Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:19 - ಕನ್ನಡ ಸಮಕಾಲಿಕ ಅನುವಾದ

19 “ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸವನ್ನು ಸುಟ್ಟು ತಿಂದೆನಲ್ಲಾ. ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ, ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದ್ದೇನೆ. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸ ಸುಟ್ಟು ತಿಂದಿದ್ದೇನೆ; ಮಿಕ್ಕಿದ್ದರಿಂದ ವಿಗ್ರಹಮಾಡುವುದು ಸರಿಯೇ? ಆ ಮರದ ತುಂಡಿಗೆ ಅಡ್ಡಬೀಳುವುದು ಅಸಹ್ಯವಲ್ಲವೆ?” ಎಂದುಕೊಳ್ಳುವಷ್ಟು ವಿವೇಕ ಯಾರಿಗೂ ಇಲ್ಲ; ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು, ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸ ಸುಟ್ಟು ತಿಂದೆನಲ್ಲಾ; ವಿುಕ್ಕದ್ದನ್ನು ನಾನು ಬೊಂಬೆ ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ, ಅಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಾನು ಆ ಮರದ ತುಂಡುಗಳನ್ನು ಬೆಂಕಿಯಲ್ಲಿ ಉರಿಸಿ ಚಳಿಕಾಯಿಸಿಕೊಂಡೆನು; ಅದರ ಕೆಂಡದಲ್ಲಿ ರೊಟ್ಟಿ ಸುಟ್ಟೆನು; ಮಾಂಸ ಬೇಯಿಸಿದೆನು; ಆ ಮಾಂಸವನ್ನು ತಿಂದೆನು; ಉಳಿದ ಮರದ ತುಂಡಿನಿಂದ ಅಸಹ್ಯವಾದ ಈ ವಿಗ್ರಹವನ್ನು ಮಾಡಿದೆನು; ನಾನು ಮರದ ತುಂಡನ್ನು ಪೂಜಿಸುತ್ತೇನೆ” ಎಂದು ಅವರೆಂದೂ ಯೋಚಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:19
16 ತಿಳಿವುಗಳ ಹೋಲಿಕೆ  

“ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷಿಗೋಸ್ಕರವೂ, ಅಮ್ಮೋನ್ಯರ ಅಸಹ್ಯಕರವಾದ ಮೋಲೆಕನಿಗೋಸ್ಕರವೂ ಯೆರೂಸಲೇಮಿನ ಪೂರ್ವದಲ್ಲಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.


ಸೊಲೊಮೋನನು ಸೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾಲಿಸಿದನು.


ಆದರೆ ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕ ಮಾಡುತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನೆಸಿಕೊಳ್ಳುವುದಿಲ್ಲ. ಈಗ ಅವರ ಪಾಪಗಳು ಅವರನ್ನು ಸುತ್ತಿಕೊಂಡಿವೆ. ಅವು ನನ್ನ ಮುಖದ ಮುಂದೆ ಇವೆ.


ಆ ಮನುಷ್ಯನು ನನಗೆ, “ಮನುಷ್ಯಪುತ್ರನೇ ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ಮತ್ತು ನಾನು ತೋರಿಸುವ ಎಲ್ಲಾ ಸಂಗತಿಗಳಿಗೆ ನೀನು ಮನಸ್ಸಿಡು. ನಾನು ನಿನಗೆ ಅವುಗಳನ್ನೆಲ್ಲಾ ತೋರಿಸುವುದಕ್ಕಾಗಿಯೇ ಇಲ್ಲಿಗೆ ನಿನ್ನನ್ನು ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ಜನರಿಗೆ ತಿಳಿಸು,” ಎಂದರು.


“ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸಮೀಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತುಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋದರು; ಅವರ ಘನವಂತರು ಹಸಿವಿನಿಂದ ಸಾಯುವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವುದು.


ಇದಲ್ಲದೆ ಯೆರೂಸಲೇಮಿನ ಮುಂದೆ ವಿಘ್ನ ಬೆಟ್ಟದ ದಕ್ಷಿಣದಲ್ಲಿದ್ದ ಸೀದೋನ್ಯರ ಅಸಹ್ಯಕರವಾದ ಅಷ್ಟೋರೆತಿಗೂ, ಮೋವಾಬ್ಯರ ಅಸಹ್ಯಕರವಾದ ಕೆಮೋಷನಿಗೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನಿಗೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕಟ್ಟಿಸಿದ ಉನ್ನತ ಪೂಜಾಸ್ಥಳಗಳನ್ನೂ ಯೋಷೀಯನು ಅಶುದ್ಧ ಮಾಡಿದನು.


“ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಈ ನಿಯಮದ ಮಾತುಗಳನ್ನು ಅನುಸರಿಸಬೇಕೆಂದು ನೀವು ನಿಮ್ಮ ಮಕ್ಕಳಿಗೆ ಆಜ್ಞಾಪಿಸಿರಿ.


ಫರೋಹನು ತಿರುಗಿಕೊಂಡು ತನ್ನ ಅರಮನೆಗೆ ಹಿಂದಿರುಗಿದನು. ಅವನು ಈ ಅದ್ಭುತಕ್ಕೂ ಗಮನಕೊಡಲಿಲ್ಲ.


ಈಗ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ.


ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ.


ಇದಲ್ಲದೆ ಯೋಷೀಯನು ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದುಬಿಟ್ಟು, ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.


ಅವರು ಏನೂ ತಿಳಿಯದವರು ಇಲ್ಲವೆ ಏನೂ ಗ್ರಹಿಸಲಾರದವರು. ಏಕೆಂದರೆ ಆತನು ಅವರ ಕಣ್ಣು ಕಾಣದಂತೆಯೂ, ಹೃದಯಗಳು ಗ್ರಹಿಸದಂತೆಯೂ ಮುಚ್ಚಿಬಿಟ್ಟಿದ್ದಾನೆ.


ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.


ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು