್ಗದಲ್ಲಿ ಸುರಕ್ಷಿತವಾಗಿ ಆತನು ಅವರನ್ನು ಹಿಂದಟ್ಟುತ್ತಾ ಹೋದನು.


ದೇವರ ಸೃಷ್ಟಿಕಾರ್ಯವನ್ನು ಯೋಚಿಸು: ದೇವರು ಮಾಡಿದ್ದನ್ನು, ಪುನಃ ಸರಿಪಡಿಸಲು ಯಾರಿಗೆ ಸಾಧ್ಯ?


ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ. ಇಲ್ಲದ್ದನ್ನು ಲೆಕ್ಕಿಸುವುದು ಅಸಾಧ್ಯ.


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ನೀತಿವಂತನ ಮಾರ್ಗವು ಸಮಾನವಾಗಿದೆ. ನೀನು ಅತ್ಯಧಿಕವಾದ ಯಥಾರ್ಥವಂತನು, ನೀತಿವಂತನ ದಾರಿಯನ್ನು ಸರಿಪಡಿಸಿ ಸಮಮಾಡುತ್ತಿ,


ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು. ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ, ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ, ಯೆಹೋವನಾದ ನಾನೇ ಅವರಿಗೆ ಉತ್ತರಕೊಡುವೆನು. ಇಸ್ರಾಯೇಲ್ ದೇವರಾಗಿರುವ ನಾನು ಅವರನ್ನು ಕೈಬಿಡೆನು.


ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ, ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.


ನೀವು ತ್ವರೆಯಾಗಿ ಹೋಗುವುದಿಲ್ಲ, ಓಡಿ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರೇ ನಿಮ್ಮ ಮುಂದೆ ಹೋಗುವರು, ಇಸ್ರಾಯೇಲಿನ ದೇವರು ನಿಮ್ಮ ಹಿಂದೆ ಕಾವಲು ಕಾಯುವರು.


ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ದಬ್ಬಾಳಿಕೆಗೆ ಒಳಗಾದವನ ಪ್ರಾಣವನ್ನು ತೃಪ್ತಿಪಡಿಸಿದರೆ, ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವುದು. ನಿನ್ನ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.


ಆಗ ಅವರು, ಪರಿಶುದ್ಧ ಜನರೂ, ಯೆಹೋವ ದೇವರು ವಿಮೋಚಿಸಿದವರೂ ಎಂದು ಎನಿಸಿಕೊಳ್ಳುವರು ನಿನಗೆ ಹುಡುಕಿದ ಹಾಗೂ ಕೈ ಬಿಡದ ಪಟ್ಟಣ, ಎಂದು ಹೆಸರು ಬರುವುದು.


ವೃಷಭ ರಾಶಿಯನ್ನೂ, ಮೃಗಶಿರವನ್ನೂ ಉಂಟು ಮಾಡಿದವನನ್ನೂ ಕಾರ್ಗತ್ತಲನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲೆ ಮಾಡಿ, ಸಮುದ್ರದ ನೀರನ್ನು ಬರಮಾಡಿ, ಅವುಗಳನ್ನು ಭೂಮಿಯ ಮೇಲೆ ಸುರಿಸುವ ಯೆಹೋವ ದೇವರು ಎಂಬ ಹೆಸರುಳ್ಳವರನ್ನೇ ಹುಡುಕಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು