Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:20 - ಕನ್ನಡ ಸಮಕಾಲಿಕ ಅನುವಾದ

20 ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಂಥವನು ಮುಕ್ಕುವುದು ಬೂದಿಯನ್ನೇ; ಅವನ ಹೃದಯ ಮೋಸಗೊಂಡು ಅವನನ್ನು ತಪ್ಪುದಾರಿಗೆ ಎಳೆದಿದೆ. ಎಂದೇ, ಅವನು ಅಂಗೈ ಹುಣ್ಣಿನಂತಿರುವ ಆ ಸುಳ್ಳನ್ನೂ ಅರಿಯದೆ ಇದ್ದಾನೆ; ತನ್ನನ್ನೇ ರಕ್ಷಿಸಿಕೊಳ್ಳಲು ಆಗದೆ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು, ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಮನುಷ್ಯನಿಗೆ ತಾನು ಮಾಡುತ್ತಿರುವುದೇ ತಿಳಿಯದು. ಅವನು ಗಲಿಬಿಲಿಗೊಂಡಿದ್ದಾನೆ. ಅವನ ಹೃದಯವು ಅವನನ್ನು ತಪ್ಪುದಾರಿಯಲ್ಲಿ ನಡಿಸುತ್ತದೆ. ಅವನು ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ತಾನು ಮಾಡುತ್ತಿರುವುದು ತಪ್ಪೆಂದು ಅವನು ಕಾಣಲಾರನು. “ನನ್ನ ಕೈಯಲ್ಲಿರುವ ಈ ವಿಗ್ರಹವು ಸುಳ್ಳು ದೇವರಾಗಿದೆ” ಎಂದು ಅವನು ಹೇಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:20
29 ತಿಳಿವುಗಳ ಹೋಲಿಕೆ  

ಇದಲ್ಲದೆ, ದೇವರನ್ನು ಒಪ್ಪಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡೆಸುವವರಾಗುವಂತೆ ದೇವರು ಅನಾಚಾರದ ಮನಸ್ಸಿಗೆ ಅವರನ್ನು ಒಪ್ಪಿಸಿದರು.


ಎಫ್ರಾಯೀಮು ಗಾಳಿಯನ್ನು ತಿನ್ನುತ್ತದೆ. ಪೂರ್ವದ ಗಾಳಿಯ ಹಿಂದೆ ಹಿಂಬಾಲಿಸಿಕೊಂಡು ಹೋಗುತ್ತದೆ. ಅವನು ದಿನವೆಲ್ಲಾ ಸುಳ್ಳನ್ನೂ, ಹಿಂಸೆಯನ್ನೂ ಹೆಚ್ಚಿಸಿ, ಅಸ್ಸೀರಿಯರೊಂದಿಗೆ ಒಡಂಬಡಿಕೆ ಮಾಡಿಕೊಂಡು, ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಹೊತ್ತುಕೊಂಡು ಹೋಗುತ್ತಾನೆ.


ನಿಮ್ಮ ದುಃಖ ಬೇಸರದ ನಿಮಿತ್ತ, ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿದ್ದೇನೆ.


ದುಷ್ಟನು ವ್ಯರ್ಥವಾದದ್ದನ್ನು ನಂಬಿ ಮೋಸಹೋಗದಿರಲಿ. ಏಕೆಂದರೆ, ವ್ಯರ್ಥವಾದವುಗಳಿಂದ ಅವನಿಗಾಗುವ ಪ್ರತಿಫಲವು ಶೂನ್ಯವೇ.


ನಾವು ಅಪನಂಬಿಗಸ್ತರಾಗಿದ್ದರೂ ಅವರು ನಂಬಿಗಸ್ತರಾಗಿಯೇ ಉಳಿದಿರುವರು. ಅವರು ತಮ್ಮ ಸ್ವಭಾವವನ್ನು ತಾವೇ ನಿರಾಕರಿಸಲಾರರು.


ಅವರು ದೇವರ ಸತ್ಯವನ್ನು ಸುಳ್ಳನ್ನಾಗಿ ಬದಲಿಸಿಕೊಂಡು, ಸೃಷ್ಟಿಕರ್ತನನ್ನು ಆರಾಧಿಸದೆ ಸೃಷ್ಟಿವಸ್ತುಗಳನ್ನೇ ಪೂಜಿಸಿ ಸೇವೆ ಸಲ್ಲಿಸುವವರಾದರು. ಸೃಷ್ಟಿ ಕರ್ತನೇ ನಿರಂತರವಾಗಿ ಸ್ತುತಿ ಹೊಂದತಕ್ಕವರು. ಆಮೆನ್.


ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ.


ಆ ಸಾವಿರ ವರ್ಷ ತೀರುವ ತನಕ ಅವನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೂತನು ಅವನನ್ನು ಅಧೋಲೋಕದಲ್ಲಿ ತಳ್ಳಿ, ಬಾಗಿಲು ಮುಚ್ಚಿ ಅದಕ್ಕೆ ಮುದ್ರೆ ಹಾಕಿದನು. ಇವುಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆಯಾಗತಕ್ಕದ್ದು.


ದೀಪದ ಬೆಳಕು ನಿನ್ನಲ್ಲಿ ಎಂದೂ ಪ್ರಕಾಶಿಸದು. ವಧೂವರರ ಸ್ವರವು ಮತ್ತೆ ನಿನ್ನಲ್ಲಿ ಎಂದೂ ಕೇಳಿಬರದು. ಏಕೆಂದರೆ ನಿನ್ನ ವರ್ತಕರು ಭೂಮಿಯ ಮಹಾ ಪುರುಷರಾಗಿದ್ದು, ನಿನ್ನ ಮಾಂತ್ರಿಕ ಶಕ್ತಿಯ ದೆಸೆಯಿಂದ ಎಲ್ಲಾ ದೇಶಗಳವರು ವಂಚಿತರಾದರು.


ಆ ಮೊದಲನೆಯ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವನ್ನು ಕೊಡಲಾಗಿದ್ದರಿಂದ ಭೂನಿವಾಸಿಗಳನ್ನು ಮೋಸಗೊಳಿಸುತ್ತದೆ. ಭೂಮಿಯ ಮೇಲೆ ವಾಸಿಸುವವರು, ಕತ್ತಿಯಿಂದ ಗಾಯಹೊಂದಿ, ಸಾಯದೆ ಬದುಕಿದ ಮೃಗದ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಹೇಳುತ್ತದೆ.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ಆದರೆ ದುಷ್ಟರೂ ಇತರರಂತೆ ನಟಿಸುವ ವೇಷಧಾರಿಗಳೂ ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ಹೆಚ್ಚಾದ ಕೆಟ್ಟತನಕ್ಕೆ ಸಾಗುವರು.


ಅವರು ಕಪಟಿಗಳೂ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಬರೆಯುಳ್ಳವರಾದರೂ ಆಗಿದ್ದು


ಅವನು ಹಂದಿಗಳು ತಿನ್ನುತ್ತಿದ್ದ ಸಿಪ್ಪೆಗಳಿಂದಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಕ್ಕೆ ಆಶೆಪಟ್ಟನು, ಆದರೆ ಅದನ್ನು ಸಹ ಅವನಿಗೆ ಯಾರೂ ಕೊಡಲಿಲ್ಲ.


“ಮನುಷ್ಯನು ಕೆತ್ತಿ ರೂಪಿಸಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ ಪ್ರತಿಮೆಯ ಬೆಲೆಯೇನು? ಅದನ್ನು ರೂಪಿಸಿದವನು, ತನ್ನ ಸ್ವಂತ ಸೃಷ್ಟಿಯನ್ನು ನಂಬುತ್ತಾನೆ. ಮಾತನಾಡದಂಥ ಮೂರ್ತಿಗಳನ್ನು ಅವನು ಮಾಡುತ್ತಾನೆ.


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


ದ್ರೋಹಮಾಡಿದ್ದೇವೆ, ಯೆಹೋವ ದೇವರಿಗೆ ಸುಳ್ಳಾಡಿದ್ದೇವೆ. ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ. ಬಲಾತ್ಕಾರದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತನಾಡಿದ್ದೇವೆ. ಸುಳ್ಳು ಮಾತುಗಳಿಂದ ಬಸುರಾಗಿ ಅವುಗಳನ್ನು ಹೃದಯದಿಂದ ನುಡಿದಿದ್ದೇವೆ.


ವಿವೇಕವುಳ್ಳವನ ಹೃದಯವು ಪರಿಜ್ಞಾನವನ್ನು ಹುಡುಕುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನೇ ತಿನ್ನುತ್ತದೆ.


“ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಪೂರ್ವದಿಕ್ಕಿನ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವುದು ಉಂಟೋ?


ಜನರ ವಿಗ್ರಹಗಳು ಬೆಳ್ಳಿ, ಬಂಗಾರದವುಗಳು, ಅವು ಮನುಷ್ಯರ ಕೈಯಿಂದ ಮಾಡಲಾಗಿವೆ.


ಅವರ ಬಾಯಿ ಸುಳ್ಳನ್ನು ನುಡಿಯುತ್ತಿದೆ, ಅವರ ಬಲಗೈ ಮೋಸದ ಬಲಗೈ ಆಗಿದೆ.


ಪರದೇಶದವರ ಕೈಯಿಂದ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ; ಅವರ ಬಾಯಿ ವಂಚನೆಯನ್ನು ನುಡಿಯುತ್ತಿದೆ. ಅವರ ಬಾಯಿ ಸುಳ್ಳನ್ನೇ ನುಡಿಯುತ್ತಿದೆ.


ಏಕೆಂದರೆ ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆ ಇಟ್ಟು, ‘ನನ್ನನ್ನು ಯಾರೂ ನೋಡುವುದಿಲ್ಲ’ ಎಂದು ಹೇಳಿದೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ದಾರಿ ತಪ್ಪಿಸಿದ್ದರಿಂದ, ನಿನ್ನ ಹೃದಯದಲ್ಲಿ: ‘ಈಗ ಇರುವವಳು ನಾನೇ. ನನ್ನ ಹೊರತು ಇನ್ನು ಯಾರೂ ಇಲ್ಲ,’ ಎಂದುಕೊಂಡೆ.


“ನೀನು ಯಾರಿಗೆ ಹೆದರಿ, ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸ ಮಾಡಿರುವೆ. ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ, ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು