Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:19 - ಕನ್ನಡ ಸಮಕಾಲಿಕ ಅನುವಾದ

19 ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು. ಅದು ಈಗಲೇ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸುವೆನು. ಮರುಭೂಮಿಯಲ್ಲಿ ನದಿಗಳನ್ನೂ ಉಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇಗೋ, ನೂತನ ಕಾರ್ಯವನು ನಾನೆಸಗುವೆ ಈಗಲೇ ಅದು ತಲೆದೋರುತಲಿದೆ, ನಿಮಗೆ ಕಾಣುವುದಿಲ್ಲವೇ? ಮಾರ್ಗವನ್ನು ಏರ್ಪಡಿಸುವೆ ಮರುಭೂಮಿಯಲಿ, ಹರಿಸುವೆ ತೊರೆಗಳನ್ನು ಅರಣ್ಯದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ, ನಿಮಗೆ ಕಾಣುವದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯಾಕೆಂದರೆ, ನಾನು ಹೊಸ ಕಾರ್ಯಗಳನ್ನು ಮಾಡುವೆನು. ನೀವು ಹೊಸ ಸಸಿಯ ರೀತಿಯಲ್ಲಿ ಬೆಳೆಯುವಿರಿ. ಇದು ಸತ್ಯವೆಂದು ನಿಮಗೆ ಗೊತ್ತಿದೆ. ನಾನು ಮರುಭೂಮಿಯಲ್ಲಿ ಖಂಡಿತವಾಗಿಯೂ ರಸ್ತೆಯನ್ನು ಮಾಡುತ್ತೇನೆ; ಒಣನೆಲದಲ್ಲಿ ನದಿ ಹರಿಯುವಂತೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:19
26 ತಿಳಿವುಗಳ ಹೋಲಿಕೆ  

ನೀನು ಕೇಳಿದ್ದೀ, ಇವೆಲ್ಲವುಗಳನ್ನು ದೃಷ್ಟಿಸು. ನೀವು ಅದನ್ನು ಒಪ್ಪಿಕೊಳ್ಳದೆ ಇದ್ದೀರೋ? “ಇಂದಿನಿಂದ ಹೊಸ ಸಂಗತಿಗಳನ್ನೂ, ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನೂ ನಿನಗೆ ಹೇಳುತ್ತೇನೆ.


ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.


ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.


ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಇಗೋ, ನಾನು ಎಲ್ಲವನ್ನೂ ನೂತನಗೊಳಿಸುತ್ತೇನೆ!” ಎಂದರು ಮತ್ತು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ ಸತ್ಯವಾದವೂ ಆಗಿವೆ!” ಎಂದು ಹೇಳಿದನು.


ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು ತಗ್ಗುಗಳ ಮಧ್ಯದಲ್ಲಿ ಬುಗ್ಗೆಗಳನ್ನು ಹೊರಡಿಸಿ, ಮರುಭೂಮಿಯನ್ನು ನೀರಿನ ಕೆರೆಯನ್ನಾಗಿಯೂ, ಒಣನೆಲವನ್ನು ನೀರಿನ ಒರತೆಗಳನ್ನಾಗಿಯೂ ಮಾಡುವೆನು.


ವಿಶ್ವಾಸದ್ರೋಹಿ ಇಸ್ರಾಯೇಲ್ ಮಗಳೇ ಎಷ್ಟರವರೆಗೆ ಅಡ್ಡಾಡುವೆ? ಏಕೆಂದರೆ ಯೆಹೋವ ದೇವರು ಭೂಮಿಯಲ್ಲಿ ಹೊಸದನ್ನು ಸೃಷ್ಟಿಸುತ್ತಾರೆ. ಹೆಂಗಸು ಗಂಡಸನ್ನು ಕಾಪಾಡುವಳು.”


ಅಲ್ಲಿ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು, ನೀನು ಬಂಡೆಯನ್ನು ಹೊಡೆಯಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವುದು,” ಎಂದರು. ಮೋಶೆಯು ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.


ದೇವರು ಅಗ್ನಿಸರ್ಪಗಳೂ, ಚೇಳುಗಳೂ ತುಂಬಿದ ಮತ್ತು ನೀರಿಲ್ಲದ ಆ ಭಯಂಕರವಾದ ವಿಶಾಲ ಮರುಭೂಮಿಯಲ್ಲಿ ನಿಮ್ಮನ್ನು ನಡೆಸಿ, ಗಟ್ಟಿಯಾದ ಬಂಡೆಯೊಳಗಿಂದ ನಿಮಗೆ ನೀರು ಬರಮಾಡಿದರು.


ದೇವರು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಮರುಭೂಮಿಯಲ್ಲಿ ನದಿಯಾಗಿ ಹರಿಯಿತು.


ಮೋಶೆಯು ತನ್ನ ಕೈಯನ್ನು ಎತ್ತಿ, ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ಬಹಳ ನೀರು ಹೊರಗೆ ಬಂತು, ಜನರೂ ಅವರ ಪಶುಗಳೂ ಕುಡಿದರು.


ಯೆಹೋವ ದೇವರೇ, ನೆಗೆವನಲ್ಲಿರುವ ಹೊಳೆಗಳ ಹಾಗೆ ಉಳಿದಿರುವವರನ್ನು ಸಹ ಸೆರೆಯಿಂದ ತಿರುಗಿ ಬರಮಾಡಿರಿ.


ಮಹಾ ಸಂಹಾರದ ದಿವಸದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು ನೀರಿನ ಕಾಲುವೆಗಳೂ ಹರಿಯುತ್ತಿರುವುವು.


ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.


ಅಲ್ಲಿ ಯೆಹೋವ ದೇವರು ನಮ್ಮ ಬಲಶಾಲಿಯಾಗಿರುತ್ತಾರೆ. ನದಿಸರೋವರಗಳಂತೆ ನಮ್ಮನ್ನು ಸುತ್ತುವರಿಯುವರು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡದಾದ ಹಡಗಾಗಲಿ ಅದನ್ನು ದಾಟುವುದಿಲ್ಲ.


ಅರಣ್ಯವೂ, ಮರುಭೂಮಿಯೂ ಆನಂದಿಸುವುದು: ಒಣ ನೆಲವು ಹರ್ಷಿಸಿ, ತಾವರೆಯಂತೆ ಕಳಕಳಿಸುವುದು.


ಮರುಭೂಮಿಯಲ್ಲಿ ದೇವದಾರು, ಜಾಲೀಮರ, ಸುಗಂಧ, ಓಲಿವ್ ಮರಗಳನ್ನು ನಾನು ನೆಡುವೆನು. ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.


ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಇರದು. ಝಳವೂ, ಬಿಸಿಲೂ ಬಡಿಯದು. ಏಕೆಂದರೆ ಅವರನ್ನು ಕರುಣಿಸುವ ದೇವರು ಅವರನ್ನು ನಡೆಸುತ್ತಾ, ನೀರುಕ್ಕುವ ಒರತೆಗಳ ಬಳಿಗೆ ತರುವರು.


ಯೆಹೋವ ದೇವರು ಚೀಯೋನನ್ನು ಸಂತೈಸೇ ಸಂತೈಸುವರು. ಅವರು ಅದರ ಹಾಳಾದ ಸ್ಥಳಗಳನ್ನು ಕರುಣೆಯಿಂದ ನೋಡುವರು. ಅದರ ಮರುಭೂಮಿಯನ್ನು ಏದೆನ್ ಹಾಗೆಯೂ, ಹಾಳು ಪ್ರದೇಶವನ್ನು ಯೆಹೋವ ದೇವರ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ, ಉಲ್ಲಾಸವೂ, ಉಪಕಾರ ಸ್ತುತಿಯೂ, ಇಂಪಾದ ಸ್ವರವೂ ಕಂಡು ಬರುವುವು.


“ಆದ್ದರಿಂದ ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ, ‘ಇಸ್ರಾಯೇಲನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವುದೇ ಇಲ್ಲ.


‘ಈ ಕಾರ್ಯಗಳನ್ನು ನನ್ನ ವಿಗ್ರಹಗಳು ನಡಿಸಿದೆ. ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ,’ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ಇವು ಸಂಭವಿಸುವುದಕ್ಕಿಂತ ಮೊದಲೇ ತಿಳಿಸಿದೆನು.


ಅವರು ಅಳುತ್ತಾ ಬರುವರು. ಬಿನ್ನಹಗಳ ಸಂಗಡ ಅವರನ್ನು ನಡೆಸುವೆನು. ಅವು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು. ಏಕೆಂದರೆ ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ. ಎಫ್ರಾಯೀಮನು ನನ್ನ ಚೊಚ್ಚಲ ಮಗನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು