ಯೆಶಾಯ 42:9 - ಕನ್ನಡ ಸಮಕಾಲಿಕ ಅನುವಾದ9 ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮುಂತಿಳಿಸಿದ ಸಂಗತಿಗಳಿದೋ ಈಡೇರಿವೆ ಹೊಸ ಸಂಗತಿಗಳನಿದೋ ಪ್ರಕಟಿಸುವೆ ಅವು ತಲೆದೋರುವುದಕ್ಕೆ ಮುಂಚೆಯೇ ನಿಮಗೆ ತಿಳಿಸುವೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇಗೋ, ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇವೆ; ಅವು ತಲೆದೋರುವದಕ್ಕೆ ಮುಂಚೆ ಅವುಗಳನ್ನು ನಿಮಗೆ ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇಗೋ, ಆದಿಯಲ್ಲಿಯೇ ಮುಂದಿನ ಸಂಗತಿಗಳನ್ನು ತಿಳಿಸಿದೆನು. ಅವೆಲ್ಲವೂ ಸಂಭವಿಸಿದವು. ಈಗ ಕೆಲವು ವಿಷಯಗಳು ನಿನಗೆ ಪ್ರಕಟಿಸುತ್ತೇನೆ; ಸಂಭವಿಸುವ ಮೊದಲೇ ಅವುಗಳನ್ನು ನಿನಗೆ ತಿಳಿಸುವೆನು.” ಅಧ್ಯಾಯವನ್ನು ನೋಡಿ |