ಯೆಶಾಯ 44:28 - ಕನ್ನಡ ಸಮಕಾಲಿಕ ಅನುವಾದ28 ಕೋರೆಷನ ವಿಷಯವಾಗಿ ಹೀಗೆ ಹೇಳುವೆನು, ‘ನನ್ನ ಕುರುಬನು, ನನ್ನ ಇಷ್ಟವನ್ನೆಲ್ಲಾ ಪೂರೈಸುವವನು, ಯೆರೂಸಲೇಮಿಗೆ, “ನೀನು ಪುನಃ ನಿರ್ಮಾಣವಾಗುವೆ,” ದೇವಾಲಯಕ್ಕೆ, “ನಿನಗೆ ಅಸ್ತಿವಾರವು ಹಾಕಲಾಗುವುದು,” ಎಂದು ಅನ್ನುವವನೂ ನಾನೇ.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’” ಎಂಬುದಾಗಿ ಮಾತನಾಡುವವನು ನಾನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಕೋರೆಷನಿಗೆ ಇಂತೆನ್ನುವೆನು ನಾನು : ನನ್ನ ಮಂದೆ ಕಾಯುವವನು ನೀನು ನನ್ನ ಇಷ್ಟಾರ್ಥವನು ನೆರವೇರಿಸುವವನು ನೀನು; 'ಪುನಃ ನಿರ್ಮಾಣವಾಗುವೆ' ಎನ್ನುವೆ ಜೆರುಸಲೇಮಿಗೆ, ನೀನು; ‘ಪುನಃ ನಿನಗೆ ಅಸ್ತಿವಾರ ಹಾಕಿಸುವೆ’ ಎನ್ನುವೆ ಆ ದೇವಾಲಯಕೆ ನೀನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಮತ್ತು ಕೋರೆಷನ ವಿಷಯವಾಗಿ - ಅವನು ನನ್ನ ಮಂದೆ ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ ಎಂದು ಹೇಳಿ ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು ಎಂಬದಾಗಿ ಮಾತಾಡುವವನಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಸೈರಸನಿಗೆ ಯೆಹೋವನು ಹೀಗೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.” ಅಧ್ಯಾಯವನ್ನು ನೋಡಿ |
“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ. ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಸ್ವಂತನಾಡಿಗೆ ಹೋಗಬಹುದು. ದೇವರಾದ ಯೆಹೋವ ದೇವರು ಅವರ ಸಂಗಡ ಇರಲಿ!’ ” ಎಂದನು.