ಯೆಶಾಯ 44:17 - ಕನ್ನಡ ಸಮಕಾಲಿಕ ಅನುವಾದ17 ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ, ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ಕಾಪಾಡು,” ಎಂದು ಬೇಡಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದರಲ್ಲಿ ಉಳಿದ ಭಾಗವನ್ನು ತನ್ನ ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಪ್ರಾರ್ಥಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಉಳಿದ ಭಾಗದಿಂದ ತನ್ನ ದೇವತೆಯ ವಿಗ್ರಹವನ್ನು ಕೆತ್ತಿ, ಅದಕ್ಕೆ ಎರಗಿ ಅಡ್ಡಬೀಳುತ್ತಾನೆ; “ನೀನೇ ನನ್ನ ದೇವರು; ನನ್ನನ್ನು ರಕ್ಷಿಸು,” ಎಂದು ಪ್ರಾರ್ಥಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಉಳಿದ ಭಾಗವನ್ನು ತನ್ನ ದೇವರನ್ನಾಗಿ ಬೊಂಬೆ ಕೆತ್ತಿ ಅದಕ್ಕೆ ಎರಗಿ ಅಡ್ಡಬಿದ್ದು - ನೀನೇ ನನ್ನ ದೇವರು, ನನ್ನನ್ನು ರಕ್ಷಿಸು ಎಂದು ಪ್ರಾರ್ಥಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅದರಲ್ಲಿ ಸ್ವಲ್ಪ ಮರದ ತುಂಡು ಉಳಿದಿರುತ್ತದೆ. ಅದನ್ನು ನೋಡಿ ಆ ಮನುಷ್ಯನು ಅದರಿಂದ ವಿಗ್ರಹವನ್ನು ತಯಾರಿಸುವನು. ಅದನ್ನು ದೇವರೆಂದು ಕರೆಯುವನು. ಅದರ ಮುಂದೆ ಅಡ್ಡಬಿದ್ದು ಆರಾಧಿಸುವನು. ಅದರ ಮುಂದೆ ಪ್ರಾರ್ಥಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿ |