ಯೆಶಾಯ 45:10 - ಕನ್ನಡ ಸಮಕಾಲಿಕ ಅನುವಾದ10 ನೀನು ಹುಟ್ಟಿಸಿದ್ದು ಏಕೆ? ಎಂದು ತನ್ನ ತಂದೆಯನ್ನು ಕೇಳುವವನಿಗೂ, ‘ನೀನು ಹಡೆದದ್ದು ಏಕೆ?’ ಎಂದು ತಾಯಿಗೆ ಕೇಳುವವನಿಗೂ ಶಾಪ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ‘ನೀನು ಹುಟ್ಟಿಸುವುದೇನು’ ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! ‘ನೀನು ಹೆರುವುದೇನು’ ಎಂದು ಸ್ತ್ರೀಯನ್ನು ಕೇಳುವವನ ಗತಿ ಗತಿಯೇ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ‘ನೀನು ಹುಟ್ಟಿಸುವುದೇನು’ ಎಂದು ತಂದೆಯನು ಕೇಳುವವನಿಗೆ ಧಿಕ್ಕಾರ ! ‘ನೀನು ಹೆರುವುದೇನು’ ಎಂದು ತಾಯಿಯನು ಕೇಳುವವನಿಗೆ ಧಿಕ್ಕಾರ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನು ಹುಟ್ಟಿಸುವದೇನು ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನ ಗತಿ ಗತಿಯೇ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ತಂದೆಯು ಮಕ್ಕಳನ್ನು ಹುಟ್ಟಿಸುತ್ತಾನೆ. ಮಕ್ಕಳು ತಂದೆಯನ್ನು, ‘ನನಗೆ ಜೀವ ಯಾಕೆ ಕೊಟ್ಟೆ?’ ಎಂದು ಕೇಳಲಾಗುವುದಿಲ್ಲ. ಮಕ್ಕಳು ತಮ್ಮ ತಾಯಿಗೆ, ‘ನನ್ನನ್ನು ಯಾಕೆ ಹೆತ್ತದ್ದು ಎಂದು ಕೇಳಲಾಗುವುದಿಲ್ಲ.’” ಅಧ್ಯಾಯವನ್ನು ನೋಡಿ |
“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”