ಯೆಶಾಯ 42:4 - ಕನ್ನಡ ಸಮಕಾಲಿಕ ಅನುವಾದ4 ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಈತನು ಬಿಟ್ಟುಕೊಡುವುದಿಲ್ಲ, ಮನಗುಂದುವುದಿಲ್ಲ, ದ್ವೀಪಗಳು ಈತನ ಬೋಧನೆಗೆ ಎದುರುನೋಡುವುವು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಎಡವಿ ಬೀಳನವನು, ಎದೆಗುಂದನವನು ಜಗದೊಳು ಸ್ಥಾಪಿಸುವ ತನಕ ಸದ್ಧರ್ಮವನು, ಎದುರುನೋಡುವುವು ದ್ವೀಪ-ದ್ವೀಪಾಂತರಗಳು ಆತನ ಧರ್ಮಶಾಸ್ತ್ರವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ ಜಜ್ಜಿಹೋಗದೆಯೂ [ತನ್ನ ಕಾರ್ಯದಲ್ಲಿ ನಿರತನಾಗಿರುವನು]; ದ್ವೀಪದ್ವೀಪಾಂತರಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಆತನು ಬಲಹೀನನಾಗುವದಿಲ್ಲ; ಮುಗ್ಗರಿಸುವುದೂ ಇಲ್ಲ. ದೂರದೇಶದಲ್ಲಿರುವವರು ಸಹ ಆತನ ಬೋಧನೆಯನ್ನು ನಂಬುವರು.” ಅಧ್ಯಾಯವನ್ನು ನೋಡಿ |
“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.