Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:24 - ಕನ್ನಡ ಸಮಕಾಲಿಕ ಅನುವಾದ

24 ನೀನು ನನಗೋಸ್ಕರ ಹಣದಿಂದ ಪರಿಮಳ ತೈಲವನ್ನು ಕೊಂಡುಕೊಳ್ಳಲಿಲ್ಲ. ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ಅಕ್ರಮಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀನು ನನಗೋಸ್ಕರ ಹಣಕೊಟ್ಟು ತೈಲವನ್ನು ತರಲಿಲ್ಲ, ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನನಗೋಸ್ಕರ ನೀನು ಹಣ ತೆತ್ತು ಅಗರಬತ್ತಿ ತರಲಿಲ್ಲ ಯಜ್ಞಪಶುಗಳ ವಪೆಯಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಬದಲಿಗೆ ನನ್ನನ್ನು ಪೀಡಿಸಿರುವೆ ನಿನ್ನ ಪಾಪಗಳಿಂದ ಬೇಸರಗೊಳಿಸಿರುವೆ ನನ್ನನು ನಿನ್ನ ದೋಷಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀನು ನನಗೋಸ್ಕರ ಹಣಕೊಟ್ಟು ಬಜೆಯನ್ನು ತರಲಿಲ್ಲ, ಯಜ್ಞಪಶುಗಳ ವಪೆಯಿಂದ ನನ್ನನ್ನು ತೃಪ್ತಿಪಡಿಸಲಿಲ್ಲ; ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಪಡಿಸಿದ್ದೀ, ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀನು ನನ್ನ ಗೌರವಾರ್ಥವಾಗಿ ಕಾಣಿಕೆಗಳನ್ನು ಮತ್ತು ಧೂಪವನ್ನು ಖರೀದಿ ಮಾಡಲು ನಿನ್ನ ಹಣವನ್ನು ಖರ್ಚು ಮಾಡಲಿಲ್ಲ. ಆದರೆ ನೀನು ನನ್ನನ್ನು ನಿನ್ನ ಗುಲಾಮನಾಗುವಂತೆ ಬಲವಂತಪಡಿಸಿದೆ. ನೀನು ನಿನ್ನ ಪಾಪಗಳಿಂದ ನನಗೆ ಭಾರವನ್ನುಂಟುಮಾಡಿರುವೆ ಮತ್ತು ನಿನ್ನ ಅಪರಾಧಗಳಿಂದ ನನ್ನನ್ನು ಕುಗ್ಗಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:24
18 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ?


ಶೆಬದಿಂದ ಸಾಂಬ್ರಾಣಿಯೂ ದೂರದೇಶದಿಂದ ಒಳ್ಳೆಯ ಸುಗಂಧವೂ ನನಗೆ ಬರುವುದು ಏತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚುಗೆಯಾಗಲಿಲ್ಲ. ನಿಮ್ಮ ಬಲಿಗಳು ನನಗೆ ರುಚಿಯಿಲ್ಲ.”


ನಿಮ್ಮ ಅಮಾವಾಸ್ಯೆಗಳನ್ನೂ, ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ದ್ವೇಷಿಸುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.


ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.


ನಾಲ್ವತ್ತು ವರ್ಷ ಆ ಸಂತತಿಗೆ ಬೇಸರಗೊಂಡು, ‘ಇವರು ತಮ್ಮ ಹೃದಯದಲ್ಲಿ ತಪ್ಪಿಹೋಗುವ ಜನರಾಗಿದ್ದಾರೆ, ನನ್ನ ಮಾರ್ಗಗಳನ್ನು ಇವರು ಅರಿಯರು,’ ಎಂದೆನು.


“ಆದರೆ ತನ್ನ ಮಂದೆಯಲ್ಲಿ ದೋಷವಿಲ್ಲದ ಗಂಡು ಪಶು ಇರಲಾಗಿ ಅದನ್ನು ಅರ್ಪಿಸಲು ಪ್ರಮಾಣಮಾಡಿ, ಯೆಹೋವ ದೇವರಿಗೆ ದೋಷವುಳ್ಳದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ, ಏಕೆಂದರೆ ನಾನು ಮಹಾ ಅರಸನು, ನನ್ನ ಹೆಸರು ಇತರ ಜನಾಂಗಗಳಲ್ಲಿ ಭಯಭಕ್ತಿಯುಳ್ಳದ್ದಾಗಿರಬೇಕು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ, ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.


“ ‘ನೀನು ನಿನ್ನ ಯೌವನದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ, ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿನ್ನ ಇತರ ಎಲ್ಲಾ ಅಸಹ್ಯವಾದವುಗಳ ಜೊತೆಗೆ, ಈ ಅಪವಿತ್ರತೆಯನ್ನು ನೀನು ಮಾಡಲಿಲ್ಲವೇ?


ಆದ್ದರಿಂದ ಸರ್ವಶಕ್ತರಾದ ದೇವರೂ, ಇಸ್ರಾಯೇಲಿನ ಪರಾಕ್ರಮಿಯೂ ಆದ ಯೆಹೋವ ದೇವರು ಹೇಳುವುದೇನೆಂದರೆ, “ಆಹಾ! ನನ್ನ ವೈರಿಗಳ ಮೇಲೆ ನನ್ನ ಕೋಪವನ್ನು ಹೊರಹಾಕುತ್ತೇನೆ ಮತ್ತು ನನ್ನ ಶತ್ರುಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ.


ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಯಾಜಕನು ಅವುಗಳನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಸುವಾಸನೆಯ ಯಜ್ಞಾರ್ಪಣೆಯ ಆಹಾರವಾಗಿರುವುದು. ಎಲ್ಲಾ ಕೊಬ್ಬು ಯೆಹೋವ ದೇವರದೇ.


ಯೆಹೋವ ದೇವರು ಮೋಶೆಗೆ, “ನೀನು ಹಾಲು ಮಡ್ಡಿ, ಗುಗ್ಗಲ ಹಾಗೂ ಗಂಧದ ಚಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಮ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.


“ಅದರ ಮೇಲೆ ಆರೋನನು ಪರಿಮಳ ಧೂಪವನ್ನು ಸುಡಬೇಕು. ಪ್ರತಿದಿನ ಬೆಳಿಗ್ಗೆ ಸುಡಬೇಕು. ಪ್ರತಿದಿನ ಬೆಳಿಗ್ಗೆ ದೀಪಗಳನ್ನು ಸಿದ್ಧಮಾಡುವಾಗ ಅದನ್ನು ಸುಡಬೇಕು.


ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ, ನೀವು ಮಾಡಿದ ಅಸಹ್ಯಗಳನ್ನೂ ಯೆಹೋವ ದೇವರು ಇನ್ನು ತಾಳಲಾರದ್ದರಿಂದ, ನಿಮ್ಮ ದೇಶವು ಈ ದಿನ ಇರುವ ಪ್ರಕಾರ, ನಿವಾಸಿಗಳಿಲ್ಲದೆ ಹಾಳಾಗಿಯೂ, ವಿಸ್ಮಯವಾಗಿಯೂ, ಶಾಪವಾಗಿಯೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು