Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:6 - ಕನ್ನಡ ಸಮಕಾಲಿಕ ಅನುವಾದ

6-7 “ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಸೆರೆಯವರನ್ನು ಸೆರೆಯಿಂದಲೂ, ಕತ್ತಲೆಯಲ್ಲಿ ವಾಸಿಸುವವರನ್ನು ಕಾರಾಗೃಹದಿಂದಲೂ ಹೊರತರಬೇಕು,” ಎಂದು ಯೆಹೋವ ದೇವರಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ, ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಇತರ ಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು, ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀನು ಕುರುಡರಿಗೆ ಕಣ್ಣುಕೊಟ್ಟು ಬಂದಿಗಳನ್ನು ಸೆರೆಯಿಂದಲೂ ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ಕರತರಬೇಕು ಎಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಯೆಹೋವನೆಂಬ ನಾನು ನ್ಯಾಯವನ್ನು ಸ್ಥಾಪಿಸಲು ನಿನ್ನನ್ನು ಕರೆದೆನು. ನಾನು ನಿನ್ನ ಕೈಗಳನ್ನು ಹಿಡಿದು ಸಂರಕ್ಷಿಸುವೆನು. ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆ ನನ್ನಲ್ಲಿದೆಯೆಂಬುದಕ್ಕೆ ನೀನು ಗುರುತಾಗಿರುವೆ. ಎಲ್ಲಾ ಜನರಿಗೆ ನೀನು ಹೊಳೆಯುವ ಪ್ರಕಾಶವಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:6
36 ತಿಳಿವುಗಳ ಹೋಲಿಕೆ  

ಅದು ಯೆಹೂದ್ಯರಲ್ಲದವರಿಗೆ ಪ್ರಕಟಣೆಯ ಬೆಳಕೂ, ನಿಮ್ಮ ಪ್ರಜೆಯಾದ ಇಸ್ರಾಯೇಲರ ಮಹಿಮೆಯೂ ಆಗಿದೆ.”


ಕರ್ತದೇವರು ನಮಗೆ ಆಜ್ಞಾಪಿಸಿದ್ದು ಇಂತಿದೆ: “ ‘ಭೂಲೋಕದ ಕಟ್ಟಕಡೆಯವರೆಗೆ ನೀನು ರಕ್ಷಣೆಯನ್ನು ತರುವಂತೆ ನಾನು ಯೆಹೂದ್ಯರಲ್ಲದವರಿಗೆ ನಿನ್ನನ್ನು ಬೆಳಕನ್ನಾಗಿ ನೇಮಿಸಿರುವೆನು.’ ”


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು,” ಎಂದು ಹೇಳಿದರು.


ಯೆಹೋವ ದೇವರು ಹೇಳುವುದೇನೆಂದರೆ: “ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡಿ, ಭೂಮಿಯನ್ನು ಸ್ಥಾಪಿಸುವುದಕ್ಕೂ, ಹಾಳಾಗಿರುವ ಸ್ಥಳಗಳನ್ನು ಸೊತ್ತಾಗಿ ಹೊಂದುವುದಕ್ಕೂ, ಜನರ ಒಡಂಬಡಿಕೆಯನ್ನಾಗಿಯೂ ನೇಮಿಸಿದ್ದೇನೆ.


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ದೃಢ ಮನಸ್ಸುಳ್ಳವರನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವೆ, ಏಕೆಂದರೆ ಅವರಿಗೆ ನಿನ್ನಲ್ಲಿ ಭರವಸವಿದೆ.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.


ಕ್ರಿಸ್ತ ಯೇಸು ಶ್ರಮೆಹೊಂದಿ, ಸತ್ತವರೊಳಗಿಂದ ಜೀವಂತರಾಗಿ ಮೊದಲು ಎದ್ದು ತಮ್ಮ ಜನರಿಗೂ ಯೆಹೂದ್ಯರಲ್ಲದವರಿಗೂ ಬೆಳಕಿನ ಸಂದೇಶವನ್ನು ತರುವರು ಎಂದು ಪ್ರವಾದಿಗಳು ಮತ್ತು ಮೋಶೆಯು ಹೇಳಿದ್ದಾರೆ,” ಎಂದನು.


ದೇವರು ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತ ಯೇಸುವಿನಲ್ಲಿ “ಹೌದು” ಎಂದೇ ಇರುತ್ತದೆ. ಕ್ರಿಸ್ತ ಯೇಸುವಿನ ಮೂಲಕ ನಾವು ಅದಕ್ಕೆ “ಆಮೆನ್” ಎಂದು ದೇವರ ಮಹಿಮೆಗಾಗಿ ಎನ್ನುತ್ತೇವೆ.


ಈಗಲಾದರೋ ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ, ರೂಪಿಸಿದ ಯೆಹೋವ ದೇವರು ಹೇಳುವುದೇನೆಂದರೆ: “ಹೆದರಬೇಡ, ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


“ಇಗೋ, ನನ್ನ ಸೇವಕನು. ಇವನಿಗೆ ನಾನೇ ಆಧಾರ, ನಾನು ಆಯ್ದುಕೊಂಡವನಲ್ಲಿ ನನ್ನ ಆತ್ಮವು ಆನಂದಿಸುವುದು; ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಇತರ ಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.


ನೀನಂತೂ ಹೆದರಬೇಡ; ಏಕೆಂದರೆ ಯೆಹೋವ ದೇವರಾದ ನಾನೇ ನಿನಗೆ ಸಹಾಯ ಮಾಡುತ್ತೇನೆ, ನಿನ್ನ ದೇವರಾಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ!


ಯೇಸುವಾದರೋ ಈಗ ಅದಕ್ಕಿಂತ ಶ್ರೇಷ್ಠ ಸೇವೆಯನ್ನು ಹೊಂದಿದವರಾಗಿದ್ದಾರೆ. ಅಷ್ಟೇ ಅಲ್ಲದೆ ಇವರು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಒಡಂಬಡಿಕೆಗೆ ಸಹ ಮಧ್ಯಸ್ಥರಾಗಿದ್ದಾರೆ.


ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ.


ನಾನೇ, ಅವನನ್ನು ನೀತಿಯಲ್ಲಿ ಎಬ್ಬಿಸಿದ್ದೇನೆ. ಅವನ ಮಾರ್ಗಗಳನ್ನು ಸರಾಗ ಮಾಡುತ್ತೇನೆ. ಅವನು ನನ್ನ ಪಟ್ಟಣವನ್ನು ಕಟ್ಟಿ, ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ, ನನ್ನ ಸೆರೆಯವರನ್ನು ಕಳುಹಿಸಿಬಿಡುವನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾನೆ.


ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ, ಪ್ರೋಕ್ಷಿಸಿದ ರಕ್ತದ ಬಳಿಗೂ ಬಂದಿದ್ದೀರಿ.


ಇದು ಬಹುಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.


ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.


ಅಬ್ರಹಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತರಲ್ಲಿ ಒಂದು ಭಾಗವನ್ನು ಕೊಟ್ಟನು. ಅವನ ಹೆಸರಿಗೆ ಮೊದಲನೆಯದಾಗಿ, “ನೀತಿರಾಜನು” ಎಂದೂ ತರುವಾಯ “ಸಾಲೇಮಿನ ರಾಜ,” ಅಂದರೆ, “ಸಮಾಧಾನದ ಅರಸನು” ಎಂದರ್ಥ.


ಯೆಹೋವ ದೇವರಾದ ನಾನೇ ಅದನ್ನು ಕಾಯುತ್ತೇನೆ. ಸತತವಾಗಿ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ. ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.


ಪೂರ್ವದಿಂದ ನೀತಿವಂತನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು, ರಾಷ್ಟ್ರಗಳನ್ನು ಅವನ ಮುಂದೆ ಕೊಟ್ಟುಬಿಟ್ಟು, ಅವನನ್ನು ರಾಜರ ಮೇಲೆ ಆಳುವುದಕ್ಕೆ ಮಾಡಿದವನು ಯಾರು? ಅವನ ಖಡ್ಗವನ್ನು ಧೂಳನ್ನಾಗಿಯೂ, ಅವನ ಬಿಲ್ಲನ್ನು ಹಾರಿಹೋಗುವ ಹೊಟ್ಟಿನಂತೆಯೂ ಅವರನ್ನು ಕೊಟ್ಟನು.


“ಯೆಹೋವ ದೇವರು ತಾವೇ ಅಭಿಷೇಕಿಸಿದ ಕೋರೆಷನಿಗೆ ಹೇಳುವುದೇನೆಂದರೆ: ರಾಷ್ಟ್ರಗಳನ್ನು ನೀನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯಲು ನಾನು ನಿನ್ನ ಬಲಗೈಯನ್ನು ಹಿಡಿದು ನಡೆಸುವೆನು.


ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ‘ಈಗ ಯೆಹೋವ ದೇವರ ಜೀವದಾಣೆ,’ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವುದಕ್ಕೆ ನನ್ನ ಜನರ ಮಾರ್ಗಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ, ಆಗ ಅವರು ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು