Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:12 - ಕನ್ನಡ ಸಮಕಾಲಿಕ ಅನುವಾದ

12 ಕಮ್ಮಾರನು ಸಲಕರಣೆಯನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಅವನು ಸುತ್ತಿಗೆ ಹಿಡಿದು ತನ್ನ ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುತ್ತಾನೆ; ಅವನು ಹಸಿದು ಬಲಹೀನನಾಗಿದ್ದರೂ, ನೀರು ಕುಡಿಯದೇ ದಣಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ, ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು. ಅವನು ಹಸಿದು ಬಳಲುವನು, ನೀರಿಲ್ಲದೆ ದಣಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕಮ್ಮಾರನು ಮುಟ್ಟನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಬಲವಾದ ತೋಳಿನಿಂದ ಚಮಟಿಕೆ ಹಿಡಿದು ಬಡಿದು ವಿಗ್ರಹವನ್ನು ರೂಪಿಸುತ್ತಾನೆ; ಹಸಿದು ಬಳಲುತ್ತಾನೆ, ಬಾಯಾರಿ ಸೊರಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಮ್ಮಾರನು ಮುಟ್ಟನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು; ಅವನೂ ಹಸಿದು ಬಳಲುವನು, ನೀರಿಲ್ಲದೆ ಕಂಗೆಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಒಬ್ಬನು ಕುಲಿಮೆಯ ಬೆಂಕಿಯ ಮೇಲೆ ಕಬ್ಬಿಣವನ್ನು ಕಾಯಿಸುತ್ತಾನೆ. ಅವನು ತನ್ನ ಸುತ್ತಿಗೆಯಿಂದ ಆ ಲೋಹವನ್ನು ವಿಗ್ರಹವನ್ನಾಗಿ ಮಾಡುತ್ತಾನೆ. ಅವನು ಅದನ್ನು ತನ್ನ ತೋಳ್ಬಲದಿಂದ ಮಾಡುತ್ತಾನೆ. ಆದರೆ ಅವನು ಹಸಿದಾಗ ಅವನ ಶಕ್ತಿಯು ಕಡಿಮೆಯಾಗುತ್ತದೆ. ಆ ಮನುಷ್ಯನು ನೀರನ್ನು ಕುಡಿಯದಿದ್ದರೆ ಅವನು ಬಲಹೀನನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:12
11 ತಿಳಿವುಗಳ ಹೋಲಿಕೆ  

ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ. ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.


ಜನರ ಶ್ರಮೆಯು ಬೆಂಕಿಗೆ ತುತ್ತಾಗುವುದು. ಜನಾಂಗಗಳು ವ್ಯರ್ಥವಾಗಿ ದಣಿದುಕೊಳ್ಳುತ್ತವೆ. ಇದು ಸೇನಾಧೀಶ್ವರ ಯೆಹೋವ ದೇವರ ಚಿತ್ತವಷ್ಟೆ.


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು, ತಮಗೆ ಎರಕ ಹೊಯ್ದ ಕರುವನ್ನು ಮಾಡಿಕೊಂಡು, ಅದನ್ನು ಆರಾಧಿಸುತ್ತಾ, ಅದಕ್ಕೆ ಬಲಿ ಅರ್ಪಿಸಿ, ‘ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರುಗಳು ಇವುಗಳೇ,’ ಎಂದು ಹೇಳುತ್ತಿದ್ದಾರೆ.”


ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಉಳಿಯಿಂದ ರೂಪಿಸಿ, ಎರಕ ಹೊಯ್ದು, ಕರುವಾಗಿ ಮಾಡಿದನು. ಆಗ ಅವರು, “ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿನಿಂದ ಬರಮಾಡಿದ ನಿಮ್ಮ ದೇವರುಗಳು ಇವೇ,” ಎಂದರು.


ಅಲ್ಲಿ ನೀವು ಮನುಷ್ಯರ ಕೈಯಿಂದ ಮಾಡಿದ ಎಂದರೆ, ನೋಡದೆಯೂ, ಕೇಳದೆಯೂ, ಉಣ್ಣದೆಯೂ, ಮೂಸಿ ನೋಡದೆಯೂ ಇರುವಂಥ ಮರ ಮತ್ತು ಕಲ್ಲುಗಳಿಂದ ಮಾಡಿದ ದೇವರುಗಳನ್ನು ಸೇವಿಸುವಿರಿ.


ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು ಹುಳಿತುಹೋಗದ ಮರವನ್ನು ಹುಡುಕಿ, ಬಾಗಿಬೀಳದ ವಿಗ್ರಹವನ್ನು ತಯಾರಿಸುವುದಕ್ಕೆ ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು.


“ಮನುಷ್ಯನು ಕೆತ್ತಿ ರೂಪಿಸಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ ಪ್ರತಿಮೆಯ ಬೆಲೆಯೇನು? ಅದನ್ನು ರೂಪಿಸಿದವನು, ತನ್ನ ಸ್ವಂತ ಸೃಷ್ಟಿಯನ್ನು ನಂಬುತ್ತಾನೆ. ಮಾತನಾಡದಂಥ ಮೂರ್ತಿಗಳನ್ನು ಅವನು ಮಾಡುತ್ತಾನೆ.


ಆಗ ಯೆಹೋವ ದೇವರು ನನಗೆ ನಾಲ್ಕು ಕಮ್ಮಾರರನ್ನು ತೋರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು