Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:17 - ಕನ್ನಡ ಸಮಕಾಲಿಕ ಅನುವಾದ

17 ರಥಗಳನ್ನು, ಕುದುರೆಗಳನ್ನು, ದಂಡನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ, ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ, ದೀಪದ ಬತ್ತಿ ನಂದಿ ಆರಿಹೋಗುವಂತೆಯೂ ಮಾಡಿದಾತನು ಇಂತೆನ್ನುತ್ತಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾರು ರಥಗಳನ್ನು, ಕುದರೆಗಳನ್ನು, ಸೈನ್ಯಗಳನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ, ಅವು ಬಿದ್ದು ಏಳಲಾರದಂತೆಯೂ, ದೀಪದೋಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿದವನು” ಯೆಹೋವನು ಹೀಗೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಶ್ವರಥಭಟಸೈನ್ಯಗಳನ್ನು ಹೊರಡಿಸಿದವನಾರೋ, ಅವು ಬಿದ್ದು ಏಳಲಾಗದೆ, ಬತ್ತಿಕರಗಿಹೋಗುವಂತೆ ಮಾಡಿದವನಾರೋ, ಆ ಸ್ವಾಮಿ ಸರ್ವೇಶ್ವರ ನುಡಿದ ಮಾತಿದೋ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾವನು ಅಶ್ವರಥಭಟಸೈನ್ಯಗಳನ್ನು ಹೊರಡಿಸಿ ಅವು ಬಿದ್ದು ಏಳಲಾರದಂತೆಯೂ ದೀಪದೋಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿದನೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನನ್ನ ವಿರುದ್ಧವಾಗಿ ಯುದ್ಧಮಾಡುವ ಅಶ್ವದಳ, ರಥಬಲ ಮತ್ತು ಭೂದಳವು ಸೋತುಹೋಗುವವು. ಮತ್ತೆ ಅವರು ಏಳುವದೇ ಇಲ್ಲ. ಅವರೆಲ್ಲರೂ ನಾಶವಾಗುವರು. ಮೇಣದ ಬತ್ತಿಯ ಬೆಂಕಿಯು ಆರಿಸಲ್ಪಡುವಂತೆಯೇ ಅವರು ನಂದಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:17
16 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕೆಲಸ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವುವು.”


ಜೇನುನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ, ಅವರು ಮುಳ್ಳಿನ ಬೆಂಕಿಯ ಹಾಗೆ ಕ್ಷಣಮಾತ್ರದಲ್ಲಿ ಇಲ್ಲವಾಗಿ ಹೋದರು; ಯೆಹೋವ ದೇವರ ಹೆಸರಿನಲ್ಲಿ ನಾನು ಅವರನ್ನು ಸೋಲಿಸುವೆನು.


ಅವರು ಫರೋಹನ ರಥಗಳನ್ನೂ, ಅವನ ಸ್ಯೆನ್ಯವನ್ನೂ ಸಮುದ್ರದಲ್ಲಿ ಅಲ್ಲಾಡಿಸಿ ಎಸೆದಿದ್ದಾರೆ. ಫರೋಹನ ಅತ್ಯುತ್ತಮ ಅಧಿಕಾರಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿ ಹೋದರು.


ಈತನು ನ್ಯಾಯವನ್ನು ಜಯಕ್ಕೆ ನಡೆಸುವವರೆಗೆ, ಜಜ್ಜಿದ ದಂಟನ್ನು ಮುರಿಯುವವನಲ್ಲ, ಆರಿ ಹೋಗುತ್ತಿರುವ ಬತ್ತಿಯನ್ನು ನಂದಿಸುವವನೂ ಅಲ್ಲ.


ಫರೋಹನ ಕುದುರೆಗಳು ಅವನ ರಥಗಳ ಮತ್ತು ಸವಾರರ ಸಂಗಡ ಸಮುದ್ರದೊಳಗೆ ಬಂದಾಗ, ಯೆಹೋವ ದೇವರು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿದರು. ಆದರೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿನ ಒಣನೆಲದ ಮೇಲೆ ದಾಟಿಹೋದರು.


ನಿನ್ನಿಂದ ಕುದುರೆಯನ್ನೂ, ಅದರ ಮೇಲೆ ಹತ್ತಿದವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ರಥವನ್ನೂ, ಅದರಲ್ಲಿ ಸವಾರಿ ಮಾಡುವವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ.


ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕುವೆನು. ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಮತ್ತು ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಚಿಕ್ಕ ಮತ್ತು ದೊಡ್ಡ ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗಗಳನ್ನು ಹಿಡಿದಿರುವರು.


ಬಾರಾಕನು ಅವನ ಸೈನ್ಯ, ರಥಗಳನ್ನು ಹರೋಷೆತ್ ಹಗ್ಗೋಯಿಮಿನವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲರು ಖಡ್ಗದಿಂದ ಹತರಾದರು, ಒಬ್ಬನೂ ಉಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು