Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:9 - ಕನ್ನಡ ಸಮಕಾಲಿಕ ಅನುವಾದ

9 ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ. ಎಲ್ಲಾ ಜನರೂ ಸೇರಿಕೊಳ್ಳಲಿ. ಅವರ ದೇವರುಗಳಲ್ಲಿ ಭವಿಷ್ಯವನ್ನು ನುಡಿಯಬಲ್ಲವರು ಯಾರು? ಗತಿಸಿದ ಸಂಗತಿಗಳನ್ನು ಮುಂತಿಳಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸುವುದಕ್ಕೆ ಸಾಕ್ಷಿಗಳನ್ನು ಕರೆತರಲಿ. ಆ ಸಾಕ್ಷಿಗಳು ಇದನ್ನು ಕೇಳಿ, ನಿಜವೆಂದು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ ‘ಇದು ನಿಜ’ ಎಂದು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬರಲಿ, ಎಲ್ಲಾ ಜನಾಂಗಗಳು ಒಟ್ಟಿಗೆ ನೆರೆಯಲಿ, ಸಕಲ ದೇಶಿಯರು ಇಲ್ಲಿಯೇ. ಅವರ ದೇವರುಗಳಲ್ಲಿ ಭವಿಷ್ಯವನ್ನು ನುಡಿಯಬಲ್ಲವರು ಯಾರು? ಗತಿಸಿದ ಘಟನೆಗಳನ್ನು ಮುಂತಿಳಿಸಿದವರಾರು? ಕರೆತರಲಿ, ಆ ದೇವರುಗಳು ಸಾಕ್ಷಿಗಳನು ಸ್ಥಾಪಿಸಿಕೊಳ್ಳಲಿ, ತಾವು ಸತ್ಯವಂತರೆಂಬುದನು; ರುಜುಪಡಿಸಲಿ ಕೇಳುವವರಿಗೆ ತಮ್ಮ ಮಾತು ನಿಜವೆಂಬುದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು [ಇವರ ಮಾತನ್ನು] ಕೇಳಿ ನಿಜವೆಂದು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಎಲ್ಲಾ ಜನಾಂಗದವರೂ ಎಲ್ಲಾ ಜನರೂ ಒಟ್ಟುಗೂಡಬೇಕು. ಅವರ ಸುಳ್ಳುದೇವರಲ್ಲಿ ಒಬ್ಬನು ಆದಿಯಲ್ಲಿ ಸಂಭವಿಸಿದ್ದನ್ನು ಹೇಳುವದಾಗಿದ್ದರೆ ತನ್ನ ಸಾಕ್ಷಿಗಳನ್ನು ಕರೆದು ತರಲಿ. ಆ ಸಾಕ್ಷಿಗಳು ಸತ್ಯವನ್ನಾಡಲಿ. ಆಗ ಅವರು ಸತ್ಯವಂತರೋ ಇಲ್ಲವೋ ಎಂದು ಗೊತ್ತಾಗುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:9
17 ತಿಳಿವುಗಳ ಹೋಲಿಕೆ  

ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.


ಸುತ್ತಲಿನ ಎಲ್ಲಾ ರಾಷ್ಟ್ರಗಳೇ, ಸಭೆಯಾಗಿ ಕೂಡಿಕೊಳ್ಳಿರಿ. ಯೆಹೋವ ದೇವರೇ, ನಿನ್ನ ಶೂರರನ್ನು ಕೆಳಗೆ ಇಳಿಸಿರಿ.


ನನಗೆ ಜ್ಞಾಪಕಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತನೆಂದು ತೋರಿಸು.


ದ್ವೀಪಗಳೇ, ನನ್ನ ಮುಂದೆ ಮೌನದಿಂದಿರಿ. ರಾಷ್ಟ್ರಗಳು ತಮ್ಮ ಬಲವನ್ನು ನವೀಕರಿಸಲಿ! ಅವರು ನನ್ನ ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಸಮೀಪಕ್ಕೆ ಒಟ್ಟಾಗಿ ಬರೋಣ.


ದೇವಾಧಿ ದೇವರಾದ ಯೆಹೋವ ದೇವರು ತಾವೇ ಮಾತನಾಡುತ್ತಿದ್ದಾರೆ, ಸೂರ್ಯೋದಯದಿಂದ ಅಸ್ತಮಾನದವರೆಗೂ ಇರುವ ಭೂಲೋಕದವರು ಕರೆಯುತ್ತಿದ್ದಾರೆ.


“ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಯೆಹೋವ ದೇವರು ಆಯ್ಕೆ ಮಾಡಿದ ಮಿತ್ರನು ಬಾಬಿಲೋನಿನ ವಿರುದ್ಧ ತನ್ನ ಉದ್ದೇಶವನ್ನು ಪೂರೈಸುತ್ತಾನೆ. ತನ್ನ ತೋಳು ಕಸ್ದೀಯರ ಮೇಲೆ ಇರುವುದು.


ರಾಷ್ಟ್ರಗಳೇ, ಕೇಳುವುದಕ್ಕೆ ಹತ್ತಿರ ಬನ್ನಿರಿ, ಕಿವಿಗೊಡಿರಿ. ಭೂಮಿಯೂ, ಅದರಲ್ಲಿರುವ ಸಮಸ್ತವೂ; ಲೋಕವೂ, ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.


ಪೂರ್ವಕಾಲದಲ್ಲೇ ಹಳೆಯ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತಿಳಿಸಿದ್ದೇನೆ. ನಾನು ತಟ್ಟನೆ ನಡೆಸಲು, ಅವು ನೆರವೇರಿದವು.


“ಇಸ್ರಾಯೇಲಿನ ಅರಸನೂ ವಿಮೋಚಕನೂ, ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: ನಾನೇ ಮೊದಲನೆಯವನು, ನಾನೇ ಕಡೆಯವನು. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು